ಹೈಕಮಾಂಡ್ ಒಪ್ಪಿಗೆ ನೀಡಿದ ನಂತರ ಸಚಿವ ಸಂಪುಟ ಪುನಾರಚನೆ: ಸಿಎಂ ಬೊಮ್ಮಾಯಿ
ಬಿಜೆಪಿ ಹೈಕಮಾಂಡ್ನಿಂದ ಒಪ್ಪಿಗೆ ಪಡೆದ ನಂತರವೇ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.
Published: 27th April 2022 08:10 AM | Last Updated: 27th April 2022 01:29 PM | A+A A-

ಶಂಕುಸ್ಥಾಪನೆ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಗೋವಿಗೆ ಪೂಜೆ ಸಲ್ಲಿಸಿದರು.
ವಿಜಯಪುರ: ಬಿಜೆಪಿ ಹೈಕಮಾಂಡ್ನಿಂದ ಒಪ್ಪಿಗೆ ಪಡೆದ ನಂತರವೇ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ನಿಂದ ನನಗೆ ಯಾವುದೇ ಸೂಚನೆಗಳೂ ಬಂದಿಲ್ಲ. ನನ್ನನ್ನು ಆಹ್ವಾನಿಸಿದಾಗ ನಾನು ದೆಹಲಿಗೆ ಹೋಗುತ್ತೇನೆ ಮತ್ತು ಅಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಹೆಸರುಗಳನ್ನು ಕೂಡ ಬಹಿರಂಗಪಡಿಸಲಾಗುವುದು. ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ ನಂತರವೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಸ್ಪಷ್ಟಪಡಿಸಿದ್ದಾರೆ.
“ನಾನು ಪ್ರತಿ ಜಿಲ್ಲೆಗೆ ಒಂದು ಸಚಿವ ಸ್ಥಾನವನ್ನು ನೀಡಲು ಬಯಸುತ್ತೇನೆ... ಆದರೆ ಆಯಾ ಜಿಲ್ಲೆಗಳ ರಾಜಕೀಯ ಪರಿಸ್ಥಿತಿಯನ್ನು ಆಧರಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು. ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಎಲ್ಲ ಪ್ರದೇಶಗಳಿಗೂ ಪ್ರಾತಿನಿಧ್ಯ ನೀಡಲು ಸಾಧ್ಯವಾದಷ್ಟು ಪ್ರಯತ್ನ ಮಾಡಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಚಿಂತಕರ ಸಭೆ: ವಿಜಯೇಂದ್ರ ಸಂಪುಟ ಸೇರ್ಪಡೆ ಬಗ್ಗೆ ಚರ್ಚೆ!
ಇದೇ ವೇಳೆ ಸಚಿವ ಸ್ಥಾನವನ್ನು ತ್ಯಾಗ ಮಾಡಲು ಸಿದ್ಧರಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ, ನಾನು ಪಕ್ಷದ ಶಿಸ್ತಿನ ಕಾರ್ಯಕರ್ತ. ನನ್ನ ಮೂರು ದಶಕಗಳ ರಾಜಕೀಯ ಜೀವನದಲ್ಲಿ ನಾನು ಯಾವುದೇ ಹುದ್ದೆ ಅಥವಾ ಹುದ್ದೆಗೆ ಬೇಡಿಕೆ ಇಟ್ಟಿಲ್ಲ. ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ನಾನು ಸಚಿವನಾಗಿ ಮುಂದುವರಿದರೆ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ನನ್ನನ್ನು ಕೈಬಿಟ್ಟರೆ ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತೇನೆಂದು ತಿಳಿಸಿದರು.