ದೇಗುಲದ ಆವರಣದಲ್ಲಿ ವ್ಯಾಪಾರ ನಡೆಸಲು ಯಾರಿಗೂ ಅವಕಾಶವಿಲ್ಲ: ನುಗ್ಗೇಕೇರಿ ಹನುಮ ದೇವಾಲಯದ ಆಡಳಿತ ಮಂಡಳಿ
ನುಗ್ಗೇಕೇರಿ ಹನುಮಾನ ದೇಗುಲದ ಆವರಣದಲ್ಲಿ ವ್ಯಾಪಾರಕ್ಕೆ ಅನುಮತಿ ನೀಡಬೇಕೋ ಬೇಡವೋ ಎಂಬ ವಿಚಾರದಲ್ಲಿ ಇಕ್ಕಟ್ಟಿಗೆ ಸಿಲುಕಿದ್ದ ದೇವಾಲಯದ ಆಡಳಿತ ಮಂಡಳಿಯ ಅಧಿಕಾರಿಗಳು, ಕೊನೆಗೂ ಅಂತಿಮ ನಿರ್ಧಾರಕ್ಕೆ ಬಂದಿದ್ದು, ಯಾರಿಗೂ ಅನುಮತಿ ನೀಡದಿರಲು ನಿರ್ಧರಿಸಿದೆ.
Published: 15th April 2022 01:36 PM | Last Updated: 15th April 2022 01:46 PM | A+A A-

ಸಂಗ್ರಹ ಚಿತ್ರ
ಧಾರವಾಡ: ನುಗ್ಗೇಕೇರಿ ಹನುಮಾನ ದೇಗುಲದ ಆವರಣದಲ್ಲಿ ವ್ಯಾಪಾರಕ್ಕೆ ಅನುಮತಿ ನೀಡಬೇಕೋ ಬೇಡವೋ ಎಂಬ ವಿಚಾರದಲ್ಲಿ ಇಕ್ಕಟ್ಟಿಗೆ ಸಿಲುಕಿದ್ದ ದೇವಾಲಯದ ಆಡಳಿತ ಮಂಡಳಿಯ ಅಧಿಕಾರಿಗಳು, ಕೊನೆಗೂ ಅಂತಿಮ ನಿರ್ಧಾರಕ್ಕೆ ಬಂದಿದ್ದು, ಯಾರಿಗೂ ಅನುಮತಿ ನೀಡದಿರಲು ನಿರ್ಧರಿಸಿದೆ.
ಮುಸ್ಲಿಂ ವ್ಯಾಪಾರಿಯ ಹಣ್ಣಿನ ಅಂಗಡಿಯನ್ನು ಧ್ವಂಸಗೊಳಿಸಿದ್ದ ಘಟನೆಯ ಬಳಿಕ, ಮುಸ್ಲಿಂ ಮುಖಂಡರು ದೇವಾಲಯದ ಆಡಳಿತವನ್ನು ಭೇಟಿ ಮಾಡಿ ತಮ್ಮ ಸಮುದಾಯಕ್ಕೆ ವ್ಯಾಪಾರ ನಡೆಸಲು ಸ್ಥಳ ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು.
ಇದೇ ವೇಳೆ ಹಿಂದೂಪರ ಕಾರ್ಯಕರ್ತರು ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದ್ದರು. ಈ ನಡುವೆ ಬರುವ ಶನಿವಾರ ಹನುಮ ಜಯಂತಿ ಇದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ದೇವಾಲಯದ ಆಡಳಿತ ಮಂಡಳಿ ಇಕ್ಕಟ್ಟಿಗೆ ಸಿಲುಕಿಕೊಂಡಿದ್ದರು.
ಇದನ್ನೂ ಓದಿ: ನುಗ್ಗೆಕೇರಿಯ ಹನುಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮುಸ್ಲಿಂ ಸಂಘಟನೆ ಕಾರ್ಯಕರ್ತರು!
ಭಕ್ತಾದಿಗಳಿಗೆ ಹಾಗೂ ಸಣ್ಣ ವ್ಯಾಪಾರಸ್ಥರಿಗೆ ಅನುಕೂಲವಾಗಲೆಂದು ದೇವಾಲಯದ ಆವರಣದಲ್ಲಿ ವ್ಯಾಪಾರ ವಹಿವಾಟಿಗೆ ಸ್ಥಳಾವಕಾಶ ಕಲ್ಪಿಸಲಾಗಿತ್ತು. ಇದೀಗ ಪರಿಸ್ಥಿತಿ ಬೇರೆಯ ಹಾದಿ ಹಿಡಿಯುತ್ತಿದ್ದು, ಶಾಂತಿ ಕಾಪಾಡುವ ದೃಷ್ಟಿಯಿಂದ ವ್ಯಾಪಾರ ವಹಿವಾಟಿಗೆ ಅವಕಾಶ ನೀಡದಿರಲು ನಿರ್ಧರಿಸಲಾಗಿದೆ ಎಂದು ನುಗ್ಗೇಕೇರಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರೊಬ್ಬರು ಹೇಳಿದ್ದಾರೆ.
ಧರ್ಮದ ಹೆಸರಿನಲ್ಲಿ ಜಗಳ ಮಾಡುವ ಅಗತ್ಯವಿಲ್ಲ. ದೇವಾಲಯದ ಪ್ರದೇಶವು ಸುಮಾರು ಮೂರು ಎಕರೆಗಳಷ್ಟಿದೆ. ಆದರೆ, ಇಲ್ಲಿ ಯಾವುದೇ ರೀತಿಯ ವ್ಯಾಪಾರಕ್ಕೆ ಯಾರಿಗೂ ಅವಕಾಶ ನೀಡುವುದಿಲ್ಲ. ಇದೇ ಸಂದೇಶವನ್ನು ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳಿಗೂ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.