2ಎ ಮೀಸಲಾತಿಗೆ ಆಗ್ರಹ: ಸರ್ಕಾರಕ್ಕೆ ಏ.14ಕ್ಕೆ ಹೊಸ ಗಡುವು ನೀಡಿದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ
ಏ.14ರೊಳಗೆ 2ಎ ಮೀಸಲಾತಿ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವ ಜಯ ಮೃತ್ಯುಂಜಯ ಸ್ವಾಮಿಗಳು ಸರ್ಕಾರಕ್ಕೆ ಅಂತಿಮ ಗಡುವು ನೀಡಿದ್ದಾರೆ.
Published: 09th April 2022 11:45 AM | Last Updated: 09th April 2022 12:30 PM | A+A A-

ಬಸವ ಜಯ ಮೃತ್ಯುಂಜಯ ಸ್ವಾಮಿ
ವಿಜಯಪುರ: ಏ.14ರೊಳಗೆ 2ಎ ಮೀಸಲಾತಿ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವ ಜಯ ಮೃತ್ಯುಂಜಯ ಸ್ವಾಮಿಗಳು ಸರ್ಕಾರಕ್ಕೆ ಅಂತಿಮ ಗಡುವು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಕಳೆದ ಒಂದೂವರೆ ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೆ, ಅದರಿಂದ ಯಾವುದೇ ಪ್ರಯೋಜನಗಳಾಗಿಲ್ಲ. ಸರಕಾರ ಕೇವಲ ಆಶ್ವಾಸನೆಗಳನ್ನು ನೀಡಿ ಮಾತು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ನಮ್ಮ ಒಗ್ಗಟ್ಟನ್ನು ಹಾಳು ಮಾಡದಿರಿ: ರಾಜಕೀಯ ನಾಯಕರಿಗೆ ಜಯಮೃತ್ಯುಂಜಯ ಶ್ರೀ ಎಚ್ಚರಿಕೆ
ಇದೀಗ ನಮಗೆ ಸರ್ಕಾರದ ಮೇಲೆ ಯಾವುದೇ ನಂಬಿಕೆಯಿಲ್ಲ. ಇದೀಗ ಸರ್ಕಾರಕ್ಕೆ ಮತ್ತೊಂದು ಗಡುವು ನೀಡುತ್ತಿದ್ದೇವೆ. ಏಪ್ರಿಲ್ 14ರೊಳಗಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದ್ದೇ ಆದರೆ, ಈ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವವರೆಗೂ ಪ್ರತಿಭಟನೆ ನಡೆಸುತ್ತೇವೆಂದು ಎಚ್ಚರಿಸಿದ್ದಾರೆ.