ಜಾಗತಿಕ ಹೂಡಿಕೆದಾರರ ಸಮಾವೇಶ: ಟೋಕಿಯೋ ಕನ್ನಡ ಬಳಗಕ್ಕೆ ನಿರಾಣಿ ಆಹ್ವಾನ

ನವೆಂಬರ್ ನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ಸಿದ್ಧತೆ ಚುರುಕುಗೊಳಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ್ ಆರ್. ನಿರಾಣಿ ಜಪಾನ್ ಗೆ ಭೇಟಿ ನೀಡಿದ್ದಾರೆ.
ಡಾ. ಮುರುಗೇಶ್  ಆರ್.ನಿರಾಣಿ
ಡಾ. ಮುರುಗೇಶ್ ಆರ್.ನಿರಾಣಿ

ಟೋಕಿಯೋ: ನವೆಂಬರ್ ನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ಸಿದ್ಧತೆ ಚುರುಕುಗೊಳಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ್ ಆರ್. ನಿರಾಣಿ ಜಪಾನ್ ಗೆ ಭೇಟಿ ನೀಡಿದ್ದಾರೆ.

ಜಾಗತಿಕ ಹೂಡಿಕೆದಾರರು ಸಮಾವೇಶ ಹಿನ್ನೆಲೆಯಲ್ಲಿ ಉದ್ಯಮಿಗಳೊಂದಿಗೆ ಸಮಾಲೋಚನೆ ನಡೆಸಲು ನಿರಾಣಿ ನೇತೃತ್ವದ ನಿಯೋಗ ಜಪಾನ್ ಪ್ರವಾಸ ಕೈಗೊಂಡಿದೆ. ಈ ಸಂದರ್ಭದಲ್ಲಿ ಟೋಕಿಯೋ ಕನ್ನಡ ಬಳಗ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡರು. ಅಲ್ಲದೇ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಆಹ್ವಾನ ನೀಡಿದರು.

ಉದ್ಯಮ ಕ್ಷೇತ್ರದಲ್ಲಿ ಕರ್ನಾಟಕ ಮತ್ತು ಜಪಾನ್ ನಡುವಿನ ಔದ್ಯಮಿಕ ಸಂಬಂಧ ಉತ್ತಮವಾಗಿದೆ. ವಿಶೇಷವಾಗಿ ಜಪಾನ್ ಗೆ ಸಂಬಂಧಿಸಿದಂತೆ ತುಮಕೂರಿನ ವಸಂತನರಸಪುರದಲ್ಲಿ ಜಪಾನೀಸ್ ಕೈಗಾರಿಕಾ ಟೌನ್ ಶಿಪ್ ಸ್ಥಾಪಿಸಲಾಗಿದೆ. ಅದ್ದಕ್ಕಾಗಿ 519. 55 ಎಕರೆ ಭೂಮಿ ಮೀಸಲಿಡಲಾಗಿದ್ದು, ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಜಪಾನ್ ಕಂಪನಿಗಳಿಂದ ನೇರ ಹೂಡಿಕೆಗೆ ಎಲ್ಲಾ ರೀತಿಯ ಸಹಾಕರ ಒದಗಿಸಲಾಗುವುದು ಎಂದು ನಿರಾಣಿ ಭರವಸೆ ನೀಡಿದರು.

ಎಲ್ಲಾ ಕ್ಷೇತ್ರಗಳಲ್ಲಿ ವಿದೇಶಿ ಕಂಪನಿಗಳ ನೇರ ಹೂಡಿಕೆಯನ್ನು ರಾಜ್ಯ ಸರ್ಕಾರ ಉತ್ತೇಜಿಸುತ್ತದೆ. ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಆಕರ್ಷಿಸಿರುವ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದು, ದೇಶದ ಒಟ್ಟಾರೆ ವಿದೇಶಿ ನೇರ ಹೂಡಿಕೆಯಲ್ಲಿ ರಾಜ್ಯದ ಪಾಲು ಶೇ. 38 ರಷ್ಟಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಟೋಕಿಯೊ ಕನ್ನಡ ಬಳಗದ ಗಣೇಶ್ ಕೃಷ್ಣಯ್ಯ, ಟೋಕಿಯೋ ಕನ್ನಡ ಬಳಗದಲ್ಲಿ 1,000ಕ್ಕೂ ಹೆಚ್ಚು ಸದಸ್ಯರಿದ್ದು, ಜಪಾನಿನ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಹಲವು ಕನ್ನಡಿಗರು ಇಲ್ಲಿನ ಸರ್ಕಾರದ ಗೌರವಕ್ಕೆ ಪಾತ್ರರಾಗಿದ್ದಾರೆ ಎದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com