ಭಟ್ಕಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರವಾಸ: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವಾಹ ಪೀಡಿತ ಭಟ್ಕಳಕ್ಕೆ ಬುಧವಾರ ಭೇಟಿ ನೀಡಲಿದ್ದಾರೆ.ಬೆಂಗಳೂರಿನಿಂದ ವಿಮಾನದಲ್ಲಿ ಗೋವಾಕ್ಕೆ ಬಂದು ಅಲ್ಲಿಂದ ರಸ್ತೆ ಮೂಲಕ ಭಟ್ಕಳಕ್ಕೆ ಪ್ರಯಾಣಿಸಲಿದ್ದಾರೆ.
Published: 03rd August 2022 12:48 PM | Last Updated: 03rd August 2022 12:48 PM | A+A A-

ಬಸವರಾಜ ಬೊಮ್ಮಾಯಿ
ಕಾರವಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವಾಹ ಪೀಡಿತ ಭಟ್ಕಳಕ್ಕೆ ಬುಧವಾರ ಭೇಟಿ ನೀಡಲಿದ್ದಾರೆ.
ಬೆಂಗಳೂರಿನಿಂದ ವಿಮಾನದಲ್ಲಿ ಗೋವಾಕ್ಕೆ ಬಂದು ಅಲ್ಲಿಂದ ರಸ್ತೆ ಮೂಲಕ ಭಟ್ಕಳಕ್ಕೆ ಪ್ರಯಾಣಿಸಲಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಲಿದ್ದಾರೆ, ಕಂದಾಯ ಸಚಿವ ಆರ್. ಅಶೋಕ ಅವರೂ ಜೊತೆಗಿರಲಿದ್ದಾರೆ.
ಸೋಮವಾರ ತಡರಾತ್ರಿಯಿಂದ ಸುರಿದ ಭಾರಿ ಮಳೆಯಿಂದಾಗಿ ಭಟ್ಕಳದಲ್ಲಿ ಹಿಂದೆಂದೂ ಕಂಡರಿಯದಂಥ ಪ್ರವಾಹ ಉಂಟಾಗಿತ್ತು. ದಾಖಲೆಯ 52 ಸೆಂ.ಮೀ ಮಳೆಯಾಗಿತ್ತು.
ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟಿದ್ದರು. ನೂರಾರು ಮನೆಗಳು, ಅಂಗಡಿಗಳು, ಕೃಷಿ ಜಮೀನಿಗೆ ಹಾನಿಯಾಗಿದೆ. 4000ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ ಬುಧವಾರ ಸಂಜೆ ವೇಳೆಗೆ ಅವರು ಭಟ್ಕಳ ತಲುಪಲಿದ್ದಾರೆ. ಭಟ್ಕಳ ಸುತ್ತಮುತ್ತಲಿನ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.