ಕೇಂದ್ರದ ಅನುಮತಿ ಪಡೆದು ಹೆಚ್ಚುವರಿ 2 ಲಕ್ಷ ಟನ್ ರಾಗಿ ಖರೀದಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕನಿಷ್ಟ ಬೆಂಬಲ ಯೋಜನೆಯಡಿ ಹೆಚ್ಚುವರಿ 2 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಕೇಂದ್ರದ ಅನುಮತಿ ಪಡೆದು ಖರೀದಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
Published: 29th April 2022 04:00 PM | Last Updated: 29th April 2022 06:28 PM | A+A A-

ರಾಗಿ
ದಾವಣಗೆರೆ: ಕನಿಷ್ಟ ಬೆಂಬಲ ಯೋಜನೆಯಡಿ ಹೆಚ್ಚುವರಿ 2 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಕೇಂದ್ರದ ಅನುಮತಿ ಪಡೆದು ಖರೀದಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಅವರು ಇಂದು ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು.
2 ಲಕ್ಷ ಟನ್ ಹಾಗೂ 1 ,14,000 ಟನ್ ರಾಗಿ ಖರೀದಿ ಮಾಡಲು ತೀರ್ಮಾನಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ರಾಗಿ ಖರೀದಿ ಮಾಡಬೇಕೆಂಬ ಬೇಡಿಕೆ ಇದ್ದು, ಈ ಬಗ್ಗೆ ಕೇಂದ್ರ ಆಹಾರ ಸಚಿವರೊಂದಿಗೆ ಚರ್ಚಿಸಿ ಅನುಮತಿ ಪಡೆಯಲಾಗುವುದು ಎಂದರು.
ಕನ್ನಡವೇ ಸಾರ್ವಭೌಮ ಹಿಂದಿ ಭಾಷೆಯ ಬಗ್ಗೆ ಪಕ್ಷದ ನಿಲುವೇನು ಎಂಬುದಕ್ಕೆ ಪ್ರತಿಕ್ರಿಯಿಸಿ, ಸ್ಪಷ್ಟವಾಗಿ ತಿಳಿಸಲಾಗಿದೆ. ಭಾಷಾವಾರು ಪ್ರಾಂತ್ಯಗಳಾದ ಮೇಲೆ ಪ್ರಾದೇಶಿಕತೆಗೆ ಮಹತ್ವ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ , ಬೇರಾವುದೇ ಭಾಷೆ ಅಲ್ಲ ಎಂದರು.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಪ್ರಾದ್ಯಾಪಕರ ನೇಮಕಾತಿ, ಪಿಎಸ್ ಐ ಪರೀಕ್ಷೆ ಹಗರಣ ಬಗ್ಗೆ ಪ್ರತಿಕ್ರಿಯೆ ನೀಡಿ, ಪಿಎಸ್ಐ ಪರೀಕ್ಷೆ ಅಕ್ರಮದ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ, ಈಗ ಸಿಐಡಿಗೆ ವಹಿಸಲಾಗಿದೆ. ಹಗರಣದ ಮೂಲಕ್ಕೆ ತಲುಪಲಾಗುವುದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಪರೀಕ್ಷಾ ಹಗರಣಗಳು ಸರ್ಕಾರದ ವರ್ಚಿಸ್ಸಿಗೆ ಧಕ್ಕೆಯಾಗುವುದಿಲ್ಲವೇ ಎಂಬುದಕ್ಕೆ ಪ್ರತಿಕ್ರಯಿಸಿ, ಇಲ್ಲಿ ಸರ್ಕಾರದ ಪ್ರಶ್ನೆ ಬರುವುದಿಲ್ಲ. ಯೂಪಿಎಸ್ಸಿ ಪರೀಕ್ಷಾ ಮಾದರಿಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ಸರ್ಕಾರವೇ ಕಂಡುಹಿಡಿದು ತನಿಖೆ ನಡೆಸುತ್ತಿದೆ. ಪರೀಕ್ಷೆಗಳು ಪ್ರಾಮಾಣಿಕವಾಗಿ ನಡೆಯಬೇಕು. ಯಾವುದೇ ಅವ್ಯವಹಾರ ನಡೆದಿದ್ದರೂ ಅದನ್ನು ಸದೆಬಡಿಯಲಾಗುವುದು ಎಂದರು.