ಜನರಿಗೆ ತೊಂದರೆಯಾಗುವಂತ ಹುಲಿ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿಯಿಲ್ಲ: ವಿ.ಸೋಮಣ್ಣ

ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಣೆ ಮಾಡುವುದಿಲ್ಲ. ಇಲ್ಲಿ ಹುಲಿ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ವಿ.ಸೋಮಣ್ಣ
ವಿ.ಸೋಮಣ್ಣ

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಣೆ ಮಾಡುವುದಿಲ್ಲ. ಇಲ್ಲಿ ಹುಲಿ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಮಲೆಮಹದೇಶ್ವರ ಬೆಟ್ಟದ ವ್ಯಾಪ್ತಿಯ ಪೊನ್ನಾಚಿಯಲ್ಲಿ ಆಲಂಬಾಡಿ ಮಠದ ಕಟ್ಟಡದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಣೆ ಮಾಡುವುದಿಲ್ಲ, ಕಾಡಂಚಿನ ಜನರಿಗೆ ಅಡಚಣೆ ಹಾಗೂ ಅನಾನುಕೂಲವಾಗುವಂತಹ ಯೋಜನೆಗಳಿಗೆ ಸರ್ಕಾರದ ಸಮ್ಮತಿಯಿಲ್ಲ. ಹೀಗಾಗಿ ಮಲೆ ಮಹದೇಶ್ವರಬೆಟ್ಟ ವನ್ಯಜೀವಿ ಧಾಮವನ್ನು ಹುಲಿ ಸಂರಕ್ಷಿತ ಪ್ರದೇಶ ಮಾಡಲು ಬಿಡುವುದಿಲ್ಲ’ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಬೆಟ್ಟ ವ್ಯಾಪ್ತಿಯ ಆಲಂಬಾಡಿ ಮಠದ ಕಟ್ಟಡ ಭೂಮಿ ಪೂಜೆ, ಬಾಲಕರ ವಸತಿ ನಿಲಯ ಉದ್ಘಾಟನೆ ಹಾಗೂ ಸಾಲೂರು ಮಠದ ಪಟ್ಟದ ಗುರುಸ್ವಾಮಿ ಅವರ ಗುರುವಂದನಾ ಮಹೋತ್ಸವದಲ್ಲಿ ಮಾತನಾಡಿದ ಅವರು, ‘ಮಹದೇಶ್ವರಬೆಟ್ಟ ಭಾಗದಲ್ಲಿ ಬಹುತೇಕ ಹಳ್ಳಿಗಳು ಕಾಡಂಚಿನಲ್ಲಿವೆ. ಈ ಕಾಡನ್ನೂ ಹುಲಿ ಸಂರಕ್ಷಿತ ಪ್ರದೇಶ ಮಾಡಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಜನರ ಜೀವನ ಹಿತ ದೃಷ್ಟಿಯಿಂದ ಇದು ಸೂಕ್ತ ಯೋಜನೆ ಅಲ್ಲ’ ಎಂದರು.

ಇಲ್ಲಿ ಹುಲಿ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ. ಮಲೆಮಹದೇಶ್ವರ ಬೆಟ್ಟ ಇತಿಹಾಸ ಪ್ರಸಿದ್ಧ ಕ್ಷೇತ್ರ. ಈ ಭಾಗದಲ್ಲಿ ಕಾಡಂಚಿನ ಗ್ರಾಮಗಳು ಹೆಚ್ಚಾಗಿವೆ. ಕಾಡಿನೊಳಗೂ ಗ್ರಾಮಗಳಿವೆ. ಈ ಭಾಗದ ಜನರಿಗೆ, ಬೆಟ್ಟಕ್ಕೆ ಬರುವ ಭಕ್ತರಿಗೆ ತೊಂದರೆಯಾಗಬಾರದು. ಮಲೆಮಹದೇಶ್ವರ ಬೆಟ್ಟಕ್ಕೆ ಈ ಭಾಗದ ರೈತರೇ ವಾರಸುದಾರರು. ಸರ್ಕಾರ ಅನುಷ್ಠಾನಗೊಳಿಸುವ ಯಾವುದೇ ಯೋಜನೆಗಳು ಜನರಿಗೆ ಅನುಕೂಲವೇಗಬೇಕೇ ಹೊರತು ಅನಾನುಕೂಲವಾಗಬಾರದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com