ಗೀತಂ ವಿಶ್ವವಿದ್ಯಾಲಯದಲ್ಲಿ ಉಗಾಂಡ ವಿದ್ಯಾರ್ಥಿನಿ ಸಾವು: ಹಾಸ್ಟೆಲ್ ಕ್ಯಾಂಪಸ್ ನಲ್ಲಿ ಬಿಗುವಿನ ವಾತಾವರಣ
ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಬಳ್ಳಾಪುರದ ನಾಗದೇವನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್ ಕ್ಯಾಂಪಸ್‌ನ 6 ನೇ ಮಹಡಿಯಿಂದ ಬಿದ್ದು ಉಗಾಂಡಾದ 24 ವರ್ಷದ ಎಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿನಿ ಹಸೀನಾ ಮೃತಪಟ್ಟಿದ್ದಾರೆ.
Published: 28th April 2022 09:47 AM | Last Updated: 28th April 2022 02:16 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಬಳ್ಳಾಪುರದ ನಾಗದೇವನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್ ಕ್ಯಾಂಪಸ್‌ನ 6 ನೇ ಮಹಡಿಯಿಂದ ಬಿದ್ದು ಉಗಾಂಡಾದ 24 ವರ್ಷದ ಎಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿನಿ ಹಸೀನಾ ಮೃತಪಟ್ಟಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
ಸಂತ್ರಸ್ತೆಯನ್ನು ಹಸೀನಾ ಎಂದು ಗುರುತಿಸಲಾಗಿದೆ. ಬುಧವಾರ ತಡರಾತ್ರಿ ಈ ಘಟನೆ ನಡೆದಿದೆ. ಪಕ್ಕದ ಕಟ್ಟಡದ ಮೇಲ್ಛಾವಣಿಯ ಮೇಲೆ ಬಿದ್ದಿದ್ದ ಬಟ್ಟೆಯನ್ನು ಆರಿಸಲು ಪ್ರಯತ್ನಿಸುತ್ತಿದ್ದಾಗ ಆಕೆ ಕಾಲು ಜಾರಿ ಬಿದ್ದಿದ್ದಾಳೆ ಎಂದು ಹೇಳಲಾಗುತ್ತಿದೆ. 6ನೇ ಮಹಡಿಯಿಂದ ಮೊದಲ ಮಹಡಿ ಮೇಲೆ ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ,
A 24-year-old final year engineering student from Uganda identified as Haseena has died after failing from the 6th floor of the hostel campus of Gitam university at Nagadevanahally in Doddaballapura in Bengaluru rural police limits @XpressBengaluru @Cloudnirad @mg_chetan
— Praveen Kumar (@praveen3537) April 28, 2022
ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕೆಲವು ವಿದ್ಯಾರ್ಥಿಗಳು ಆರೋಪಿಸುತ್ತಿದ್ದಾರೆ. ಆಕ್ರೋಶಭರಿತ ವಿದ್ಯಾರ್ಥಿಗಳು ಗಾಜಿನ ಕಿಟಕಿಯ ಫಲಕಗಳು ಮತ್ತು ಇತರ ವಸ್ತುಗಳನ್ನು ಒಡೆದು ಹಾಕಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಬೇಕಾಯಿತು.
ಕಳೆದ ವಾರದಿಂದ ವಿಶ್ವವಿದ್ಯಾಲಯವು ಆಂಧ್ರಪ್ರದೇಶ ಮತ್ತು ಕರ್ನಾಟಕದ ವಿದ್ಯಾರ್ಥಿಗಳ ನಡುವಿನ ಜಗಳದಿಂದ ಸುದ್ದಿಯಲ್ಲಿದೆ. ಯಾವುದೇ ಅಹಿತಕರ ಘಟನೆಗಳನ್ನು ತಡೆಯಲು ಪೊಲೀಸರು ಮೊಕ್ಕಾಂ ಹೂಡಿದ್ದಾರೆ.