ಕೋವಿಡ್ ಸಾಂಕ್ರಾಮಿಕದಿಂದ ಹೊಡೆತ ಬಿದ್ದಿದ್ದ ಕೊಡಗು ಜಿಲ್ಲೆಯಲ್ಲಿ ಇದೀಗ ಪ್ರವಾಸೋದ್ಯಮದಲ್ಲಿ ಚೇತರಿಕೆ!
ಕೋವಿಡ್-19 ಸಾಂಕ್ರಾಮಿಕ ನಂತರ ಕರ್ನಾಟಕದ ಕಾಶ್ಮೀರ ಕೊಡಗು ಜಿಲ್ಲೆಗೆ ದಾಖಲೆ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಈ ತಿಂಗಳ ಆರಂಭದಿಂದಲೂ ಸುಮಾರು 36,000 ಪ್ರವಾಸಿಗರು ಭೇಟಿ ನೀಡಿದ್ದಾರೆ. ಈ ಬೇಸಿಗೆಯಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
Published: 19th April 2022 08:17 PM | Last Updated: 19th April 2022 08:17 PM | A+A A-

ಸಾಂದರ್ಭಿಕ ಚಿತ್ರ
ಮಡಿಕೇರಿ: ಕೋವಿಡ್-19 ಸಾಂಕ್ರಾಮಿಕ ನಂತರ ಕರ್ನಾಟಕದ ಕಾಶ್ಮೀರ ಕೊಡಗು ಜಿಲ್ಲೆಗೆ ದಾಖಲೆ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಈ ತಿಂಗಳ ಆರಂಭದಿಂದಲೂ ಸುಮಾರು 36,000 ಪ್ರವಾಸಿಗರು ಭೇಟಿ ನೀಡಿದ್ದಾರೆ. ಈ ಬೇಸಿಗೆಯಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಕಳೆದ 18 ದಿನಗಳಲ್ಲಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಮಡಿಕೇರಿಯ ರಾಜಸೀಟ್ ಗೆ ದಾಖಲೆ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸಿದ್ದಾರೆ. ಈ ದಿನಗಳಲ್ಲಿ ಒಟ್ಟು 36,694 ಪ್ರವೇಶ ಟಿಕೆಟ್ ಗಳು ಮಾರಾಟವಾಗಿವೆ. ಬೆಳಗ್ಗೆ ಬರುವ ಪ್ರವಾಸಿಗರ ಸಂಖ್ಯೆಯನ್ನು ಹೊರತುಪಡಿಸಿ ಇಷ್ಟೊಂದು ಸಂಖ್ಯೆಯಲ್ಲಿ ಪ್ರವಾಸಿಗರು ಬಂದಿದ್ದಾರೆ. ಬೆಳಗ್ಗೆ ಹೊತ್ತು ಪ್ರವೇಶ ಶುಲ್ಕ ಇರುವುದಿಲ್ಲ.
ಇದೇ ರೀತಿಯಲ್ಲಿ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಲ್ಲಿಯೂ ಏಪ್ರಿಲ್ ಆರಂಭದಿಂದ ಸುಮಾರು 35000 ಪ್ರವಾಸಿಗರು ಆಗಮಿಸಿದ್ದಾರೆ. ಅದರಲ್ಲೂ ಏಪ್ರಿಲ್ 14 ರಿಂದ 17ರವರೆಗಿನ ಜಿಲ್ಲೆ ಪ್ರವಾಸಿಗರಿಂದ ತುಂಬಿ ತುಳುಕುತಿತ್ತು. ಧೀರ್ಘ ವಾರಾಂತ್ಯದಲ್ಲಿ ಎಲ್ಲಾ ಹೋಮ್ ಸ್ಟೇಯ್ ಗಳು ಮತ್ತು ರೆಸಾರ್ಟ್ ಗಳು ಬುಕ್ ಆಗಿದ್ದವು. ಮಾರ್ಚ್ ಅಂತ್ಯದಿಂದ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಾಗಿದ್ದು, ಮೇ ಅಂತ್ಯದವರೆಗೂ ಇದೇ ರೀತಿಯಲ್ಲಿ ಇರುವ ಸಾಧ್ಯತೆಯಿದೆ ಎಂದು ಕೊಡಗು ಜಿಲ್ಲಾ ರೆಸಾರ್ಟ್ ಮತ್ತು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ.
ಎರಡು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪ್ರವಾಸಿಗರ ಸಂಖ್ಯೆಯಲ್ಲಿ ಇಷ್ಟೊಂದು ರೀತಿಯಲ್ಲಿ ಹೆಚ್ಚಾಗಿದೆ. ಅನೇಕ ರೆಸ್ಟೋರೆಂಟ್ ಗಳು ಕಾರ್ಮಿಕರ ತೊಂದರೆ ಎದುರಿಸುತ್ತಿದ್ದು, ಇದ್ದಕ್ಕಿದ್ದಂತೆ ಹೆಚ್ಚಾಗಿ ಬರುತ್ತಿರುವ ಪ್ರವಾಸಿಗರಿಗೆ ಆಹಾರ ಪೂರೈಸುವಲ್ಲಿ ಸಮಸ್ಯೆಯಾಗುತ್ತಿದೆ. ಆದಾಗ್ಯೂ, ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ನಾಗೇಂದ್ರ ಅವರು ಹೇಳಿದರು.