ಪ್ರಧಾನ ಮಂತ್ರಿಗಳ ವಿಡಿಯೊ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ ನಂತರ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಹೊಸ ಶಿಷ್ಟಾಚಾರ ಪ್ರಕಟ: ಸಿಎಂ ಬೊಮ್ಮಾಯಿ
ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಕಳೆದ ಶನಿವಾರ ರಾತ್ರಿ ನಡೆದ ಕಲ್ಲು ತೂರಾಟ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Published: 24th April 2022 02:09 PM | Last Updated: 24th April 2022 02:09 PM | A+A A-

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ತಮ್ಮ ಆರ್.ಟಿ. ನಗರದ ನಿವಾಸದ ಬಳಿ ಜನತಾದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಬೆಂಗಳೂರು: ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಕಳೆದ ಶನಿವಾರ ರಾತ್ರಿ ನಡೆದ ಕಲ್ಲು ತೂರಾಟ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇದನ್ನು ಸಾಮಾನ್ಯವಾದ ಗಲಭೆ ಎಂದು ನಾವು ಪರಿಗಣಿಸಿದ್ದೇವೆ. ಇದರ ಹಿಂದೆ ಪಿತೂರಿ ಇದೆ ಅನಿಸುತ್ತಿದೆ. ಪೊಲೀಸ್ ಠಾಣೆ ಮೇಲೆ ವ್ಯವಸ್ಥಿತವಾಗಿ ಹೀಗೆ ಗುಂಪಿನಲ್ಲಿ ಬಂದು ಕಲ್ಲು ತೂರಾಟ ನಡೆಸಿದ್ದಾರೆ ಎಂದರೆ ಇದೊಂದು ಪೂರ್ವ ನಿಯೋಜಿತ ಸಂಚು ಎಂದು ಅನಿಸುತ್ತಿದ್ದು ಸರ್ಕಾರ ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸುತ್ತದೆ ಎಂದರು.
ಈಗಾಗಲೇ ಬಂಧಿತರಾದವರಿಂದ ಅನೇಕ ಮಹತ್ವದ ಹೇಳಿಕೆಗಳನ್ನು ಪೊಲೀಸರು ತೆಗೆದುಕೊಂಡಿದ್ದಾರೆ. ಇದರ ಹಿಂದಿರುವ ಕೈಗಳನ್ನು ಬಯಲುಗೆಳೆದು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಎಲ್ಲವೂ ತನಿಖೆಯಿಂದ ಗೊತ್ತಾಗಲಿದೆ ಎಂದರು.
#TNIE #Hubballi Government has not taken #HubballiViolence lightly, action will be taken against those responsible following Karnataka model, CM @BSBommai. @XpressBengaluru @Cloudnirad @ramupatil_TNIE @Amitsen_TNIE @Arunkumar_TNIE @compolhdc @HubliCityeGroup @hublimandi @Namma_HD pic.twitter.com/X1dRD31KLV
— Pramodkumar Vaidya (@pramodvaidya06) April 24, 2022
ಪಿಎಸ್ಐ ಅಕ್ರಮ ಹಗರಣವನ್ನು ಕೂಡ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸುತ್ತದೆ ಎಂದರು.
ಕೋವಿಡ್ ಮುನ್ನಚ್ಚರಿಕೆ: ಕೋವಿಡ್ 4ನೇ ಅಲೆ ಎದುರಾಗುವ ಭೀತಿಯಿರುವುದರಿಂದ ಕೇಂದ್ರ ಸರ್ಕಾರ ಜಾಗ್ರತೆಯಾಗಿರಬೇಕೆಂದು ಸೂಚನೆ ನೀಡಿದೆ. ಕಳೆದ ಎಂಟತ್ತು ದಿನಗಳಿಂದ ಅಲ್ಲಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದೆ. ವಿಶೇಷವಾಗಿ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಕೋವಿಡ್ ನ R ಮೌಲ್ಯ 0.95ಕ್ಕೆ ಏರಿಕೆ, 4ನೇ ಅಲೆ ಎದುರಿಸಲು ಸಜ್ಜಾಗುವಂತೆ ಸೂಚನೆ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇದೇ 27ನೇ ತಾರೀಖು ವಿಡಿಯೊ ಕಾನ್ಫರೆನ್ಸ್ ಮೂಲಕ ಇಡೀ ರಾಷ್ಟ್ರದಲ್ಲಿರುವ ಕೋವಿಡ್ ಪರಿಸ್ಥಿತಿ ಮತ್ತು ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳ ವಿಡಿಯೊ ಕಾನ್ಫರೆನ್ಸ್ ಕರೆದಿದ್ದಾರೆ ಎಂದರು.
ಹಿಂದಿನ ಮೂರು ಕೋವಿಡ್ ಅಲೆಗಳ ಸಂದರ್ಭಗಳಲ್ಲಿನ ಅನುಭವಗಳ ಆಧಾರದ ಮೇಲೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಸೂಕ್ತ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ. ಈಗಾಗಲೇ ಆರೋಗ್ಯ ಸಚಿವ ಡಾ ಸುಧಾಕರ್ ಅವರು ಹಲವಾರು ಸೂಚನೆಗಳನ್ನು ನೀಡಿದ್ದಾರೆ. ಪ್ರಧಾನ ಮಂತ್ರಿಗಳ ವಿಡಿಯೊ ಕಾನ್ಫರೆನ್ಸ್ ನಂತರ ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಸ್ಪಷ್ಟವಾದ ಸೂಚನೆಗಳನ್ನು ನೀಡುತ್ತೇವೆ, ಜನರು ಎಚ್ಚರಿಕೆಯಿಂದ ಇರಬೇಕು ಎಂದರು.