ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ಬ್ಯಾಂಕ್ ಅಧಿಕಾರಿಣಿ ಸಾವು, ಅನಾಥವಾದ ಮಗು!

ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ಕಳೆದ ರಾತ್ರಿ ಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು ರಾಷ್ಟ್ರೀಕೃತ ಬ್ಯಾಂಕ್‌ನ 40 ವರ್ಷದ ಮಹಿಳಾ ಉದ್ಯೋಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Published: 19th April 2022 02:34 PM  |   Last Updated: 19th April 2022 02:34 PM   |  A+A-


Represation photo

ಸಾಂದರ್ಭಿಕ ಚಿತ್ರ

The New Indian Express

ಬೆಂಗಳೂರು: ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ಕಳೆದ ರಾತ್ರಿ ಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು ರಾಷ್ಟ್ರೀಕೃತ ಬ್ಯಾಂಕ್‌ನ 40 ವರ್ಷದ ಮಹಿಳಾ ಉದ್ಯೋಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆರ್ ಆರ್ ನಗರದ ನಿವಾಸಿ ಪದ್ಮಿನಿ ಡಿ ಮೃತ ದುರ್ದೈವಿ. ಸೇಂಟ್ ಮಾರ್ಕ್ಸ್ ರಸ್ತೆಯ ಶಾಖೆಯಲ್ಲಿ ಬ್ಯಾಂಕಿನ ಉಪ ವ್ಯವಸ್ಥಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ನಾಯಂಡಹಳ್ಳಿ ಜಂಕ್ಷನ್ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. 

ಪೊಲೀಸರು ಆಕೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದು, ಆಕೆಯ ಪಾರ್ಥಿವ ಶರೀರವನ್ನು ಇಂದು ಪೋಷಕರಿಗೆ ಹಸ್ತಾಂತರಿಸಲಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಓಡಿ ಹೋಗಿದ್ದಾನೆ.

ಏಪ್ರಿಲ್ 1ರಂದು ಬಾಗಲೂರಿನಲ್ಲಿ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು 60 ವರ್ಷದ ರೈತ ರಾಮಯ್ಯ ಎಸ್. ಮಾರ್ಚ್ 21ರಂದು ಹೆಬ್ಬಾಳದಲ್ಲಿ ವೇಗವಾಗಿ ಬಂದ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ಮತ್ತೋರ್ವ ಪಾದಚಾರಿ ಅಕ್ಷಯ (14) ಬಾಲಕಿ ಮೃತಪಟ್ಟಿದ್ದರು.


Stay up to date on all the latest ರಾಜ್ಯ news
Poll
Nitish_Kumar1

2024 ರ ಲೋಕಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರು ಸಂಯುಕ್ತ ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಬಹುದೇ?


Result
ಹೌದು
ಇಲ್ಲ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • madhava rao

    YOu mentioned in headline her baby become orphan. But no where mentioned in the body about the unfortunate baby. while editing, give proper headline. otherwise there is no difference between your online edition and some fake apps !!
    3 months ago reply
flipboard facebook twitter whatsapp