ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 992 ಸೇರಿ ರಾಜ್ಯದಲ್ಲಿ 1287 ಮಂದಿಗೆ ಪಾಸಿಟಿವ್; ಇಬ್ಬರು ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1287 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,08,650ಕ್ಕೆ ಏರಿಕೆಯಾಗಿದೆ.
Published: 01st August 2022 07:32 PM | Last Updated: 01st August 2022 07:32 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1287 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,08,650ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40106ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನು ಓದಿ: ಕೋವಿಡ್-19: 24 ಗಂಟೆಗಳ ಅವಧಿಯಲ್ಲಿ 16,464 ಹೊಸ ಪ್ರಕರಣಗಳು, 24 ಜನರು ಸಾವು
ಬೆಂಗಳೂರಿನಲ್ಲಿ ಇಂದು 992 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,37,060ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 1531 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,57,643ಕ್ಕೆ ಏರಿಕೆಯಾಗಿದೆ. ಇನ್ನು 10859 ಸಕ್ರಿಯ ಪ್ರಕರಣಗಳಿವೆ.
ಇಂದಿನ 01/08/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/Xi8jROQ0o5 @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/NWf3SnCeZ1
— K'taka Health Dept (@DHFWKA) August 1, 2022