ಬೆಂಗಳೂರು ಅಭಿವೃದ್ಧಿಗೆ ನಾನಾ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ: ಸಿಎಂ ಬೊಮ್ಮಾಯಿ
ಬೆಂಗಳೂರನ್ನು ಅಂತರಾಷ್ಟ್ರೀಯ ನಗರವಾಗಿ ಅಭಿವೃದ್ಧಿಪಡಿಸಲಾಗಿದೆ ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಮೃತ ನಗರೋತ್ಥಾನ ಯೋಜನೆಯಡಿ ನಗರದ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.
Published: 11th April 2022 07:44 AM | Last Updated: 11th April 2022 01:42 PM | A+A A-

ಸಿಎಂ ಬೊಮ್ಮಾಯಿ
ಬೆಂಗಳೂರು: ಬೆಂಗಳೂರನ್ನು ಅಂತರಾಷ್ಟ್ರೀಯ ನಗರವಾಗಿ ಅಭಿವೃದ್ಧಿಪಡಿಸಲಾಗಿದೆ ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಮೃತ ನಗರೋತ್ಥಾನ ಯೋಜನೆಯಡಿ ನಗರದ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪದ್ಮನಾಭನಗರ ಕ್ಷೇತ್ರದ ವಾಜಪೇಯಿ ಆಟದ ಮೈದಾನದಲ್ಲಿ ರವಿವಾರ ಹಮ್ಮಿಕೊಂಡಿದ್ದ ಜಾನಪದ ಜಾತ್ರೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.
ಇದನ್ನೂ ಓದಿ: ಆಕ್ರೋಶ: ಬೆಂಗಳೂರಿನ ದುಸ್ಥಿತಿ ಕುರಿತು ಮೋಹನ್ದಾಸ್ ಪೈ ಅಸಮಾಧಾನ: ವ್ಯಾಪಕ ದುರಸ್ತಿ ಕಾಮಗಾರಿ ನಡೆಯುತ್ತೆ ಎಂದ ಬೊಮ್ಮಾಯಿ
ಬೆಂಗಳೂರು ಅಂತರಾಷ್ಟ್ರೀಯ ನಗರವಾಗಿ ಅಭಿವೃದ್ಧಿಗೊಂಡಿದೆ. ಅಮೃತ ನಗರೋತ್ಥಾನ ಯೋಜನೆಯಡಿ ನಗರದ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಬೆಂಗಳೂರು ಸುಂದರ ನಗರವಾಗಿದೆ, ಐಟಿ, ಬಿಟಿಯ ಜಾಗತಿಕ ಕೇಂದ್ರವಾಗಿದೆ ಮತ್ತು ಆರ್ಥಿಕ ರಾಜಧಾನಿಯಾಗಿಯೂ ಹೊರಹೊಮ್ಮುತ್ತಿದೆ ಎಂದು ಹೇಳಿದರು.
ಆರ್ಥಿಕ ಕ್ಷೇತ್ರದಲ್ಲಿ ಕೂಡ ಅಭಿವೃದ್ಧಿ ಹೊಂದುತ್ತಿರುವ ನಗರವಾಗಿ ಬೆಂಗಳೂರು ಬೆಳೆಯುತ್ತಿದ್ದು, ವಿಶ್ವದ ಗಮನ ಸಳೆಯುತ್ತಿದೆ. ಹೂಡಿಕೆದಾರರರು ಬಂಡಾಳ ಹೂಡಲು ಆಸಕ್ತಿ ತೋರಿದ್ದಾರೆ. ಶೇ. 47ರಷ್ಟು ಎಫ್ಡಿಐ ಕರ್ನಾಟಕ್ಕೆ ಬಂದಿದೆ ಎಂದು ತಿಳಿಸಿದರು.