ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ, ಸಿಐಡಿಯಿಂದ ಆರು ಮಂದಿ ಆರೋಪಿಗಳ ಬಂಧನ
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮೂವರು ಮಹಿಳಾ ಮೇಲ್ವಿಚಾರಕರು ಸೇರಿದಂತೆ ಆರು ಮಂದಿಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಬಂಧಿಸಿರುವುದಾಗಿ ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ.
Published: 16th April 2022 08:45 PM | Last Updated: 16th April 2022 08:45 PM | A+A A-

ಸಾಂದರ್ಭಿಕ ಚಿತ್ರ
ಕಲಬುರಗಿ: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮೂವರು ಮಹಿಳಾ ಮೇಲ್ವಿಚಾರಕರು ಸೇರಿದಂತೆ ಆರು ಮಂದಿಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಬಂಧಿಸಿರುವುದಾಗಿ ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ.
ಜ್ಞಾನಜ್ಯೋತಿ ಇಂಗ್ಲೀಷ್ ಮಾಧ್ಯಮ ಶಾಲೆಯ ಮೇಲ್ವಿಚಾರಕಿ ಸುಮಾ, ಸಿದ್ದಮ್ಮ ಮತ್ತು ಸಾವಿತ್ರಿ, ಕಲಬುರಗಿ ತಾಲೂಕಿನ ಹಲ್ ಸುಲ್ತಾನ್ ಪುರ ಗ್ರಾಮದ ಅರುಣ್ ಪಾಟೀಲ್ , ಆಳಂದ ತಾಲೂಕಿನ ನಂದಗಾಂವ್ ಮತ್ತು ರಾಯಚೂರು ಜಿಲ್ಲೆಯ ಪ್ರವೀಣ್ ಕುಮಾರ್ ಕೆ ಬಂಧಿತ ಆರೋಪಿಗಳಾಗಿದ್ದಾರೆ.
ಎಲ್ಲಾ ಆರು ಆರೋಪಿಗಳನ್ನು ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಗಿದೆ. ಮತ್ತೋರ್ವ ಆರೋಪಿ ಸೆಡಂ ಪೊಲೀಸ್ ಠಾಣೆಯ ಮುಖ್ಯ ಪೇದೆಯ ಪುತ್ರ ವೀರೇಶ ನಿಡಗುಂದ ಅವರನ್ನು ಬೆಂಗಳೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಕಳೆದ ವರ್ಷ ಅಕ್ಟೋಬರ್ ನಲ್ಲಿ 545 ಪಿಸಿಐ ನೇಮಕಾತಿಗಾಗಿ ಸಿಇಟಿ ಪರೀಕ್ಷೆ ಇಲ್ಲಿ ನಡೆದಿತ್ತು. ವ್ಯಾಪಕ ರೀತಿಯ ಅಕ್ರಮದ ಆರೋಪದ ನಂತರ ಸಿಐಡಿಗೆ ಪ್ರಕರಣವನ್ನು ಹಸ್ತಾಂತರಿಸಲಾಗಿತ್ತು. ಕಲಬುರಗಿಯ ಚೌಕ್ ಠಾಣೆಯಲ್ಲಿ ಸಿಐಡಿ ಪ್ರಕರಣ ದಾಖಲಿಸಿತ್ತು. ಕೆಲ ದಿನಗಳ ಹಿಂದೆ ವೀರೇಶ್ ನನ್ನು ಬಂಧಿಸಲಾಗಿತ್ತು. ಶನಿವಾರ ಇತರ ಆರು ಮಂದಿಯನ್ನು ಬಂಧಿಸಲಾಗಿದೆ.