ಜಾಗತಿಕ ಹೂಡಿಕೆದಾರರ ಸಭೆ 2022: ಚೆನ್ನೈ, ಹೈದರಾಬಾದ್‌ನಲ್ಲಿ ಕರ್ನಾಟಕ ರೋಡ್‌ಶೋ ನಡೆಸಲಿದೆ- ಸಚಿವ ನಿರಾಣಿ

ನೆರೆಯ ರಾಜ್ಯಗಳು ಕರ್ನಾಟಕದ ಹೂಡಿಕೆದಾರರನ್ನು ಸೆಳೆಯಲು ಪ್ರಯತ್ನಿಸುತ್ತಿರುವಾಗ ಮತ್ತು ವಿರೋಧ ಪಕ್ಷಗಳು ಹೂಡಿಕೆ ಹರಿವಿನ ಮೇಲೆ ಪರಿಣಾಮ ಬೀರುವ ಕೋಮು ವಿವಾದಗಳ ಕುರಿತು ಕಳವಳ ವ್ಯಕ್ತಪಡಿಸುತ್ತಿರುವಂತೆಯೇ...

Published: 11th April 2022 08:03 AM  |   Last Updated: 11th April 2022 11:53 AM   |  A+A-


Murugesh Nirani, Industries Minister

ಸಚಿವ ಮುರುಗೇಶ್ ನಿರಾಣಿ

The New Indian Express

ಬೆಂಗಳೂರು: ನೆರೆಯ ರಾಜ್ಯಗಳು ಕರ್ನಾಟಕದ ಹೂಡಿಕೆದಾರರನ್ನು ಸೆಳೆಯಲು ಪ್ರಯತ್ನಿಸುತ್ತಿರುವಾಗ ಮತ್ತು ವಿರೋಧ ಪಕ್ಷಗಳು ಹೂಡಿಕೆ ಹರಿವಿನ ಮೇಲೆ ಪರಿಣಾಮ ಬೀರುವ ಕೋಮು ವಿವಾದಗಳ ಕುರಿತು ಕಳವಳ ವ್ಯಕ್ತಪಡಿಸುತ್ತಿರುವಂತೆಯೇ, ಕರ್ನಾಟಕ ಕೈಗಾರಿಕಾ ಇಲಾಖೆಯು ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೂ ಮುನ್ನ ನವೆಂಬರ್ ತಿಂಗಳಿನಲ್ಲಿ ಹೈದರಾಬಾದ್, ಚೆನ್ನೈ ಮತ್ತು ಇತರ ನಗರಗಳಲ್ಲಿ ರೋಡ್ ಶೋ ನಡೆಸಲು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ. 

ಈ ಕುರಿತು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಮಾಹಿತಿ ನೀಡಿದ್ದು, ಜಾಗತಿಕ ಹೂಡಿಕೆದಾರರ ಸಭೆ (ಜಿಮ್‌)ಗಾಗಿ ಸಿದ್ಧತೆಗಳು ನಡೆಯುತ್ತಿವೆ. ನಮ್ಮ ಇಲಾಖೆ ಮತ್ತು ಹಿರಿಯ ಅಧಿಕಾರಿಗಳು ಕೇಂದ್ರ ಮತ್ತು ಪ್ರಮುಖ ವಿದೇಶಗಳಲ್ಲಿನ ಭಾರತೀಯ ರಾಯಭಾರಿ ಕಚೇರಿಗಳ ಸಮನ್ವಯದೊಂದಿಗೆ ಕೆಲಸ ಮಾಡುತ್ತಿದ್ದಾರೆ ಮತ್ತು ಈ ನಿಟ್ಟಿನಲ್ಲಿ ಯಾವುದೇ ಪ್ರಯತ್ನಗಳೂ ವ್ಯರ್ಥವಾಗಲು ಬಿಡುತ್ತಿಲ್ಲ. ಈ ವರ್ಷದ ಜಾಗತಿಕ ಹೂಡಿಕೆದಾರರ ಸಮಾವೇಶವು ಜಾಗತಿಕ ಉತ್ಪಾದನಾ ಕೇಂದ್ರವಾಗಿ ರಾಜ್ಯದ ಸ್ಥಾನವನ್ನು ಪ್ರತಿಬಿಂಬಿಸಲು "ಬಿಲ್ಡ್ ಫಾರ್ ದಿ ವರ್ಲ್ಡ್" ಎಂಬ ವಿಷಯದ ಅಡಿಯಲ್ಲಿ ಇರಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೂಡಿಕೆದಾರರು, ಕೈಗಾರಿಕೋದ್ಯಮಿಗಳು ಕರ್ನಾಟಕ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ: ಸಚಿವ ಮುರುಗೇಶ್ ನಿರಾಣಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ‘ಇನ್ವೆಸ್ಟ್ ಕರ್ನಾಟಕ’ಕ್ಕೆ ಚಾಲನೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 2 ರಂದು ಜಿಐಎಂ ಅನ್ನು ಉದ್ಘಾಟಿಸುವ ನಿರೀಕ್ಷೆಯಿದೆ. 

“ರಾಜ್ಯದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಲಭ್ಯವಿರುವ ಹೂಡಿಕೆ ಅವಕಾಶಗಳನ್ನು ವಿವರಿಸುವ ಮಾರ್ಗಸೂಚಿಯನ್ನು ನಾವು ಸಿದ್ಧಪಡಿಸಿದ್ದೇವೆ. ಈ ಬೃಹತ್ ವ್ಯಾಪಾರ ಶೃಂಗಸಭೆಯನ್ನು ನಡೆಸಲು ಹಲವಾರು ವಿದೇಶಗಳು ಮತ್ತು ಖಾಸಗಿ ಸಂಸ್ಥೆಗಳೊಂದಿಗೆ ಕೈಜೋಡಿಸಿದ್ದೇವೆ. ಕೆಲವರು ಈಗಾಗಲೇ ಪಾಲುದಾರ ರಾಷ್ಟ್ರಗಳಾಗಲು ಬದ್ಧರಾಗಿದ್ದಾರೆ ಮತ್ತು ಮತ್ತಷ್ಟು ದೇಶಗಳು ನಮ್ಮೊಂದಿಗೆ ಪಾಲುದಾರರಾಗಲು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. 

ಹೂಡಿಕೆದಾರರ ಸಮೇವೇಶ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯಗಳಲ್ಲಿ ರೋಡ್‌ಶೋಗಳನ್ನು ನಡೆಸುತ್ತೇವೆ. ಮುಂಬೈ, ನವದೆಹಲಿ, ಹೈದರಾಬಾದ್, ಚೆನ್ನೈ ಮತ್ತು ಇತರ ನಗರಗಳಲ್ಲಿ ರೋಡ್‌ಶೋಗಳನ್ನು ನಡೆಸಲಾಗುವುದು ಎಂದರು.


Stay up to date on all the latest ರಾಜ್ಯ news
Poll
MoE to launch bachelor degree programme for Agniveers

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಸರಿಯಾಗಿ ಯೋಜಿಸಲಾಗಿಲ್ಲ ಎಂಬ ಟೀಕೆಗಳನ್ನು ನೀವು ಒಪ್ಪುತ್ತೀರಾ?


Result
ಹೌದು
ಇಲ್ಲ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • Vinayaka S

    Saayabre modlu bangalore na raste sari maadsi, Yaaru ista padolla intha infrastructure idre blore ge baroke
    2 months ago reply
flipboard facebook twitter whatsapp