ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ: ಅದೃಷ್ಟವಶಾತ್ 25 ಮಕ್ಕಳು ಬಚಾವ್
ರಾಮನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ಇದರ ನಡುವೆ ಇಂದು ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಶಾಲೆಯ ಬಸ್ ಉರುಳಿದಿದ್ದಿದ್ದು ದೊಡ್ಡ ದುರಂತ ತಪ್ಪಿದೆ.
Published: 04th August 2022 04:49 PM | Last Updated: 04th August 2022 04:49 PM | A+A A-

ಪ್ರತ್ಯಕ್ಷ ದೃಶ್ಯ
ರಾಮನಗರ: ರಾಮನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ಇದರ ನಡುವೆ ಇಂದು ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಶಾಲೆಯ ಬಸ್ ಉರುಳಿದಿದ್ದಿದ್ದು ದೊಡ್ಡ ದುರಂತ ತಪ್ಪಿದೆ.
25 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್ ಹುಲಿಕಲ್ ಗ್ರಾಮದ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಬಸ್ ನಲ್ಲಿದ್ದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾನಸ ಗಂಗೋತ್ರಿ ಶಾಲೆಗೆ ಸೇರಿದ ಬಸ್ ಇದಾಗಿದ್ದು ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. ಇನ್ನು ಅಪಘಾತದಲ್ಲಿ ವಿದ್ಯಾರ್ಥಿಗಳಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಗಾಯಗೊಂಡಿರುವ ಮಕ್ಕಳನ್ನು ಕುದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಸ್ಥಳಕ್ಕೆ ಕುದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.