ಶನಿವಾರ ರಾತ್ರಿ 9-30 ರಿಂದ ನಮ್ಮ ಮೆಟ್ರೋ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ತಾತ್ಕಾಲಿಕ ಸ್ಥಗಿತ
ನಮ್ಮ ಮೆಟ್ರೋ ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೂ ನಾಳೆ ರಾತ್ರಿ 9-30 ಗಂಟೆಯಿಂದ ತಾತ್ಕಾಲಿಕವಾಗಿ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗುತ್ತದೆ.
Published: 22nd April 2022 11:36 PM | Last Updated: 23rd April 2022 01:45 PM | A+A A-

ನಮ್ಮ ಮೆಟ್ರೋ ರೈಲು
ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೂ ನಾಳೆ ರಾತ್ರಿ 9-30 ಗಂಟೆಯಿಂದ ತಾತ್ಕಾಲಿಕವಾಗಿ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗುತ್ತದೆ.
ಈ ಅವಧಿಯಲ್ಲಿ ಎಂ. ಜಿ. ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ ಎಂದು ಬಿಎಂಆರ್ ಸಿಎಲ್ ಹೇಳಿದೆ.
ನಾಳೆ ರಾತ್ರಿ 9-30 ಗಂಟೆಯಿಂದ ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಗಳ ಮಾರ್ಗದಲ್ಲಿ ಸಿವಿಲ್ ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ರೈಲು ಸೇವೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದ್ದು, ಭಾನುವಾರದಂದು ಎಂದಿನಂತೆ ಬೆಳಗ್ಗೆ 7 ಗಂಟೆಯಿಂದ ವೇಳಾಪಟ್ಟಿ ಪ್ರಕಾರ ರೈಲು ಸೇವೆ ಪುನರಾರಂಭಗೊಳ್ಳಲಿದೆ.
ಹಸಿರು ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್ ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.
Press Release from Chief PRO regarding disruption of Metro Train services betwn INDR & SV RD due to civil maintenance work on 23.04.2022 from 9.30 pm onwards. pic.twitter.com/aD1ZbiioYm
— Srivas Rajagopalan (@srivasrbmrccoi1) April 22, 2022