ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯ ಪ್ರಸಾದಕ್ಕೆ ರಾಷ್ಟ್ರೀಯ ಸುರಕ್ಷತಾ ಗುಣಮಟ್ಟದ ಮಾನ್ಯತೆ!

ರಾಜ್ಯದ ಮುಜರಾಯಿ ಇಲಾಖೆಯ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ಭಕ್ತರಿಗೆ ನೀಡುವ ಭೋಜನ ಪ್ರಸಾದಕ್ಕೆ ರಾಷ್ಟ್ರೀಯ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದ ಪ್ರಮಾಣಪತ್ರ ದೊರಕಿದೆ.

Published: 18th April 2022 08:58 AM  |   Last Updated: 18th April 2022 01:43 PM   |  A+A-


File photo

ಸಂಗ್ರಹ ಚಿತ್ರ

The New Indian Express

ಉಡುಪಿ: ರಾಜ್ಯದ ಮುಜರಾಯಿ ಇಲಾಖೆಯ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ಭಕ್ತರಿಗೆ ನೀಡುವ ಭೋಜನ ಪ್ರಸಾದಕ್ಕೆ ರಾಷ್ಟ್ರೀಯ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದ ಪ್ರಮಾಣಪತ್ರ ದೊರಕಿದೆ.

ಈ ದೇವಾಲಯಕ್ಕೆ ನಿತ್ಯವೂ ಸಾವಿರಾರೂ ಸಂಖ್ಯೆಯಲ್ಲಿ ರಾಜ್ಯ-ಹೊರ ರಾಜ್ಯ ಮಾತ್ರವಲ್ಲದೇ ವಿದೇಶದಿಂದಲೂ ಭಕ್ತರೂ ಆಗಮಿಸುತ್ತಿದ್ದು, ಅವರಿಗೆ ದೇವಾಲಯದ ವತಿಯಿಂತ ಉಚಿತ ಭೋಜನ ಪ್ರಸಾದದ ವ್ಯವಸ್ಥೆ ಇದೆ.

ಈ ಭೋಜನ ಪ್ರಸಾದ ಹಾಗೂ ದೇವರಿಗೆ ಅರ್ಪಿಸುವ ನೈವೇದ್ಯಗಳು ಗರಿಷ್ಟ ಗುಣಮಟ್ಟದಿಂದ ಕೂಡಿದ್ದು, ಆರೋಗ್ಯಕ್ಕೆ ಅತ್ಯಂತ ಸುರಕ್ಷಿತವಾಗಿದೆ ಎಂದು ಪ್ರಾಧಿಕಾರವು ಪ್ರಮಾಣಪತ್ರವನ್ನು ನೀಡಿದೆ.

ಈ ಭೋಜನಾ ತಯಾರಿಸುವ ಅಡುಗೆ ಮನೆ, ಅಲ್ಲಿರುವ ಸೌಲಭಯಗಳು, ಆಹಾರ ತಯಾರಿಸುವ ವಿಧಾನ, ಈ ಸಂದರ್ಭದಲ್ಲಿ ಪಾಲಿಸುವ ಸ್ವಚ್ಛತೆ, ಆಹಾರ ತಯಾರಿಕಾ ಸಿಬ್ಬಂದಿಗೆ ನೀಡಿರುವ ತರಬೇತಿ ಇತ್ಯಾದಿ ಅಂಶಗಳನ್ನು ಆಧರಿಸಿ ಇತ್ತೀಚೆಗೆ ಪ್ರಾಧಿಕಾರವು ಪರಿಶೋಧನೆ ನಡೆಸಿತ್ತು.

ಆಹಾರ ತಯಾರಿಕಾ ಕೊಠಡಿಯು ಅತ್ಯಂತ ಸುಸಜ್ಜಿತವಾಗಿದ್ದು, ಸೋರುವಿಕೆ ಇಲ್ಲದ, ಉತ್ತಮ ಗುಣಮಟ್ಟದ ಗೋಡೆ, ಕಾಲು ಜಾರದಂತಹ ನೆಲಹಾಸು, ತುಕ್ಕು ಹಿಡಿಯದ ಕಿಟಕಿ ಬಾಗಿಲುಗಳು, ಆಹಾರ ತಯಾರಿಸುವ ಪಾತ್ರೆಗಳಿಗೆ ಕಲಾಯಿ ಹಾಕಿರುವುದು ಉತ್ತಮ ಗಾಳಿ ಬೆಳೆಕು ಸೌಲಭ್ಯ, ಆಹಾರವನ್ನು ಬಿಸಿ-ತಂಪು ಮಾಡುವ ಯಂತ್ರೋಪಕರಣಗಳು ಆಹಾರ ತಯಾರಿಕಾ ಸಾಮಾಗ್ರಿಗಳ ದಾಸ್ತಾನು ಕೊಠಡಿ, ಪಾತ್ರೆ ತೊಳೆಯುವ ನೀರು, ತ್ಯಾಜ್ಯ ವಿಲೇವಾರಿ ಇತ್ಯಾದಿಗಳ ಗುಣಮಟ್ಟವನ್ನು ಪರೀಕ್ಷಿಸಿದೆ. ಆಹಾರ ಸುರಕ್ಷತಾ ಪ್ರಮಾಣಪತ್ರ ಹೊಂದಿರುವ ಸರಬರಾಜುದಾರರ ಮೂಲಕವೇ ಖರೀದಿ, ಅವಧಿ ಮೀರುವ ಮೊದಲೇ ಆಹಾರ ಪದಾರ್ಥಗಳ ಬಳಕೆ, ಅವುಗಳನ್ನು ಕೆಡದಂತೆ ಇಡುವ ಸೂಕ್ತ ವ್ಯವಸ್ಥೆ, ಭೋಜನ ಶಾಲೆಯಲ್ಲಿ ಸ್ವಚ್ಛತೆಗೆ ಆದ್ಯತೆ, ಶುದ್ಧೀಕರಣ ಇತ್ಯಾದಿಗಳನ್ನು ಕೂಡ ಪ್ರಾಧಿಕಾರ ಗಮನಿಸಿದೆ.

ನೈರ್ಮಲ್ಯ, ವಾತಾವರಣ, ಸಂಗ್ರಹಣೆ ಮತ್ತು ಆಹಾರ ತಯಾರಿಕೆಯಲ್ಲಿ ಬಳಸುವ ಶುದ್ಧ ನೀರು ಮುಂತಾದ ವಿವಿಧ ಅಂಶಗಳನ್ನು ಪರಿಗಣಿಸಿ, ಎಫ್‌ಎಸ್‌ಎಸ್‌ಎಐ ಪ್ರಮಾಣಪತ್ರವನ್ನು ನೀಡಿದೆ ಎಂದು ಉಡುಪಿಯ ಎಫ್‌ಎಸ್‌ಎಸ್‌ಎಐ ನಿಯೋಜಿತ ಅಧಿಕಾರಿ ಡಾ.ಪ್ರೇಮಾನಂದ್ ಅವರು ಹೇಳಿದ್ದಾರೆ.

ಕೊಲ್ಲೂರು ದೇವಸ್ಥಾನದ ಜೊತೆಗೆ, ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ, ದ.ಕ. ಜಿಲ್ಲೆಯ ಧರ್ಮಸ್ಥಳ ಮತ್ತು ಉತ್ತರ ಕನ್ನಡ ಜಿಲ್ಲೆಯ ಮಾರಿಕಾಂಬಾ ದೇವಸ್ಥಾನ, ಶಿರಸಿ ಮುಂತಾದ ಪ್ರಸಿದ್ಧ ದೇವಾಲಯಗಳನ್ನು ಕೂಡ ಭೋಗ್ ಅಡಿಯಲ್ಲಿ ಆಯ್ಕೆ ಮಾಡಲಾಗಿದೆ.

ಡಾ.ಪ್ರೇಮಾನಂದ್ ಮಾತನಾಡಿ, ಕರ್ನಾಟಕ ಮಾತ್ರವಲ್ಲದೆ, ಹೊರ ರಾಜ್ಯಗಳಿಂದಲೂ, ಹೊರರಾಜ್ಯದಿಂದಲೂ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಎಲ್ಲರಿಗೂ ಊಟವನ್ನು ಉಚಿತವಾಗಿ ‘ಪ್ರಸಾದ’ ರೂಪದಲ್ಲಿ ನೀಡಲಾಗುತ್ತದೆ. ಹಾಗಾಗಿ ಪ್ರಸಾದಕ್ಕೆ ಸಿಕ್ಕ ಪ್ರಮಾಣೀಕರಣವು ಉತ್ತಮವಾಗಿದ್ದು, ಅದು ಭಕ್ತರಿಗೆ ಗುಣಮಟ್ಟ ಮತ್ತು ನೈರ್ಮಲ್ಯವನ್ನು ಖಾತರಿಪಡಿಸುತ್ತದೆ ಎಂದು ತಿಳಿಸಿದ್ದಾರೆ.


Stay up to date on all the latest ರಾಜ್ಯ news
Poll
Nitish_Kumar1

2024 ರ ಲೋಕಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರು ಸಂಯುಕ್ತ ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಬಹುದೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp