ನನ್ನ ಹೇಳಿಕೆಯಲ್ಲಿ ತಪ್ಪಾಗಿದೆ, ತಕ್ಷಣಕ್ಕೆ ಸಿಕ್ಕಿದ ಮಾಹಿತಿಯನ್ನು ಆಧರಿಸಿ ಹೇಳಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ ಯು ಟರ್ನ್!

ಆರಂಭದಲ್ಲಿ ಸಿಕ್ಕಿದ ಮಾಹಿತಿಯನ್ನು ಕೂಲಂಕಷವಾಗಿ ಪರಿಶೀಲಿಸದೆ ಆತುರವಾಗಿ ಹೇಳಿಕೆ ನೀಡಿದ್ದು ತಪ್ಪಾಗಿದೆ, ತಕ್ಷಣಕ್ಕೆ ಸಿಕ್ಕಿದ ಮಾಹಿತಿಯನ್ನು ಮಾಧ್ಯಮಗಳ ಮುಂದೆ ಹೇಳಿಬಿಟ್ಟೆ, ಈಗ ವಿಸ್ತೃತ ಮಾಹಿತಿ ಸಿಕ್ಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.

Published: 06th April 2022 12:33 PM  |   Last Updated: 06th April 2022 01:46 PM   |  A+A-


Home minister Araga Jnanendra

ಗೃಹ ಸಚಿವ ಆರಗ ಜ್ಞಾನೇಂದ್ರ

Online Desk

ಬೆಂಗಳೂರು: ಆರಂಭದಲ್ಲಿ ಸಿಕ್ಕಿದ ಮಾಹಿತಿಯನ್ನು ಕೂಲಂಕಷವಾಗಿ ಪರಿಶೀಲಿಸದೆ ಆತುರವಾಗಿ ಹೇಳಿಕೆ ನೀಡಿದ್ದು ತಪ್ಪಾಗಿದೆ, ತಕ್ಷಣಕ್ಕೆ ಸಿಕ್ಕಿದ ಮಾಹಿತಿಯನ್ನು ಮಾಧ್ಯಮಗಳ ಮುಂದೆ ಹೇಳಿಬಿಟ್ಟೆ, ಈಗ ವಿಸ್ತೃತ ಮಾಹಿತಿ ಸಿಕ್ಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಈ ಮೂಲಕ ಬೆಂಗಳೂರಿನ ಹಳೇಗುಡ್ಡದಹಳ್ಳಿಯಲ್ಲಿ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಾಗಿ ಹೇಳಿಕೆ ಕೊಟ್ಟು ವಿರೋಧ ಪಕ್ಷದ ನಾಯಕರ ಟೀಕೆಗೆ ಗುರಿಯಾದ ನಂತರ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಹಳೇಗುಡ್ಡದಹಳ್ಳಿಯಲ್ಲಿ ನಡೆದ ಯುವಕನ ಕೊಲೆಗೆ ಆತನಿಗೆ ಉರ್ದು ಮಾತನಾಡಲು ಬರದಕ್ಕೆ ಕೊಲೆ ನಡೆದಿದೆ ಎಂದು ಇಂದು ಬೆಳಗ್ಗೆ ಮಾತನಾಡುತ್ತಾ ಗೃಹ ಸಚಿವರು ಹೇಳಿದ್ದರು. ಆದರೆ ಪೊಲೀಸ್ ಇಲಾಖೆ ನೀಡಿದ ಹೇಳಿಕೆಯೇ ಬೇರೆಯಾಗಿತ್ತು. ಗೃಹ ಸಚಿವರೊಂದು ಹೇಳಿಕೆ, ಪೊಲೀಸರು ಮತ್ತೊಂದು ಹೇಳಿಕೆ ನೀಡುತ್ತಿದ್ದಾರಲ್ಲಾ ಎಂಬ ಗೊಂದಲ ಉಂಟಾಗಿತ್ತು. 

ಗೃಹ ಸಚಿವರು ನೀಡಿರುವ ಸ್ಪಷ್ಟನೆ ನೀಡಿದ್ದೇನು?: ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಕ್ಷಣದ ಮಾಹಿತಿ ಆಧರಿಸಿ ನಾನು ಹೇಳಿಕೆ ನೀಡಿದ್ದೆ. ನಾನು ನೀಡಿರುವ ಹೇಳಿಕೆ ತಪ್ಪಾಗಿದೆ. ಇದೀಗ ಪೊಲೀಸರು ವಿಸ್ತೃತವಾದ ಮಾಹಿತಿ ನೀಡಿದ್ದಾರೆ. ಬೈಕ್ ಡಿಕ್ಕಿಯಾಗಿ ಗಲಾಟೆಯಾಗಿ ಚಂದ್ರುಗೆ ಚೂರಿ ಇರಿತ ಆಗಿದೆ. ಆಸ್ಪತ್ರೆಗೆ ಹೋಗುವಷ್ಟರಲ್ಲಿ ರಕ್ತಸ್ರಾವವಾಗಿ ಚಂದ್ರು ಸಾವನ್ನಪ್ಪಿದ್ದಾರೆ. ಈ ಹಿಂದೆ ನಾನು ನೀಡಿದ್ದ ಹೇಳಿಕೆ ತಪ್ಪಾಗಿದೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಪ್ರಾಥಮಿಕ ಹಂತದ ತನಿಖೆಯಲ್ಲಿ ಆ ರೀತಿ ಇತ್ತು. ಅದಕ್ಕಾಗಿ ನಾನು ಆಗಲೇ ಆ ರೀತಿ ಹೇಳಿದ್ದೆ. ಈಗ ತನಿಖೆಯ ಸಂಪೂರ್ಣ ವರದಿ ಬಂದಿದೆ. ಆ ವರದಿಯಲ್ಲಿ ಅಪಘಾತದಲ್ಲಿ ವಿಷಯವಾಗಿ ಕೊಲೆಯಾಗಿದೆ ಎಂಬುದು ಗೊತ್ತಾಗಿದೆ. ಹೀಗಾಗಿ ಇದನ್ನು ಬಿಟ್ಟು ಬೇರೆ ಯಾವ ವಿಷಯಕ್ಕೂ ಆತನ ಕೊಲೆ‌ಯಾಗಿಲ್ಲ. ಗೃಹ ಸಚಿವನಾಗಿ ನಾನು ಸರಿಯಾಗಿ ಹೇಳಬೇಕಾಗುತ್ತದೆ. ಈಗ ಲೇಟೆಸ್ಟ್ ರಿಪೋರ್ಟ್ ಬಂದಿರುವ ಕಾರಣ, ಅದರಲ್ಲಿ ಅಪಘಾತಕ್ಕೆ ಕೊಲೆಯಾಗಿದೆ ಎಂಬುದು ಗೊತ್ತಾಗಿದೆ ಎಂದು ಹೇಳಿದ್ದಾರೆ.

ಪೊಲೀಸರು ಏನು ಹೇಳಿದ್ದಾರೆ?: ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಮಧ್ಯರಾತ್ರಿ (05.04.2022)ನಡೆದ ಕೊಲೆ ಪ್ರಕರಣ. ಸೈಮನ್ ರಾಜ್ ಮತ್ತು ಚಂದ್ರು ಇಬ್ಬರು ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುವಾಗ ಇವರ ಮತ್ತು ಶಾಹಿದ್ ಚಾಲನೆ ಮಾಡುತ್ತಿದ್ದ ಮತ್ತೊಂದು ಬೈಕುಗಳ ಪರಸ್ಪರ ತಗುಲಿದ ವಿಷಯವು ಗಲಾಟೆಗೆ ಕಾರಣವಾಗಿದೆ.

ಈ ಗಲಾಟೆಗೆ ಇತರರು ಸೇರಿಕೊಂಡಿರುತ್ತಾರೆ.ಗಲಾಟೆಯ ಸಂದರ್ಭದಲ್ಲಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿರುತ್ತಾರೆ.ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದು,ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ & ತನಿಖೆ ಮುಂದುವರೆದಿದೆ ಎಂದು ಹೇಳಿದ್ದಾರೆ. 

ಅಜ್ಞಾನ ಜ್ಞಾನೇಂದ್ರ?: ಕಳೆದ ವರ್ಷ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಿದ್ದ ಸಂದರ್ಭದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಿ ಗೃಹ ಸಚಿವರು ತೀವ್ರ ವಿವಾದಕ್ಕೀಡಾಗಿದ್ದರು. ಇನ್ನು ಕೆಲವು ಸಂದರ್ಭದಲ್ಲಿ ಗೃಹ ಸಚಿವರ ಕಾರ್ಯವೈಖರಿ, ಹೇಳಿಕೆ ಬಗ್ಗೆ ತೀವ್ರ ವಿವಾದವುಂಟಾಗಿತ್ತು.

ಇದನ್ನೂ ಓದಿ: ಬೆಂಗಳೂರು ಯುವಕನ ಹತ್ಯೆ ಪ್ರಕರಣಕ್ಕೆ ತಿರುವು: ಉರ್ದು ಮಾತನಾಡಲು ಬರದ್ದಕ್ಕೆ ಕೊಲೆ ನಡೆದಿದೆ!

ಇದೀಗ ಇಂದು ಅಂತಹದ್ದೇ ಅಜ್ಞಾನ, ಬೇಜವಾಬ್ದಾರಿಯ ನಡೆಯನ್ನು ಗೃಹ ಸಚಿವರು ಪ್ರದರ್ಶಿಸಿದ್ದು ರಾಜ್ಯದ ಗೃಹ ಸಚಿವರಾಗಿ ಈ ರೀತಿ ಬೇಜವಬ್ದಾರಿ ಹೇಳಿಕೆಗಳನ್ನು ನೀಡುವುದು ಸರಿಯೇ, ಅವರು ಗೃಹ ಸಚಿವ ಸ್ಥಾನದಲ್ಲಿ ಮುಂದುವರಿಯಲು ಅರ್ಹರೇ ಎಂಬ ಪ್ರಶ್ನೆ ಎದ್ದಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಗೃಹ ಸಚಿವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. 

ಪ್ರತಿಕ್ರಿಯಿಸಲು ಕಮಿಷನರ್ ಕಮಲ್ ಪಂತ್ ನಕಾರ: ಇನ್ನು ಗೃಹ ಸಚಿವರು ಮೊದಲೊಂದು ಹೇಳಿಕೆ, ಆಮೇಲೆ ಸ್ಪಷ್ಟನೆಯಿಂದ ಪೊಲೀಸ್ ಇಲಾಖೆಗೆ ಮುಜುಗರ ಉಂಟಾಗಿದೆಯೇ ಎಂಬ ಸಂಶಯ ಕಾಡುತ್ತಿದೆ. ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ಸುದ್ದಿಗಾರರು ಈ ಬಗ್ಗೆ ಪ್ರಶ್ನಿಸಿದಾಗ ಪ್ರತಿಕ್ರಿಯಿಸದೆ ಹೊರಟು ಹೋದರು.

ವಿವರ ತಿಳಿದುಕೊಂಡು ಪ್ರತಿಕ್ರಿಯಿಸುತ್ತೇನೆ: ಇನ್ನು ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹೊರಬಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಬೆಂಗಳೂರಿನ ಜೆಜೆ ನಗರದಲ್ಲಿ ಯುವಕ ಚಂದ್ರು ಕೊಲೆ ಪ್ರಕರಣದ ಬಗ್ಗೆ ಮಾಹಿತಿಯಿಲ್ಲ, ಕೇಸು ವಿವರ ಪಡೆದು ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿರುವ ಹೇಳಿಕೆಯ ವಿವರ ಪಡೆದು ಪ್ರತಿಕ್ರಿಯಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 


Stay up to date on all the latest ರಾಜ್ಯ news
Poll
mallikarjuna kharge

ರಾಜಸ್ತಾನದಲ್ಲಿ ಪೈಲಟ್-ಗೆಹ್ಲೋಟ್ ನಡುವೆ ಬಿಕ್ಕಟ್ಟು; ಕೇರಳದಲ್ಲಿ ಸ್ವಪಕ್ಷದವರ ವಿರುದ್ಧ ತರೂರ್ ಫೈಟು: ಕಾಂಗ್ರೆಸ ಒಳಜಗಳ ಬಿಡಿಸಲು ಮಲ್ಲಿಕಾರ್ಜುನ ಖರ್ಗೆ ಗೆ ಸಾಧ್ಯವಾಗುವುದೇ?


Result
ಹೌದು
ಆಗದು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp