ಸಿದ್ದರಾಮೋತ್ಸವಕ್ಕೆ ತೆರಳುತ್ತಿದ್ದ ಕ್ರೂಸರ್‌ ಪಲ್ಟಿ: ಓರ್ವ ಸಾವು, ನಾಲ್ವರಿಗೆ ಗಾಯ

ದಾವಣಗೆರೆಯಲ್ಲಿ ಬುಧವಾರ ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಹೊರಟಿದ್ದ ಕ್ರೂಷರೊಂದು ಮಂಗಳವಾರ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೊಲಗೇರಿ ಕ್ರಾಸ್ ಬಳಿ ಅಪಘಾತಕ್ಕೀಡಾಗಿದ್ದು,...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬಾಗಲಕೋಟೆ: ದಾವಣಗೆರೆಯಲ್ಲಿ ಬುಧವಾರ ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಹೊರಟಿದ್ದ ಕ್ರೂಷರೊಂದು ಮಂಗಳವಾರ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೊಲಗೇರಿ ಕ್ರಾಸ್ ಬಳಿ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು  ಬೀಳಗಿ ತಾಲೂಕಿನ ಚಿಕ್ಕ ಆಲಗುಂಡಿ ಗ್ರಾಮದ ಪ್ರಕಾಶ್ ಬಡಿಗೇರ್(35) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, 8 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರಲ್ಲಿ ಇಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು 9 ಜನರನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನು ಕುರಿತು ಟ್ವೀಟ್ ಮಾಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ನನ್ನ ಹುಟ್ಟುಹಬ್ಬದ ಸಮಾರಂಭಕ್ಕಾಗಿ ದಾವಣಗೆರೆಗೆ ಆಗಮಿಸುತ್ತಿದ್ದ ಮುದೋಳ ತಾಲೂಕಿನ ಪ್ರಕಾಶ್ ಬಡಿಗೇರ್ ಎಂಬುವವರು ರಸ್ತೆ ಅಪಘಾತದಲ್ಲಿ‌ ಮೃತಪಟ್ಟ ಸುದ್ದಿ ತಿಳಿದು ಆಘಾತವಾಯಿತು. ಮೃತ ಪ್ರಕಾಶ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ನನ್ನ ಹುಟ್ಟುಹಬ್ಬದ ಸಮಾರಂಭಕ್ಕಾಗಿ ದಾವಣಗೆರೆಗೆ ವಾಹನಗಳಲ್ಲಿ ಆಗಮಿಸುವವರು ಅನಗತ್ಯ ಧಾವಂತ ತೋರದೆ ಎಚ್ಚರಿಕೆಯಿಂದ ವಾಹನ ಚಲಾಯಿಸಿಕೊಂಡು ಬರಬೇಕೆಂದು ಕೈಮುಗಿದು ಮನವಿ ಮಾಡಿಕೊಳ್ಳುತ್ತಿದ್ದೇನೆ. ನಿಮ್ಮ ಜೀವ ನಮಗೆ‌ ಮಾತ್ರವಲ್ಲ ನಿಮ್ಮನ್ನು ನಂಬಿರುವ ಕುಟುಂಬಕ್ಕೂ ಅಷ್ಟೇ ಅಮೂಲ್ಯ ಎಂಬ ಅರಿವಿರಲಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com