ಹೆಚ್ಚು ಜನರಿಲ್ಲದ ಇಂದಿರಾ ಕ್ಯಾಂಟೀನ್ ಗಳ ಸ್ಥಳಾಂತರ: ಜೆಸಿ ಮಾಧುಸ್ವಾಮಿ
ರಾಜ್ಯ ಸರ್ಕಾರವು ಕ್ಯಾಂಟೀನ್ಗಳ ಸ್ಥಳಗಳ ಕುರಿತು ಸಮೀಕ್ಷೆಯನ್ನು ನಡೆಸಲು ನಿರ್ಧರಿಸಿದೆ ಮತ್ತು ಅವರನ್ನು ಜನಸಂದಣಿಯಿಲ್ಲದ ಸ್ಥಳಗಳಿಂದ ಜನದಟ್ಟಣೆಯ ಸ್ಥಳಗಳಿಗೆ ಸ್ಥಳಾಂತರಿಸಲು ನಿರ್ಧರಿಸಿದೆ.
Published: 19th April 2022 10:18 AM | Last Updated: 19th April 2022 01:31 PM | A+A A-

ಇಂದಿರಾ ಕ್ಯಾಂಟೀನ್
ಬೆಂಗಳೂರು: ರಾಜ್ಯ ಸರ್ಕಾರವು ಕ್ಯಾಂಟೀನ್ಗಳ ಸ್ಥಳಗಳ ಕುರಿತು ಸಮೀಕ್ಷೆಯನ್ನು ನಡೆಸಲು ನಿರ್ಧರಿಸಿದೆ ಮತ್ತು ಅವರನ್ನು ಜನಸಂದಣಿಯಿಲ್ಲದ ಸ್ಥಳಗಳಿಂದ ಜನದಟ್ಟಣೆಯ ಸ್ಥಳಗಳಿಗೆ ಸ್ಥಳಾಂತರಿಸಲು ನಿರ್ಧರಿಸಿದೆ.
ಹೆಚ್ಚು ಜನ ಬಾರದ ಇಂದಿರಾ ಕ್ಯಾಂಟೀನ್ ಗಳನ್ನು ಜನನಿಬಿಡ ಜಾಗಗಳಿಗೆ ಸ್ಥಳಾಂತರಿಸಲು ಸಚಿವ ಸಂಪುಟ ಸಭೆ ಚಿಂತಿಸಿದೆ. ಈ ಬಗ್ಗೆ ಸಭೆ ಬಳಿಕ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್ಗಳನ್ನು ನಡೆಸಲು ಕಷ್ಟವಾಗುತ್ತಿರುವುದರಿಂದ ಅವುಗಳನ್ನು ಲಾಭದಾಯಕವಾಗಿಸಲು ಚಿಂತಿಸಲಾಗಿದೆ.
ಹೀಗಾಗಿ ಇಂದಿರಾ ಕ್ಯಾಂಟೀನ್ ಸ್ಥಳಾಂತರ ಮಾಡುವ ಕುರಿತು 10 ದಿನದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆಗೆ ಸೂಚಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ಇದನ್ನೂ ಓದಿ: ಗಣಿ ರಪ್ತು ನಿಷೇಧ ಮುಂದುವರೆಸಲು ಸರ್ಕಾರ ನಿರ್ಧಾರ, ಸುಪ್ರೀಂ ಕೋರ್ಟ್ಗೂ ಅಫಿಡವಿಟ್: ಸಚಿವ ಜೆ.ಸಿ. ಮಾಧುಸ್ವಾಮಿ
ಹಾಲಿ ಇರುವ ಸ್ಥಳಗಳಲ್ಲಿ ಇಂದಿರಾ ಕ್ಯಾಂಟೀನ್ಗಳಿಗೆ ಜನರು ಬಾರದ ಹಿನ್ನೆಲೆಯಲ್ಲಿ ಅವುಗಳನ್ನು ನಡೆಸಲು ಪಾಲಿಕೆಯಿಂದ ಶೇ. 30 ರಷ್ಟು ಹಣ ನೀಡುವುದೂ ಕಷ್ಟವಾಗುತ್ತಿದೆ. ಸರ್ಕಾರವೇ ಹಣ ನೀಡಬೇಕೆಂದು ಪಾಲಿಕೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ಗಳನ್ನು ಹೆಚ್ಚು ಜನರಿಗೆ ತಲುಪುವಂತೆ ಮಾಡಲು ಅವುಗಳನ್ನು ಬಸ್ನಿಲ್ದಾಣ, ರೈಲ್ವೆ ನಿಲ್ದಾಣದಂತಹ ಜನನಿಬಿಡ ಪ್ರದೇಶಗಳಿಗೆ ಸ್ಥಳಾಂತರಿಸುವ ಬಗ್ಗೆ 10 ದಿನದಲ್ಲಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಅದಿರು ರಫ್ತು ರದ್ದು ನೀತಿಯನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಸುಪ್ರೀಂ ಕೋರ್ಟ್ಗೂ ಅಫಿಡವಿಟ್ ಸಲ್ಲಿಸಲು ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.
ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸುದೀರ್ಘ ಚರ್ಚೆಯಾಗಿದ್ದು, ರಾಜ್ಯ ಸರ್ಕಾರದ ಅಡ್ವಕೇಟ್ ಜನರಲ್ ಅವರನ್ನು ಸಂಪುಟ ಸಭೆಗೆ ಕರೆಯಿಸಿಕೊಂಡು ಚರ್ಚೆ ನಡೆಸಲಾಗಿದೆ. ಮಂಗಳವಾರ ಈ ಕುರಿತು ರಾಜ್ಯ ಸರ್ಕಾರ ಸುಪ್ರೀಂ ಕೊರ್ಟ್ಗೆ ರಾಜ್ಯದ ನಿಲುವಿನ ಕುರಿತು ಅಫಿಡವಿಟ್ ಸಲ್ಲಿಸಬೇಕಿದ್ದರಿಂದ ರಾಜ್ಯ ಸರ್ಕಾರ 2021 ರಲ್ಲಿ ಕಬ್ಬಿಣದ ಅದಿರು ರಫ್ತು ಮಾಡುವುದನ್ನು ನಿಷೇಧಿಸಿರುವ ಗಣಿ ನೀತಿಯನ್ನೇ ಮುಂದುವರೆಸುವುದಾಗಿ ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಸರ್ಕಾರಿ ಇಲಾಖೆಗಳಲ್ಲಿ ಮೇಜರ್ ಸರ್ಜರಿ: ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ
ರಾಜ್ಯದಲ್ಲಿ ಕಬ್ಬಿಣದ ಅದಿರು ರಪ್ತು ಮಾಡದೇ ಇರುವುದರಿಂದ ಬೆಲೆ ಕುಸಿತವಾಗಿದ್ದು, ರಫ್ತಿಗೆ ಅವಕಾಶ ನೀಡಬೇಕೆಂದು ಗಣಿ ಕಂಪನಿಗಳು ಬೇಡಿಕೆ ಸಲ್ಲಿಸಿದ್ದವು. ಆದರೆ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಿಂದ ರಾಜ್ಯದ ಪ್ರಾಕೃತಿಕ ಸಂಪತ್ತು ನಾಶವಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮತ್ತೆ ರಪ್ತು ಮಾಡಲು ಅವಕಾಶ ನೀಡಿದರೆ, ಅದೇ ಆರೋಪ ಎದುರಿಸಬೇಕಾಗುತ್ತದೆ ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಿದರು.