ಹುಬ್ಬಳ್ಳಿ ಗಲಭೆ ಪ್ರಕರಣ: 88 ಮಂದಿ ಬಂಧನ, ಸೆಕ್ಷನ್ 144 ಮುಂದುವರಿಕೆ

ಪ್ರಚೋದನಕಾರಿ ವಾಟ್ಸ್ಯಾಪ್ ಸ್ಟೇಟಸ್​ ವಿರೋಧಿಸಿ ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐಎಂ ಕಾರ್ಪೊರೇಟರ್ ಪತಿ ಸೇರಿದಂತೆ ಇದುವರೆಗೆ 88 ಮಂದಿಯನ್ನು ಬಂಧಿಸಲಾಗಿದೆ. 

Published: 18th April 2022 09:58 AM  |   Last Updated: 18th April 2022 01:45 PM   |  A+A-


Police nabbed suspects

ಪೊಲೀಸರು ಬಂಧಿಸುತ್ತಿರುವ ಸಂಗ್ರಹ ಚಿತ್ರ

ANI

ಹುಬ್ಬಳ್ಳಿ: ಪ್ರಚೋದನಕಾರಿ ವಾಟ್ಸ್ಯಾಪ್ ಸ್ಟೇಟಸ್​ ವಿರೋಧಿಸಿ ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐಎಂ ಕಾರ್ಪೊರೇಟರ್ ಪತಿ ಸೇರಿದಂತೆ ಇದುವರೆಗೆ 88 ಮಂದಿಯನ್ನು ಬಂಧಿಸಲಾಗಿದೆ.

ಹುಬ್ಬಳ್ಳಿ ನಗರದಲ್ಲಿ ಕಾನೂನು-ಸುವ್ಯವಸ್ಥೆ ಮತ್ತು ಭದ್ರತೆ ಸಲುವಾಗಿ ಸೆಕ್ಷನ್ 144 ಮುಂದುವರಿಸಲಾಗಿದೆ. ನಿನ್ನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆದು ಪರಿಸ್ಥಿತಿ ಈಗ ಬೂದಿ ಮುಚ್ಚಿದ ಕೆಂಡದಂತಿದೆ.

10 ತಂಡ ರಚನೆ: ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ಪೊಲೀಸರು ಹೈ ಅಲರ್ಟ್ ಆಗಿದ್ದು, 10 ತಂಡಗಳನ್ನು ರಚಿಸಲಾಗಿದೆ, ಹುಬ್ಬಳ್ಳಿ ನಗರ ಸುತ್ತಮುತ್ತ ನಾಕಾಬಂಧಿ ಹಾಕಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. 

ಇದನ್ನೂ ಓದಿ: ಹುಬ್ಬಳ್ಳಿ ಹಿಂಸಾಚಾರಕ್ಕೆ ತೀವ್ರ ಖಂಡನೆ: ಕಾನೂನು ಕೈಗೆತ್ತಿಕೊಳ್ಳುವ ಸಾಹಸ ಮಾಡದಂತೆ ಗಲಭೆಕೋರರಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ

ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಇಷ್ಟು ದೊಡ್ಡ ಪ್ರಮಾಣದ ಕಲ್ಲುಗಳನ್ನು ಹೇಗೆ ಸಂಗ್ರಹಿಸಲಾಗಿದೆ ಎಂಬುದನ್ನೂ ನಾವು ತನಿಖೆ ಮಾಡುತ್ತಿದ್ದೇವೆ. ಪ್ರಕರಣದಲ್ಲಿ ಹೆಚ್ಚಿನವರನ್ನು ಬಂಧಿಸುವ ಸಾಧ್ಯತೆಯಿದೆ. ಖಾಸಗಿ ವಾಹನಗಳಿಗೆ ಹಾನಿಯಾಗಿರುವುದು ಹಾಗೂ ಸಾರ್ವಜನಿಕರಿಗೆ ಗಾಯಗಳಾಗಿರುವ ಬಗ್ಗೆ ಮಾಹಿತಿಗಳು ಬಂದಿವೆ. ಜನರು ದೂರುಗಳನ್ನು ಠಾಣೆಗೆ ಬಂದು ವರದಿ ಮಾಡಬೇಕೆಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣ: 12 ಮಂದಿ ಪೊಲೀಸರಿಗೆ ಗಾಯ, 40 ಜನರು ಪೊಲೀಸರ ವಶಕ್ಕೆ

ಹುಬ್ಬಳ್ಳಿಯಲ್ಲಿ ಹೇರಲಾಗಿದ್ದ ನಿಷೇಧಾಜ್ಞೆ ಆದೇಶವನ್ನು ನಾಡಿದ್ದು 20ವರೆಗೆ ವಿಸ್ತರಿಸಲಾಗಿದೆ. ಅಲ್ಲದೆ, ಪರಿಸ್ಥಿತಿ ಹದಗೆಡದಂತೆ ಇತರೆ ಜಿಲ್ಲೆಗಳಿಗೆ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ವರಿಷ್ಠರು ಮಾಹಿತಿ ನೀಡಿದ್ದಾರೆ.


Stay up to date on all the latest ರಾಜ್ಯ news
Poll
Nitish_Kumar1

2024 ರ ಲೋಕಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರು ಸಂಯುಕ್ತ ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಬಹುದೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp