ಕೋವಿಡ್-19: ಬೆಂಗಳೂರಿನಲ್ಲಿ 120 ಸೇರಿ ರಾಜ್ಯದಲ್ಲಿಂದು 126 ಹೊಸ ಪ್ರಕರಣ ಪತ್ತೆ, 76 ಚೇತರಿಕೆ, 2 ಸಾವು
ದೇಶದಲ್ಲಿ ಕೋವಿಡ್-19 ನಾಲ್ಕನೇ ಅಲೆಯ ಭೀತಿ ಹೆಚ್ಚಾಗುತ್ತಿರುವಂತೆಯೇ, ರಾಜ್ಯದಲ್ಲೂ ಪ್ರಕರಣಗಳ ಸಂಖ್ಯೆಯಲ್ಲಿ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಆದರೆ, ನಿನ್ನೆಗಿಂತ ಇಂದು ಸ್ವಲ್ಪ ಕಡಿಮೆಯಾಗಿದ್ದು, 126 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,47,622ಕ್ಕೆ ಏರಿಕೆಯಾಗಿದೆ.
Published: 30th April 2022 08:53 PM | Last Updated: 30th April 2022 08:53 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ದೇಶದಲ್ಲಿ ಕೋವಿಡ್-19 ನಾಲ್ಕನೇ ಅಲೆಯ ಭೀತಿ ಹೆಚ್ಚಾಗುತ್ತಿರುವಂತೆಯೇ, ರಾಜ್ಯದಲ್ಲೂ ಪ್ರಕರಣಗಳ ಸಂಖ್ಯೆಯಲ್ಲಿ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಆದರೆ, ನಿನ್ನೆಗಿಂತ ಇಂದು ಸ್ವಲ್ಪ ಕಡಿಮೆಯಾಗಿದ್ದು, 126 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,47,622ಕ್ಕೆ ಏರಿಕೆಯಾಗಿದೆ.
76 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 39,05,736 ಆಗಿದೆ. ರಾಜ್ಯದಲ್ಲಿ ಸದ್ಯ 1,785 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
Today's Media Bulletin 30/04/2022
— K'taka Health Dept (@DHFWKA) April 30, 2022
Please click on the link below to view bulletin.https://t.co/rXzVtuffEE @PMOIndia @MoHFW_INDIA @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mangalurucorp @DDChandanaNews @PIBBengaluru @KarnatakaVarthe pic.twitter.com/WrJvP8p8JU
ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 40,059ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 120 ಪ್ರಕರಣ ಪತ್ತೆಯಾಗಿದ್ದು, ಚಿಕ್ಕಮಗಳೂರು 2, ಚಿತ್ರದುರ್ಗ 1, ಕಲಬುರಗಿ 1, ಉಡುಪಿ ಹಾಗೂ ಮೈಸೂರಿನಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ. ಉಳಿದೆಲ್ಲಾ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.