ರೈತರಿಗೆ ಸ್ವಯಂ ಸರ್ವೇಗೆ ಅವಕಾಶ, ಆಸ್ತಿ ನೋಂದಣಿಗೆ ಶೇ. 10ರಷ್ಟು ರಿಯಾಯಿತಿ ಅವಧಿ ವಿಸ್ತರಣೆ: ಆರ್ ಅಶೋಕ್

ಆಡಳಿತದಲ್ಲಿ ಸುಧಾರಣೆ ತಂದು ನಾಗರಿಕರಿಗೆ ತಮ್ಮ ಹಕ್ಕುಗಾರಿಕೆ ಮೇಲೆ ನಿಯಂತ್ರಣ ಸಾಧಿಸಲು ಅವಶ್ಯಕ ಬದಲಾವಣೆಯನ್ನು ಮಾಡಿ ಸಶಕ್ತಗೊಳಿಸುವುದು ಸರ್ಕಾರದ ಆಡಳಿತ ಸುಧಾರಣೆಯ ಉದ್ದೇಶ ಎಂದು...

Published: 21st April 2022 06:57 PM  |   Last Updated: 21st April 2022 07:43 PM   |  A+A-


R Ashok

ಆರ್ ಅಶೋಕ್

Online Desk

ಬೆಂಗಳೂರು: ಆಡಳಿತದಲ್ಲಿ ಸುಧಾರಣೆ ತಂದು ನಾಗರಿಕರಿಗೆ ತಮ್ಮ ಹಕ್ಕುಗಾರಿಕೆ ಮೇಲೆ ನಿಯಂತ್ರಣ ಸಾಧಿಸಲು ಅವಶ್ಯಕ ಬದಲಾವಣೆಯನ್ನು ಮಾಡಿ ಸಶಕ್ತಗೊಳಿಸುವುದು ಸರ್ಕಾರದ ಆಡಳಿತ ಸುಧಾರಣೆಯ ಉದ್ದೇಶ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಗುರುವಾರ ಹೇಳಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್, ಸಾರ್ವಜನಿಕರಿಗೆ ಸ್ವಯಂ ಸೇವೆಯ(Self service) ಮುಖಾಂತರ ಸರ್ಕಾರದ ಸೇವಾ ಸೌಲಭ್ಯವನ್ನು ಪಡೆಯಲು ವ್ಯವಸ್ಥೆ ಸೃಷ್ಟಿಸುವುದು ಸರ್ಕಾರದ ಆದ್ಯತೆಯಾಗಿದೆ. ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ನಾಗರಿಕರು 1) 11ಇ ಸ್ಕೆಚ್, 2) ತತ್ಕಾಲ್ ಪೋಡಿ, 3) ವಿಭಾಗ- ಹಾಲಿ ಹೊಂದಿರುವ ಕೃಷಿ ಜಮೀನಿನಲ್ಲಿ ತಮ್ಮ ಶಾಸನಾತ್ಮಕ ಹಕ್ಕಿನಂತೆ ವೈಯಕ್ತಿಕ ಭಾಗಾಂಶವನ್ನು ತೋರಿಸುವ ಸಂಬಂಧ ಸ್ಕೆಚ್, 4) ಭೂಪರಿವರ್ತನಾ ಪೂರ್ವ ಸ್ಕೆಚ್ ಗಳಿಗಾಗಿ ಭೂಮಾಪನ ಇಲಾಖೆಗೆ ಅವರ ಸ್ವಂತ ಜಮೀನಿನ ನಕ್ಷೆಗಾಗಿ ಅರ್ಜಿ ಸಲ್ಲಿಸುತ್ತಾರೆ.

ಪ್ರಸ್ತುತ ಜನರಿಗೆ ತಮ್ಮ ಸ್ವಂತ ಖಾಸಗಿ ಜಮೀನುಗಳಲ್ಲಿ ಮೇಲ್ಕಂಡ ಸ್ಕೆಚ್ ಗಳಿಗಾಗಿ ಸಲ್ಲಿಸುವ ಅರ್ಜಿಗಳನ್ನು ಸರ್ಕಾರಿ ಭೂಮಾಪಕರು ಅಥವಾ ಪರವಾನಗಿ ಭೂಮಾಪಕರುಗಳಿಂದ ಸಿದ್ಧಪಡಿಸಲಾಗುತ್ತದೆ. ಸರ್ಕಾರಿ ಭೂಮಾಪಕರು ಮತ್ತು ಪರವಾನಗಿ ಭೂಮಾಪಕರ ಸಂಖ್ಯೆಯು ಸೀಮಿತವಾಗಿದ್ದು, ಪ್ರತಿ ತಿಂಗಳು ಒಂದು ಲಕ್ಷಕ್ಕಿಂತ ಹೆಚ್ಚಿನ ಅರ್ಜಿಗಳು ನಾಗರಿಕರಿಂದ ಸ್ವೀಕೃತವಾಗುತ್ತವೆ. ಇದರೊಂದಿಗೆ ಹೆಚ್ಚುವರಿಯಾಗಿ ಆರು ಲಕ್ಷಕ್ಕಿಂತ ಹೆಚ್ಚಿನ ಸಂಖ್ಯೆಯ ಅರ್ಜಿಗಳು ಅಳತೆಗಾಗಿ ವಿವಿಧ ಹಂತಗಳಲ್ಲಿ ಬಾಕಿ ಇರುತ್ತವೆ.

ಇದನ್ನು ಓದಿ: ಬೆಂಗಳೂರು: ಬಿಡಿಎ ಆಸ್ತಿ ತೆರಿಗೆ ಪಾವತಿಸಲು ರಿಯಾಯಿತಿ ಘೋಷಣೆ, ಆದರೆ ಕೆಲಸ ಮಾಡದ ಪೋರ್ಟಲ್

ಇದರಿಂದಾಗಿ ನಾಗರಿಕರು ತಮ್ಮ ಸ್ವಂತ ಜಮೀನಿನಲ್ಲಿ ಯಾವುದೇ ರೀತಿಯ ಕ್ರಯ ಮತ್ತು ವಿಭಾಗ ಮಾಡಿಸಿಕೊಳ್ಳಲು ಅಗತ್ಯವಿರುವ ಸ್ಕೆಚ್ ಗಾಗಿ ಹಲವಾರು ತಿಂಗಳುಗಳು ಮತ್ತು ಕೆಲವೊಮ್ಮೆ ವರ್ಷದವರೆಗೆ ಕಾಯಬೇಕಾಗುತ್ತದೆ. ಇದೆಲ್ಲ ಸಮಸ್ಯೆಗೆ ಪರಿಹಾರ ನೀಡಲು ನಾಗರಿಕರೇ ತಮ್ಮ ಜಮೀನಿಗೆ ಸ್ವಂತ ನಕ್ಷೆ ಮಾಡಿಕೊಳ್ಳಲು ಕಂದಾಯ ಇಲಾಖೆ ಯೋಜನೆಯೊಂದನ್ನು ರೂಪಿಸಿದೆ. 11E ಸ್ಕೆಚ್, ತತ್ಕಾಲ ಪೋಡಿ ಇವುಗಳನ್ನು ಜನರು ಸ್ವಂತ ಜಮೀನಿಗೆ ತಾವೇ ಮಾಡಿಕೊಳ್ಳಲು ಅವಕಾಶ ನೀಡುತ್ತಿದ್ದೇವೆ. ಇದರಿಂದ ಸರ್ವೇ ವಿಳಂಬವಾಗಿ, ಸಾರ್ವಜನಿಕರಿಗೆ ಆಗುತ್ತಿದ್ದ ಸಮಸ್ಯೆ ಬಗೆಹರಿಯುತ್ತದೆ ಎಂದು ಅಶೋಕ್ ಅವರು ತಿಳಿಸಿದ್ದಾರೆ.

ಆಸ್ತಿ ನೋಂದಣಿಗೆ ಶೇ. 10ರಷ್ಟು ರಿಯಾಯಿತಿ ಅವಧಿ ವಿಸ್ತರಣೆ
ವಿವಿಧ ಸ್ಥಿರಾಸ್ತಿಗಳ ಮಾರಾಟ ಮತ್ತು ಖರೀದಿ ಮಾಡುವವರಿಗೆ ನೀಡಲಾಗಿದ್ದ ನೋಂದಣಿ ಹಾಗೂ ಮುದ್ರಾಂಕ ಶುಲ್ಕ ರಿಯಾಯಿತಿ ಮುಂದುವರಿಕೆಯಾಗಿದ್ದು, ಶೇ 10 ರಷ್ಟು ರಿಯಾಯತಿ ಮುಂದುವರೆಸುವುದಾಗಿ ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಜನವರಿ 1, 2022 ರಿಂದ ಮಾರ್ಚ್ 31, 2022 ರವರೆಗೆ ಮಾರ್ಗಸೂಚಿ ದರದಲ್ಲಿ ಶೇ. 10ರಷ್ಟು ರಿಯಾಯತಿ ನೀಡಲಾಗಿತ್ತು. ಈ ರಿಯಾಯಿತಿ ಮುಂದುವರಿಸುವಂತೆ ಜನರಿಂದ ಬೇಡಿಕೆ ಬಂದಿದ್ದರಿಂದ ಮುಂದಿನ ಮೂರು ತಿಂಗಳು ಏಪ್ರಿಲ್ 25, 2022 ರಿಂದ ಜುಲೈ 24, 2022ರವರೆಗೆ ಗೈಡ್​ಲೈನ್ಸ್​ ವ್ಯಾಲ್ಯೂ ನಲ್ಲಿ ಶೇ. 10ರಷ್ಟು ರಿಯಾಯತಿ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಕೋವಿಡ್ ಸಂಕಷ್ಟದ ಸಮಯದಲ್ಲಿ ಸ್ಟಾಂಪ್ ರಿಜಿಸ್ಟ್ರೇಷನ್ ದರ ಕಡಿಮೆ ಮಾಡಿದ್ದೆವು. ಶೇ. 10 ರಷ್ಟು ಕಡಿಮೆ ಮಾಡಿದ ಕಾರಣ ಹೆಚ್ಚಿನ ನೋಂದಣಿಗಳಾಗಿವೆ. ಸರ್ಕಾರಕ್ಕೂ ಆದಾಯ ಬಂದಿದೆ. ಜನರಿಗೂ ಅನುಕೂಲವಾಗಿದೆ. ಹಾಗಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಎಲ್ಲ ರೀತಿಯ ಸ್ವತ್ತುಗಳ ಮಾರಾಟ ಮತ್ತು ಖರೀದಿಗೆ ಇದು ಅನ್ವಯಿಸುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ಮಾಡಿ ಆದೇಶ ಮಾಡುತ್ತಿದ್ದೇನೆ ಎಂದು ಸಚಿವರು ಹೇಳಿದ್ದಾರೆ.


Stay up to date on all the latest ರಾಜ್ಯ news
Poll
RBI

ರೈತರಿಗೆ ಕೃಷಿ ಸಾಲ ನೀಡಲು CIBIL ಸ್ಕೋರ್ ಪರಿಗಣಿಸುವ ಆರ್‌ಬಿಐ ಮತ್ತು ಕೇಂದ್ರ ಸರ್ಕಾರದ ನೀತಿ ಸರಿಯೇ?


Result
ಸರಿ
ತಪ್ಪು

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • Srinivasa. N. A

    1.)=ಈ ಬಿಜೆಪಿ ಸರ್ಕಾರದ ನಿರ್ಧಾರಗಳು ಮತ್ತು ಜನ ಹಿತಾಸಕ್ತಿ ಕಾಪಾಡುವಲ್ಲಿ ತಾವುಗಳು ಯಾಸ್ವೀಯಾಗಿದೀರಾ ಇದೇ ರೀತಿ ತಾವು ಇರುವ ಕಾಲ ಜನರ ಯೋಗ ಕ್ಷೆಮ ಬಗ್ಗೆ ಗಮನ ಹರಿಸಿ. 2.) ಕರ್ನಾಟಕ ರಾಜ್ಯದಲ್ಲಿ ಗಾಮಗಳು ಸರ್ವೇ.(+1)ವಿಚಾರದಲಿ ತಾವು ಗಮನಹರಿಸಿ ನಮ್ಮ ರಾಜ್ಯದ ಜನರಿಗೆ ಪರಿಶೀಲನೆ ಮಾಡಿ ತಾವು ಹುತ್ತುವ(ಹುಲಮೆ) ಮಾಡುವ ಭೂಮಿಗೆ ಸಾಗುವಳಿ ಚೀಟಿ ಜಾರಿಗೆ ಮಾಡ ಬೇಕು ಎಂದು ತಮ್ಮಲ್ಲಿ ಮನವಿ
    2 months ago reply
flipboard facebook twitter whatsapp