ಕೊಳಗೇರಿ ಪ್ರದೇಶದ 60 ಫಲಾನುಭವಿಗಳಿಗೆ ಮನೆ ಹಸ್ತಾಂತರ ಪ್ರಕ್ರಿಯೆಗೆ ಸಿಎಂ ಬೊಮ್ಮಾಯಿ ಚಾಲನೆ
ಬೆಂಗಳೂರು ಮಲ್ಲೇಶ್ವರ ಕ್ಷೇತ್ರ ವ್ಯಾಪ್ತಿಯ ವಾರ್ಡ್ 45ರ ಪಟೇಲ್ ಭೈರಹನುಮಯ್ಯ ಕೊಳೆಗೇರಿಯ ಫಲಾನುಭವಿಗಳಿಗೆ ಬಹುಮಹಡಿಯಲ್ಲಿ ಕಟ್ಟಲಾಗಿರುವ 60 ಮನೆಗಳನ್ನು ಹಸ್ತಾಂತರಿಸುವ ಪ್ರಕ್ರಿಯೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಚಾಲನೆ ನೀಡಿದರು.
Published: 15th April 2022 09:17 AM | Last Updated: 15th April 2022 01:23 PM | A+A A-

ಸಿಎಂ ಬೊಮ್ಮಾಯಿ
ಬೆಂಗಳೂರು: ಬೆಂಗಳೂರು ಮಲ್ಲೇಶ್ವರ ಕ್ಷೇತ್ರ ವ್ಯಾಪ್ತಿಯ ವಾರ್ಡ್ 45ರ ಪಟೇಲ್ ಭೈರಹನುಮಯ್ಯ ಕೊಳೆಗೇರಿಯ ಫಲಾನುಭವಿಗಳಿಗೆ ಬಹುಮಹಡಿಯಲ್ಲಿ ಕಟ್ಟಲಾಗಿರುವ 60 ಮನೆಗಳನ್ನು ಹಸ್ತಾಂತರಿಸುವ ಪ್ರಕ್ರಿಯೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಚಾಲನೆ ನೀಡಿದರು.
ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ 131ನೇ ಜಯಂತ್ಯುತ್ಸವದ ಅಂಗವಾಗಿ ಬಿಬಿಎಂಪಿ ವತಿಯಿಂದ ಯಶವಂತಪುರದ ಸಂವಿಧಾನ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ ಬೊಮ್ಮಾಯಿಯವರು, ರೂ.5.5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ 60 ಮನೆಗಳಿರುವ ಬಹುಮಹಡಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿದರು.
ಇದನ್ನೂ ಓದಿ: ಸುಪ್ರೀಂ ಕೋರ್ಟ್ ಆದೇಶದಂತೆ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ: ಸಿಎಂ ಬೊಮ್ಮಾಯಿ
ಈ ವೇಳೆ ಮಾತನಾಡಿದ ಬೊಮ್ಮಾಯಿಯವರು, ಮೊದಲ ಹಂತದಲ್ಲಿ 5.5 ಕೋಟಿ ರೂ.ವೆಚ್ಚದಲ್ಲಿ 60 ಮನೆಗಳನ್ನು ನಿರ್ಮಿಸಲಾಗುತ್ತದೆ. ಎರಡನೇ ಹಂತದಲ್ಲಿ ರೂ.4 ಕೋಟಿ ವೆಚ್ಚದಲ್ಲಿ 44 ಮನೆಗಳನ್ನು ನಿರ್ಮಾಣ ಮಾಡಲಾಗುತ್ತದೆ. 19.2 ಕೋಟಿ ರೂ ವೆಚ್ಚದಲ್ಲಿ ಯಶವಂತಪುರದಲ್ಲಿ ರೈಲ್ವೆ ಮೇಲ್ಸೇತುವೆ, ರೂ. 15 ಕೋಟಿ ವೆಚ್ಚದಲ್ಲಿ ರೈಲ್ವೆ ಲೆವೆಲ್ ಕ್ರಾಸಿಂಗ್ಗೆ ಮತ್ತು 5 ಕೋಟಿ ವೆಚ್ಚದಲ್ಲಿ ಮಲ್ಲೇಶ್ವರಂ 18ನೇ ಕ್ರಾಸ್ನಲ್ಲಿ ಪಾದಚಾರಿ ಸುರಂಗ ಮಾರ್ಗ ನಿರ್ಮಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.