ಮೈಸೂರು: ಬೊಲೆರೊ ವಾಹನ ಮರಕ್ಕೆ ಡಿಕ್ಕಿ, ಭೀಕರ ಅಪಘಾತದಲ್ಲಿ 6 ಮಂದಿ ಸಾವು
ಬೊಲೆರೊ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ.
Published: 20th April 2022 06:23 PM | Last Updated: 20th April 2022 06:39 PM | A+A A-

ಭೀಕರ ಅಪಘಾತ
ಮೈಸೂರು: ಬೊಲೆರೊ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ.
ಹುಣಸೂರಿನಿಂದ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ಬೊಲೆರೊ ವಾಹನ ಕಲ್ಬೆಟ್ಟದ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಗ್ರಾಮದ ಅನಿಲ್, ಸಂತೋಷ್, ವಿನುತ್, ರಾಜೇಶ್, ದಯಾನಂದ, ಬಾಬು ಮೃತಪಟ್ಟ ದುರ್ದೈವಿಗಳು.
ಇದನ್ನು ಓದಿ: ಮಾಜಿ ಸಚಿವ ಟಿ.ಬಿ. ಜಯಚಂದ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಮದುವೆ ಮುಗಿಸಿಕೊಂಡು ವಾಪಸ್ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೊಲೆರೊ ವಾಹನ ಮರಕ್ಕೆ ಡಿಕ್ಕಿಯಾಗಿ 6 ಮಂದಿ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಮೂವರನ್ನ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.