ಪ್ರಚೋದನಕಾರಿ ಪೋಸ್ಟ್: ಬಸ್, ಪೊಲೀಸರ ಮೇಲೆ ಕಲ್ಲು ತೂರಾಟ, ಹಳೇ ಹುಬ್ಬಳ್ಳಿಯಲ್ಲಿ ಪರಿಸ್ಥಿತಿ ಉದ್ವಿಗ್ನ
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ. ಹಳೇ ಹುಬ್ಭಳ್ಳಿಯಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ ಸಂಭವಿಸಿತ್ತು.
Published: 17th April 2022 08:19 AM | Last Updated: 17th April 2022 09:01 AM | A+A A-

ಹುಬ್ಬಳ್ಳಿ ಹಿಂಸಾಚಾರ
ಹುಬ್ಬಳ್ಳಿ: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ. ಹಳೇ ಹುಬ್ಭಳ್ಳಿಯಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ ಸಂಭವಿಸಿತ್ತು.
ಉದ್ರಿಕ್ತರ ಗುಂಪು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು, ನಂತರ ಬಸ್ಸು ಮತ್ತು ಮತ್ತಿತರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಇನ್ಸ್ ಪೆಕ್ಟರ್ ಸೇರಿ ಇಬ್ಬರು ಪೊಲೀಸರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
Police resort to caning and fire in the air after protests erupts. A youth #Hubballi was arrested after he posted a picture of saffron flag atop a mosque. @NewIndianXpress @XpressBengaluru @KannadaPrabha @Hubballi_Infra @HubliCityeGroup @Namma_HD @hublimandi @karnatakacom pic.twitter.com/W3Ocij3w0Q
— Amit Upadhye (@Amitsen_TNIE) April 17, 2022
ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಹಾಗೂ ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ತಡರಾತ್ರಿ 1 ಗಂಟೆವರೆಗೂ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ಹಿಂಬಾಗದ ಪ್ರದೇಶದಲ್ಲಿ ಕಿಡಿಕೇಡಿಗಳು ಕಲ್ಲುತೂರಾಟ ನಡೆಸಿ ಪ್ರತಿಭಟನೆ ಮುಂದುವರಿಸಿದ್ದರು. ಪರಿಸ್ಥಿತಿ ಕೈಮೀರುವ ಸೂಕ್ಷ್ಮತೆ ಅರಿತ ಅಧಿಕಾರಿಗಳು ನಗರದಲ್ಲಿ ಸೆಕ್ಷನ್ 144 ಜಾರಿ ಮಾಡಿದರು. ಒಂದು ಹಂತಕ್ಕೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದರೂ ನಗರದ ಪರಿಸ್ಥಿತಿತಿ ಬೂದಿ ಮುಚ್ಚಿದ ಕೆಂಡದಂತಿದೆ.
ಏನದು ಪ್ರಚೋದನಕಾರಿ ಪೋಸ್ಟ್?
ಮಸೀದಿಯ ಚಿತ್ರದ ಮೇಲೆ ಭಗವಾಧ್ವಜ ಹಾರಿಸಿದ ಚಿತ್ರ ಎಡಿಟ್ ಮಾಡಿ ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ತಲೆ ಕೆಟ್ಟರೆ ಇಲ್ಲೂ ಭಗವಾಧ್ವಜ ಹಾರಿಸುವೆ, ಜೈ ಶ್ರೀರಾಮ್, ಹಿಂದೂ ಸಾಮ್ರಾಟ್‘ ಎಂದು ಚಿತ್ರದ ಮೇಲೆ ಬರೆಯಲಾಗಿತ್ತು. ಇದು ವಿವಾದಕ್ಕೆ ಕಾರಣವಾಗಿದೆ.
ವಿಷಯ ತಿಳಿದ ಮುಸಲ್ಮಾನರು ಆತನನ್ನು ಬಂಧಿಸುವಂತೆ ಹಳೆ ಹುಬ್ಬಳ್ಳಿ ಪೊಲೀಸರಿಗೆ ತಿಳಿಸಿದ್ದಾರೆ. ಯುವಕನನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆತಂದಿದ್ದಾರೆ. ಆದರೆ, ಅಷ್ಟರಲ್ಲಿ ಈ ವಿಚಾರ ಬಹಿರಂಗವಾಗಿದೆ. ಕೆಲವರು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ರಾತ್ರಿ ಮುತ್ತಿಗೆ ಹಾಕಿದ್ದಾರೆ. ಯುವಕನನ್ನು ಬಂಧಿಸಬೇಕು, ವಶಕ್ಕೆ ನೀಡಬೇಕೆಂದು ಆಗ್ರಹಿಸಿದರು. ಇದರಂತೆ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಆದರೆ ಅಷ್ಟರಲ್ಲಿಯೇ ಹಳೇ ಹುಬ್ಬಳ್ಳಿ, ಹಾಗೂ ಇನ್ನಿತರ ಪ್ರದೇಶಕ್ಕೆ ಪ್ರತಿಭಟನೆ ವ್ಯಾಪಿಸಿತು. ಅದು ಪರಿಸ್ಥಿತಿ ಉದ್ವಿಗ್ನಗೊಳ್ಳುವಂತೆ ಮಾಡಿತ್ತು.
Tension mounts in #Hubballi after a youth posts derogatory post against Islam. Protests erupts. Several policemen injured and vehicles damaged @ramupatil_TNIE @NewIndianXpress @XpressBengaluru @KannadaPrabha @karnatakacom @Hubballi_Infra @HubliCityeGroup @hublimand0 pic.twitter.com/DnjnHWEXqx
— Amit Upadhye (@Amitsen_TNIE) April 17, 2022
ಹಿಂಸಾಚಾರ ಹಿನ್ನೆಲೆಯಲ್ಲಿ ನಗರದ ಪ್ರಮುಖ ಧಾರ್ಮಿಕ ಸ್ಥಳಗಳ ಎದುರು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಭಾನುವಾರ ಹೊರ ಜಿಲ್ಲೆಗಳಿಂದಲೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಕರೆಸಿಕೊಳ್ಳಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಮುಂಜಾಗ್ರತಾ ಕ್ರಮವಾಗಿ ಭದ್ರಾವತಿಯ ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು ಕರೆಸಿಕೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ. ಭಾನುವಾರ ರಜೆ ಮೇಲೆ ಹೋದ ಸಿಬ್ಬಂದಿಗೂ ಕರ್ತವ್ಯಕ್ಕೆ ಮರಳಲು ಸೂಚಿಸಿದ್ದಾರೆ.