ಪ್ರಸಕ್ತ ವರ್ಷ ಎರಡೂವರೆ ಲಕ್ಷ ಯುವಕರಿಗೆ ಕೌಶಲ್ಯ ತರಬೇತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಪ್ರಸಕ್ತ ವರ್ಷ ಕನಿಷ್ಠ 2.5 ಲಕ್ಷ ಯುವಕರಿಗೆ ಕೌಶಲ್ಯ ತರಬೇತಿ ನೀಡಲು ರಾಜ್ಯ ಸರ್ಕಾರ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Published: 23rd April 2022 10:03 AM | Last Updated: 23rd April 2022 01:53 PM | A+A A-

ಸಿಎಂ ಬಸವರಾಜ ಬೊಮ್ಮಾಯಿ
ಕಲಬುರಗಿ: ಪ್ರಸಕ್ತ ವರ್ಷ ಕನಿಷ್ಠ 2.5 ಲಕ್ಷ ಯುವಕರಿಗೆ ಕೌಶಲ್ಯ ತರಬೇತಿ ನೀಡಲು ರಾಜ್ಯ ಸರ್ಕಾರ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಲಬುರಗಿಯಲ್ಲಿ ನಿನ್ನೆ ಕೌಶಲ್ಯಾಭಿವೃದ್ಧಿ ನಿಗಮ ಆಯೋಜಿಸಿದ್ದ ಕೌಶಲ್ಯ ರಥ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಯಕ್ರಮದ ಭಾಗವಾಗಿ ಯುವಕರಿಗೆ ಅದರಲ್ಲೂ ಗ್ರಾಮೀಣ ಭಾಗದ ಯುವಜನತೆಗೆ ತರಬೇತಿ ಒದಗಿಸಲಾಗುವುದು ಎಂದು ಹೇಳಿದರು.
‘ಕೌಶಲ್ಯ ರಥ’ ಎಲ್ಲಾ ಗ್ರಾಮ ಪಂಚಾಯತಿಗಳನ್ನು ಒಳಗೊಂಡಿರುತ್ತದೆ. ತಾಂತ್ರಿಕ ಕೌಶಲ್ಯ, ಸೌಂದರ್ಯ ಚಿಕಿತ್ಸೆ ಮತ್ತು ಇತರ ಹಲವು ಕೋರ್ಸ್‌ಗಳ ಕುರಿತು ಉಚಿತ ತರಬೇತಿಯನ್ನು ನೀಡಲಾಗುತ್ತದೆ. ಒಂದು ತಿಂಗಳ ನಂತರ, ಎಲ್ಲಾ ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ. ಕಲ್ಯಾಣ ಕರ್ನಾಟಕ ಪ್ರದೇಶದ ಗರಿಷ್ಠ ಸಂಖ್ಯೆಯ ಯುವಕರಿಗೆ ಕೌಶಲ್ಯ ತರಬೇತಿ ನೀಡಲಾಗುವುದು ಎಂದರು.
ಇದನ್ನೂ ಓದಿ: ರಾಜ್ಯದ 60 ಸಾವಿರ ಯುವಕರನ್ನು ಸ್ವಾವಲಂಬಿಗೊಳಿಸಲು ಸರ್ಕಾರದಿಂದ ತರಬೇತಿ
ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಮಾತನಾಡಿ, ಹಿಂದಿನ ಆರ್ಥಿಕ ವರ್ಷದಲ್ಲಿ 75,000 ಯುವಕರಿಗೆ ಕೌಶಲ್ಯ ತರಬೇತಿ ನೀಡುವ ಗುರಿ ಹೊಂದಿದ್ದು, ಈ ವರ್ಷ 2.50 ಲಕ್ಷ ಯುವಕರಿಗೆ ತರಬೇತಿ ನೀಡಲಾಗಿದೆ ಎಂದರು.