ಎಸ್ಸಿ-ಎಸ್ಟಿ ನಕಲಿ ಜಾತಿ ಪ್ರಮಾಣ ಪತ್ರ ಅಕ್ರಮ: 1,097 ಮಂದಿ ವಿರುದ್ಧ ಎಫ್ಐಆರ್ ದಾಖಲು

ಎಸ್ಸಿ-ಎಸ್ಟಿ ಸಮುದಾಯದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರಕ್ಕೆ ವಂಚನೆಗೈದಿರುವ ಆರೋಪದಡಿ 1,097 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

Published: 27th April 2022 11:53 AM  |   Last Updated: 27th April 2022 01:32 PM   |  A+A-


DGP P Ravindranath

ಡಿಜಿಪಿ ಡಾ.ರವೀಂದ್ರನಾಥ್

The New Indian Express

ಬೆಂಗಳೂರು: ಎಸ್ಸಿ-ಎಸ್ಟಿ ಸಮುದಾಯದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರಕ್ಕೆ ವಂಚನೆಗೈದಿರುವ ಆರೋಪದಡಿ 1,097 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಡಿಜಿಪಿ ಡಾ.ರವೀಂದ್ರನಾಥ್ ಅವರು, ರಾಜ್ಯವ್ಯಾಪಿ ನಕಲಿ ಜಾತಿ ಪ್ರಮಾಣ ಪತ್ರ ಸೃಷ್ಟಿಸಿ ಸರಕಾರಿ ಇಲಾಖೆ ಹಾಗೂ ಇತರೆ ಕಡೆಗಳಲ್ಲಿ ಲಾಭ ಪಡೆಯುವ ವಂಚಕರ ವಿರುದ್ಧ ದಾಖಲಾಗಿರುವ ದೂರುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಸಕಾರಕ್ಕೆ ವಂಚನೆಗೈದಿರುವ ಆರೋಪದಡಿ 89 ಸರಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸುವ ಜೊತೆಗೆ, 1,097 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ
.
ಇದರ ಜೊತೆಗೆ ಸುಳ್ಳು ಜಾತಿ ಪ್ರಮಾಣ ವಿತರಿಸಿದ ಒಟ್ಟು 111 ತಹಶೀಲ್ದಾರ್, 108 ಕಂದಾಯ ನಿರೀಕ್ಷಕರು ಮತ್ತು 107 ಗ್ರಾಮ ಲೆಕ್ಕಿಗರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಅದೇ ರೀತಿ, ತಹಶೀಲ್ದಾರ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಶಿಸ್ತು ಕ್ರಮ ಕೈಗೊಳ್ಳುವಂತೆ ಒಟ್ಟು 165 ಪ್ರಕರಣಗಳಲ್ಲಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಅವರು ವಿವರಿಸಿದರು.

ಉದ್ದೇಶಪೂರ್ವಕವಾಗಿ ಅಥವಾ ಉದ್ದೇಶಪೂರ್ವಕವಲ್ಲದೆ ಈ ಪ್ರಮಾಣ ಪತ್ರಗಳನ್ನು ಪಡೆದಿರುವವರು ಅದನ್ನು ರದ್ದುಪಡಿಸಲು ಜಿಲ್ಲಾ ಆಡಳಿತ ಇಲಾಖೆ ಅಥವಾ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬೇಕು, ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಎಚ್ಚರಿಕೆ ನೀಡಿದ್ದಾರೆ.

ಶಾಸಕ ರೇಣುಕಾಚಾರ್ಯ ಅವರ ಸಹೋದರ ಪುತ್ರಿಯ ಪರವಾಗಿ ಎಸ್‌ಸಿ ಪ್ರಮಾಣ ಪತ್ರ ಪಡೆದಿರುವ ಪ್ರಕರಣ ವಿಚಾರಣೆ ಹಂತದಲ್ಲಿದ್ದು, ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿಚಾರಣೆಗೆ ನಿವೃತ್ತ ಐಪಿಎಸ್​ ಅಧಿಕಾರಿ ಕೆಂಪಯ್ಯ ಗೈರು: ವಿಚಾರಣೆಗೆ ಹಾಜರಾಗುವಂತೆ ಮತ್ತೆ ನೋಟಿಸ್ ಜಾರಿ
ನಕಲಿ ಜಾತಿ ಪ್ರಮಾಣಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿಯಾಗಿದ್ದರೂ ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರಿಗೆ ಅಧಿಕಾರಿಗಳು ಮತ್ತೆ ನೋಟಿಸ್ ಜಾರಿ ಮಾಡಿದ್ದಾರೆ.

ಕೆಂಪಯ್ಯ ಅವರ ಮನೆ ಮುಂದೆ ನೋಟಿಸ್ ಅಂಟಿಸಿರುವ ಅಧಿಕಾರಿಗಳು ಮುಂದಿನ ವಿಚಾರಣೆಗೆ ಹಾಜರಾಗದಿದ್ದರೆ, ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಕ್ರಮ ಕೈಗೊಳ್ಳುತ್ತೇವೆಂದು ತಿಳಿಸಿದ್ದಾರೆ.


Stay up to date on all the latest ರಾಜ್ಯ news
Poll
mallikarjuna kharge

ರಾಜಸ್ತಾನದಲ್ಲಿ ಪೈಲಟ್-ಗೆಹ್ಲೋಟ್ ನಡುವೆ ಬಿಕ್ಕಟ್ಟು; ಕೇರಳದಲ್ಲಿ ಸ್ವಪಕ್ಷದವರ ವಿರುದ್ಧ ತರೂರ್ ಫೈಟು: ಕಾಂಗ್ರೆಸ ಒಳಜಗಳ ಬಿಡಿಸಲು ಮಲ್ಲಿಕಾರ್ಜುನ ಖರ್ಗೆ ಗೆ ಸಾಧ್ಯವಾಗುವುದೇ?


Result
ಹೌದು
ಆಗದು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp