ಕೋವಿಡ್ ನಿಯಮಗಳು ಪ್ರತಿಯೊಬ್ಬರ ಜೀವನಶೈಲಿಯ ಭಾಗವಾಗಬೇಕು: ಗೌರವ್ ಗುಪ್ತಾ

ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ನಿರ್ಬಂಧಗಳ ಹೇರುವ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದ್ದು, ಕೋವಿಡ್ ನಿಯಮಗಳು ಪ್ರತೀಯೊಬ್ಬರ ಜೀವನಶೈಲಿಯ ಭಾಗವಾಗಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಬುಧವಾರ ಹೇಳಿದ್ದಾರೆ.

Published: 28th April 2022 11:55 AM  |   Last Updated: 28th April 2022 02:22 PM   |  A+A-


Gaurav Gupta

ಗೌರವ್ ಗುಪ್ತಾ

The New Indian Express

ಬೆಂಗಳೂರು: ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ನಿರ್ಬಂಧಗಳ ಹೇರುವ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದ್ದು, ಕೋವಿಡ್ ನಿಯಮಗಳು ಪ್ರತಿಯೊಬ್ಬರ ಜೀವನಶೈಲಿಯ ಭಾಗವಾಗಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಬುಧವಾರ ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರೂ ಬೂಸ್ಟರ್ ಡೋಸ್ ತೆಗೆದುಕೊಳ್ಳಬೇಕು ಮತ್ತು ಎಲ್ಲಾ ಕೋವಿಡ್ -19 ಮಾನದಂಡಗಳನ್ನು ಅನುಸರಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: ಭಾರತದಲ್ಲಿ ಕೊರೋನಾ ಮತ್ತಷ್ಟು ಏರಿಕೆ: ದೇಶದಲ್ಲಿಂದು 3,303 ಹೊಸ ಕೇಸ್ ಪತ್ತೆ, 39 ಮಂದಿ ಸಾವು

ಇದೇ ವೇಳೆ ಸರ್ಕಾರಿ ಮತ್ತು ಬಿಬಿಎಂಪಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಲಭ್ಯವಿಲ್ಲ ಎಂಬ ವರದಿಗಳ ಕುರಿತ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ನನಗೆ ಮಾಹಿತಿಯಿಲ್ಲ. ಆದರೆ, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಲಭ್ಯವಿದೆ. ಲಭ್ಯವಿಲ್ಲ ಎಂದು ಹೇಳುವುದೇ ಆದರೆ, ಈ ಕುರಿತು ಪರಿಶೀಲನೆ ನಡೆಸಲಾಗುತ್ತದೆ ಎಂದು ತಿಳಿಸಿದರು.

12-18 ವರ್ಷ ವಯಸ್ಸಿನ ವಿದ್ಯಾರ್ಥಿಗಳಿಗೆ ಕಡಿಮೆ ಸಂಖ್ಯೆಯಲ್ಲೇಕೆ ಲಸಿಕೆ ನೀಡಲಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಇದಕ್ಕೆ ಬೇಸಿಗೆ ರಜೆ ಕಾರಣವಾಗಿದೆ. ಶಾಲೆಗಳು ಪುನರಾರಂಭಗೊಂಡ ನಂತರ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗುತ್ತದೆ ಎಂದರು .

ಈ ನಡುವೆ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿಯು, 18 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಶೇಕಡಾ 102 ರಷ್ಟು ಜನರು ಕನಿಷ್ಠ ಒಂದು ಡೋಸ್ ತೆಗೆದುಕೊಂಡಿದ್ದಾರೆ ಮತ್ತು ಶೇಕಡಾ 96 ರಷ್ಟು ಜನರು ಎರಡನೇ ಡೋಸ್ ತೆಗೆದುಕೊಂಡಿದ್ದಾರೆ. "15-18 ವರ್ಷ ವಯಸ್ಸಿನ ಎಲ್ಲಾ ಮಕ್ಕಳು ತಮ್ಮ ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದು, 12-14 ವರ್ಷ ವಯಸ್ಸಿನ ಶೇ. 55 ಜನರು ಒಂದು ಡೋಸ್ ಲಸಿಕೆ ಪಡೆದುಕೊಂಡಿದ್ದಾರೆಂದು ಹೇಳಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣದಲ್ಲಿದೆ: ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ ಮಾಹಿತಿ

ಎಲ್ಲಾ ಬಿಬಿಎಂಪಿಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, 18 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್, 15 ವರ್ಷ ಮೇಲ್ಪಟ್ಟವರಿಗೆ ಕೋವ್ಯಾಕ್ಸಿನ್, 12-14 ವರ್ಷದ ಮಕ್ಕಳಿಗೆ ಕೊರ್ಬೆವ್ಯಾಕ್ಸ್, 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಲಸಿಕೆಯನ್ನು ನೀಡುತ್ತಿದೆ ಎಂದು ತಿಳಿಸಿದೆ.

ಹಸಿ ತ್ಯಾಜ್ಯ ಸಂಸ್ಕರಣಾ ಯಂತ್ರ ಪರಿಶೀಲಿಸಿದ ಗೌರವ್ ಗುಪ್ತಾ
ನಗರದ ಕೋರಮಂಗಲದಲ್ಲಿ ಪ್ರಾಯೋಗಿಕವಾಗಿ ಹಸಿ ತ್ಯಾಜ್ಯ ಸಂಸ್ಕರಣಾ ಯಂತ್ರವನ್ನು ಅಳವಪಡಿಸಲಾಗಿದ್ದು, ಇದರ ಕಾರ್ಯವೈಖರಿ ಯಶಸ್ವಿಯಾದಲ್ಲಿ ವಿವಿಧ ಕಡೆ ಅಳವಡಿಸಲಾಗುವುದು ಎಂದು ಗೌರವ್ ಗುಪ್ತಾ ಅವರು ಹೇಳಿದ್ದಾರೆ.

ಕೋರಮಂಗಲ ವಾರ್ಡ್ ಕಸ-ರಸ ಘಟಕದ ಆವರಣದಲ್ಲಿ ಅಳವಡಿಸಲಾಗಿರುವ ಹಸಿ ತ್ಯಾಜ್ಯ ಸಂಸ್ಕರಣಾ ಯಂತ್ರವನ್ನು ಗುಪ್ತಾ ಅವರು ಪರಿಶೀಲನೆ ನಡೆಸಿದರು.

ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಮೂಲದಲ್ಲಿಯೇ ಸಂಸ್ಕರಿಸುವ ಬಗ್ಗೆ ಅರಿವು ಮೂಜಿಸಲಾಗುತ್ತಿದೆ. ವಿಭಜಿತ ತ್ಯಾಜ್ಯವನ್ನು ಉತ್ಪಾದನೆ ಸ್ಥಳದಲ್ಲಿಯೇ ಸಂಸ್ಕರಿಸಿದಾಗ ತ್ಯಾಜ್ಯ ನಿರ್ವಹಣೆ ಸಮಸ್ಯೆ ನಿವಾರಿಸಲು ಸಾಧ್ಯವಾಗುತ್ತದೆ ಎಂದರು.


Stay up to date on all the latest ರಾಜ್ಯ news
Poll
Nitish_Kumar1

2024 ರ ಲೋಕಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರು ಸಂಯುಕ್ತ ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಬಹುದೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp