ಮಠದಿಂದಲೂ 30 ಪರ್ಸೆಂಟ್ ಕಮಿಷನ್: ತಾವು ಅನುದಾನ ಪಡೆಯಲ್ಲ ಎಂದ ಜಯಮೃತ್ಯುಂಜಯ ಸ್ವಾಮೀಜಿ
ನಾವು ಮಠಕ್ಕೆ ಅನುದಾನವನ್ನೇ ಪಡೆಯುವುದಿಲ್ಲ. ಈ ಹಿಂದೆ ಕೊಟ್ಟ ಅನುದಾನ ಸರ್ಕಾರಕ್ಕೆ ಹಿಂತಿರುಗಿಸಿದ್ದೇವೆ ಎಂದು ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.
Published: 18th April 2022 04:32 PM | Last Updated: 18th April 2022 04:32 PM | A+A A-

ಜಯಮೃತ್ಯುಂಜಯ ಸ್ವಾಮೀಜಿ
ಬೆಂಗಳೂರು: ನಾವು ಮಠಕ್ಕೆ ಅನುದಾನವನ್ನೇ ಪಡೆಯುವುದಿಲ್ಲ. ಈ ಹಿಂದೆ ಕೊಟ್ಟ ಅನುದಾನ ಸರ್ಕಾರಕ್ಕೆ ಹಿಂತಿರುಗಿಸಿದ್ದೇವೆ ಎಂದು ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.
ಮಠದಿಂದಲೂ 30 ಪರ್ಸೆಂಟ್ ಕಮೀಷನ್ ಪಡೆದು ಅನುದಾನ ನೀಡಲಾಗುತ್ತದೆ ಎಂದು ಬಾಳೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಮಾಡಿದ ಆರೋಪದ ಬಗ್ಗೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಕೇಳಿದ ಪ್ರಶ್ನೆಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದರು.
ಇದನ್ನು ಓದಿ: 2ಎ ಮೀಸಲಾತಿಗೆ ಆಗ್ರಹ: ಸರ್ಕಾರಕ್ಕೆ ಏ.14ಕ್ಕೆ ಹೊಸ ಗಡುವು ನೀಡಿದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ
ದಿಂಗಾಲೇಶ್ವರರು ಯಾವ ಆಧಾರದ ಮೇಲೆ ಹೇಳಿದ್ದಾರೋ ಗೊತ್ತಿಲ್ಲ. ಬಹುಶಃ ಅವರ ಬಳಿ ಆ ಕಮೀಷನ್ ಆರೋಪದ ಬಗ್ಗೆ ಮಾಹಿತಿ ಇರಬಹುದು. ಆದರೆ, ನಮಗಂತೂ ಸರ್ಕಾರದ ಅನುದಾನ ಬೇಕಾಗಿಲ್ಲ. ಸಮುದಾಯಕ್ಕೆ 2ಎ ಮೀಸಲಾತಿ ಬೇಕಷ್ಟೇ ಎಂದರು.
ಮೀಸಲಾತಿ ನೀಡಲು ಸರ್ಕಾರಕ್ಕೆ ಏ. 21ರ ಅಂತಿಮ ಗಡುವು ನೀಡಲಾಗಿದೆ. ಇದು ಮಾಡು ಇಲ್ಲವೇ ಮಡಿ ಹೋರಾಟ. ಸ್ಪಂದಿಸದಿದ್ದರೆ, ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ಹೊಣೆ ಎಂದೂ ಎಚ್ಚರಿಸಿದರು.