ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರ ದುರ್ಮರಣ
ತಾಲ್ಲೂಕಿನ ಮಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಕ್ಕೆ ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.
Published: 08th April 2022 10:49 AM | Last Updated: 08th April 2022 10:49 AM | A+A A-

ಸಾಂದರ್ಭಿಕ ಚಿತ್ರ
ಚಿತ್ರದುರ್ಗ: ತಾಲ್ಲೂಕಿನ ಮಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಕ್ಕೆ ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.
ಬೈಕಿನಲ್ಲಿದ್ದ ನಾಗರಾಜ (40), ಮುಮ್ತಾಜ್ (35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬುಲೆರೊ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ.
ನಾಗರಾಜ ಹಾಗೂ ಮುಮ್ತಾಜ್ ಅವರು ಶುಕ್ರವಾರ ನಸುಕಿನಲ್ಲಿ ಜಿ.ಆರ್ ಹಳ್ಳಿಯ ದರ್ಗಾಕ್ಕೆ ಭೇಟಿ ನೀಡಿ ಚಿತ್ರದುರ್ಗಕ್ಕೆ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.