ಬೆಂಗಳೂರಿನಲ್ಲಿ ಮುಂದುವರಿದ 'ಮಹಾಮಳೆ', ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರು

ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ್ದು, ದಿನದ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಯಿತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ್ದು, ದಿನದ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಯಿತು.

ವಿಧಾನಸೌಧ, ಕೆ.ಆರ್.ವೃತ್ತ, ಶಿವಾಜಿನಗರ, ಲಾಲ್ ಬಾಗ್ ರಸ್ತೆ, ಕೆಂಗಲ್ ಹನುಮಂತಯ್ಯ ರಸ್ತೆ, ಜಯನಗರ, ಜೆ.ಪಿ.ನಗರ, ಮೆಜೆಸ್ಟಿಕ್, ಸಿಟಿ ಮಾರುಕಟ್ಟೆ, ಹೆಬ್ಬಾಳ, ಯಶವಂತಪುರ, ಪೀಣ್ಯ, ವಿಜಯನಗರ ಹಾಗೂ ಎಚ್ ಎಎಲ್ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗುತ್ತಿದೆ.

ಕಳೆದ ಎರಡು ದಿನಗಳಿಂದ ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಸಹ ವರುಣನ ಆರ್ಭಟ ಜೋರಾಗಿದ್ದು, ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com