ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಸಿಐಡಿ ಅಧಿಕಾರಿಗಳಿಂದ 45 ಮಂದಿ ಅಭ್ಯರ್ಥಿಗಳ ವಿಚಾರಣೆ
545 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ವಿಭಾಗದ (ಸಿಐಡಿ) ಅಧಿಕಾರಿಗಳು ಮೊದಲ ಹಂತದಲ್ಲಿ ಆಯ್ಕೆಯಾಗಿರುವ 45 ಅಭ್ಯರ್ಥಿಗಳನ್ನು ವಿಚಾರಣೆಗೊಳಪಡಿಸಿ, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
Published: 21st April 2022 11:38 AM | Last Updated: 21st April 2022 01:38 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: 545 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ವಿಭಾಗದ (ಸಿಐಡಿ) ಅಧಿಕಾರಿಗಳು ಮೊದಲ ಹಂತದಲ್ಲಿ ಆಯ್ಕೆಯಾಗಿರುವ 45 ಅಭ್ಯರ್ಥಿಗಳನ್ನು ವಿಚಾರಣೆಗೊಳಪಡಿಸಿ, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಸಿಐಡಿ ಪೊಲೀಸರು ಮಂಗಳವಾರ 50 ಅಭ್ಯರ್ಥಿಗಳಿಗೆ ನೋಟಿಸ್ ಜಾರಿ ಮಾಡಿದ್ದು, ಬುಧವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಇದರಂತೆ 50 ಮಂದಿಯ ಪೈಕಿ 45 ಅಭ್ಯರ್ಥಿಗಳು ವಿಚಾರಣೆಗೆ ಹಾಜರಾಗಿದ್ದು, ಇವರನ್ನು ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಅಧಿಕಾರಿಗಳು ತಮ್ಮ ಬಳಿಯಿರುವ ಒಎಂಆರ್ ಶೀಟ್ ಹಾಗೂ ಅಭ್ಯರ್ಥಿಗಳ ಬಳಿಯಿರುವ ಒಎಂಆರ್ ಶೀಟ್ ಗಳನ್ನು ಹೋಲಿಸಿ ಪರಿಶೀಲನೆ ನಡೆಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ಇದನ್ನೂ ಓದಿ: ಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಬಿಜೆಪಿ ಸರ್ಕಾರದಿಂದ 200 ಕೋಟಿ ರೂ. ಹಗರಣ: ಕಾಂಗ್ರೆಸ್ ಆರೋಪ
ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳನ್ನು ತಲಾ 50 ಬ್ಯಾಚ್‌ಗಳಲ್ಲಿ ವಿಚಾರಣೆಗೆ ಕರೆಯಲಾಗುವುದು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಅಲ್ಲದೆ, ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಶೋಧ ಕಾರ್ಯ ಭರದಿಂದ ಸಾಗುತ್ತಿದ್ದು, ಅವರ ಪತ್ತೆಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದಿದ್ದಾರೆ.
ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಇದುವರೆಗೆ ಎಂಟು ಮಂದಿಯನ್ನು ಬಂಧಿಸಿದ್ದು, ಈ 8 ಮಂದಿ ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗುತ್ತಿದೆ.
ಕಲಬುರಗಿಯ ಬಿಜೆಪಿ ಮಹಿಳಾ ಮೋರ್ಚಾದ ಮಾಜಿ ಜಿಲ್ಲಾಧ್ಯಕ್ಷೆ ದಿವ್ಯಾ ಹಾಗರಗಿ ಮತ್ತು ಇತರರು ಇನ್ನೂ ತಲೆಮರೆಸಿಕೊಂಡಿದ್ದಾರೆಂದು ಹೇಳಲಾಗುತ್ತಿದೆ.
ಅವರನ್ನು ಸಂಕ್ಷಿಪ್ತವಾಗಿ ಪ್ರಶ್ನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. “ಒಎಂಆರ್ ಶೀಟ್‌ಗಳನ್ನು ಪರಿಶೀಲಿಸುವುದು ಅವರನ್ನು ಕರೆಸುವ ಉದ್ದೇಶವಾಗಿತ್ತು.