
ಸಾಂದರ್ಭಿಕ ಚಿತ್ರ
ರಾಮನಗರ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ ರೌಡಿಶೀಟರ್ ಸಾವನ್ನಪ್ಪಿರುವ ಘಟನೆ ರಾಮನಗರದ ಬಸವನಪುರ ಗ್ರಾಮದ ಬಳಿ ಘಟನೆ ನಡೆದಿದೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ದಿಲೀಪ್(28) ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಸುಂಕದಕಟ್ಟೆ ನಿವಾಸಿ ದಿಲೀಪ್ ತನ್ನ ಸಹಚರರ ಜೊತೆ ಕಾರಿನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ.
ಈ ವೇಳೆ ಬಸವನಪುರ ಗ್ರಾಮದ ಬಳಿ ಕಾರು ತಡೆದು ಪೊಲೀಸರಿಂದ ತಪಾಸಣೆ ಮಾಡಲಾಗಿದೆ. ಈ ವೇಳೆ ಕಾರಿನಿಂದ ತಪ್ಪಿಸಿಕೊಂಡು ಹೋಗಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ರಾಮನಗರ ಎಸ್ ಪಿ ಸಂತೋಷ್ ಬಾಬು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕಾರಿನಲ್ಲಿ ಇದ್ದ ಮೂವರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ಆದರೆ, ಪೊಲೀಸರು ದಿಲೀಪ್ ಮೇಲೆ ನಿಗಾ ಇಟ್ಟಿದ್ದಾರೋ ಅಥವಾ ಬಂಧನಕ್ಕೆ ಒಳಗಾಗುವ ಭೀತಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೋ ಎಂಬುದು ಇನ್ನೂ ತಿಳಿದುಬಂದಿಲ್ಲ.