ಆಸಿಡ್ ದಾಳಿ ಪ್ರಕರಣ: ಸಂತ್ರಸ್ತ ಯುವತಿಯ ಡೈಯಿಂಗ್ ಡಿಕ್ಲರೇಷನ್ ದಾಖಲಿಸಿಕೊಂಡ ಮ್ಯಾಜಿಸ್ಟ್ರೇಟ್
ಪ್ರೀತಿಸಿ ಮದುವೆಯಾಗುವಂತೆ ಪೀಡಿಸುತ್ತಿದ್ದ ಯುವಕನಿಂದ ಆಸಿಡ್ ದಾಳಿಗೆ ತುತ್ತಾಗಿ ನಗರದ ಸೈಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ಯುವತಿಯ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ದಾಖಲಿಸಿಕೊಂಡಿದ್ದಾರೆ.
Published: 30th April 2022 12:47 PM | Last Updated: 30th April 2022 01:48 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಪ್ರೀತಿಸಿ ಮದುವೆಯಾಗುವಂತೆ ಪೀಡಿಸುತ್ತಿದ್ದ ಯುವಕನಿಂದ ಆಸಿಡ್ ದಾಳಿಗೆ ತುತ್ತಾಗಿ ನಗರದ ಸೈಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ಯುವತಿಯ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ದಾಖಲಿಸಿಕೊಂಡಿದ್ದಾರೆ.
ಇಂಡಿ ಯನ್ ಎವಿಡೆನ್ಸ್ ಆಕ್ಟ್ 32(1) ಅಡಿಯಲ್ಲಿ ಆಸ್ಪತ್ರೆಯಲ್ಲಿ ವೈದ್ಯರ ಸಮ್ಮುಖದಲ್ಲಿ ಮ್ಯಾಜಿಸ್ಟ್ರೇಟ್ ಡೈಯಿಂಗ್ ಡಿಕ್ಲರೇಷನ್ ನ್ನು ಇಂದು ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತೆ ಯುವತಿ ಆರೋಪಿ ನಾಗೇಶ್ ಜೊತೆಗಿನ ಪರಿಚಯ, ಕಳೆದ ಏಳು ವರ್ಷಗಳಲ್ಲಿ ನಡೆದ ಘಟನೆ, ಪ್ರೀತಿಸಲು ಯಾವ ರೀತಿ ಪೀಡಿಸುತ್ತಿದ್ದ ಎಂಬುದನ್ನು ಸಂಪೂರ್ಣವಾಗಿ ವಿವರಿಸಿದ್ದಾಳೆ.
ಯುವತಿಯ ಆರೋಗ್ಯ ಸ್ಥಿತಿ ಚಿಂತಾಜನಕವಾಗಿರುವುದರಿಂದ ವೈದ್ಯರ ಸಮ್ಮುಖದಲ್ಲಿ ಮ್ಯಾಜಿಸ್ಟ್ರೇಟ್ ಡೈಯಿಂಗ್ ಡಿಕ್ಲರೇಷನ್ ದಾಖಲಿಸಿಕೊಂಡಿದ್ದಾರೆ. ವ್ಯಕ್ತಿ ಸಾಯುವ ಮುನ್ನ ತನ್ನ ಸಾವಿಗೆ ಕಾರಣ ತಿಳಿಸುವುದನ್ನು ಡೈಯಿಂಗ್ ಡಿಕ್ಲರೇಷನ್ ಎಂದು ಕರೆಯಲಾಗುತ್ತದೆ.
ಇದನ್ನೂ ಓದಿ: ಆಸಿಡ್ ದಾಳಿಗೆ ತುತ್ತಾದ ಸಂತ್ರಸ್ತ ಯುವತಿಯ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸುತ್ತದೆ: ಡಾ ಕೆ.ಸುಧಾಕರ್
ಆರೋಪಿಗೆ ಕಠಿಣ ಶಿಕ್ಷೆ ನೀಡಲು ಡೈಯಿಂಗ್ ಡಿಕ್ಲರೇಷನ್ ಸಹಕಾರಿಯಾಗುತ್ತದೆ. ಇನ್ನೊಂದೆಡೆ ಆರೋಪಿ ನಾಗೇಶ್ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.