ಹಾವೇರಿ: ಕಾರಿನ ಟೈರ್ ಬ್ಲಾಸ್ಟ್ ಆಗಿ ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರು ಸಾವು
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ಹೊರ ವಲಯದಲ್ಲಿ ಶುಕ್ರವಾರ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Published: 29th April 2022 11:55 PM | Last Updated: 29th April 2022 11:55 PM | A+A A-

ಸಾಂದರ್ಭಿಕ ಚಿತ್ರ
ಹಾವೇರಿ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ಹೊರ ವಲಯದಲ್ಲಿ ಶುಕ್ರವಾರ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿನ ಟೈರ್ ಬ್ಲಾಸ್ಟ್ ಆಗಿ ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗುಜರಾತ ಹಾಗೂ ಕೇರಳ ರಾಜ್ಯಕ್ಕೆ ಸೇರಿದ ಒಟ್ಟು ನಾಲ್ವರು ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನು ಓದಿ: ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ನವ ವರ ಸೇರಿ ಮೂವರ ದುರ್ಮರಣ, ನವ ವಧು ಸ್ಥಿತಿ ಗಂಭೀರ
ಮೃತರನ್ನು ಗುಜರಾತ್ನ ದೀನೇಶ ಬಾಯ್(35), ಲತೀಶ ಬಾಯ್(36), ಸುರೇಶ ಬಾಯ್(38) ಹಾಗೂ ಕೇರಳದ ಸಹಾಲ್(22) ಎಂದು ಗುರುತಿಸಲಾಗಿದೆ. ಕೇರಳದ ದಾನೇಶ(28), ಜೈನಾಬಿ(25) ಗುಜರಾತನ ಅಶ್ವಿನ್(25) ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ನಗರದ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಾವಣಗೆರೆಯಿಂದ ಹುಬ್ಬಳ್ಳಿ ಕಡೆಗೆ ಅತ್ಯಂತ ವೇಗವಾಗಿ ಹೊರಟಿದ್ದ ಗುಜರಾತ್ ಮೂಲದ ಕಾರಿನ ಟೈರ್ ಬ್ಲಾಸ್ಟ್ ಆಗಿದೆ. ಪರಿಣಾಮ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿನ ಮೇಲೆ ಬಿದ್ದಿದೆ.