ರಾಜ್ಯದಲ್ಲಿ ಕೊರೋನಾ ಹೆಚ್ಚಳ, ಕೋವಿಡ್ ಪರೀಕ್ಷೆ ಕಡಿಮೆ ಮಾಡಿದ ರಾಜ್ಯ ಸರ್ಕಾರಕ್ಕೆ ಕೇಂದ್ರ ಪತ್ರ
ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು, ಏಳು ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಕಡಿಮೆಯಾಗಿದೆ...
Published: 07th August 2022 12:54 PM | Last Updated: 07th August 2022 12:54 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು, ಏಳು ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಕಡಿಮೆಯಾಗಿದೆ ಮತ್ತು 24 ಜಿಲ್ಲೆಗಳಲ್ಲಿ ಪ್ರಕರಣಗಳು ಹೆಚ್ಚುತ್ತಿವೆ ಎಂದು ಹೇಳಿದೆ.
ಕಳೆದ ಒಂದು ವಾರದ ಅವಧಿಯಲ್ಲಿ ಅಂದರೆ ಜುಲೈ 28ಕ್ಕೆ ಕೊನೆಗೊಂಡ ವಾರಕ್ಕೆ ಹೋಲಿಸಿದರೆ ಆಗಸ್ಟ್ 24ಕ್ಕೆ ಕೊನೆಗೊಳ್ಳುವ ವಾರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚು ವರದಿಯಾಗಿರುವ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಪತ್ರದಲ್ಲಿ ಉಲ್ಲೇಖಿಸಿದೆ.
ಇದನ್ನು ಓದಿ: ಕೋವಿಡ್-19 ಏರಿಳಿತ: ರಾಜ್ಯದಲ್ಲಿಂದು 1,694 ಹೊಸ ಪ್ರಕರಣ ಪತ್ತೆ, 1 ಸಾವು
ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ರಾಜ್ಯ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಅವರಿಗೆ ಪತ್ರ ಬರೆದಿದ್ದು, ಸೋಂಕು ಹರದಡಂತೆ ತಡೆಯಲು ತುರ್ತು ಕ್ರಮ ಕೈಗೊಳ್ಳಿ. 24 ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಜಾಸ್ತಿ ಇದೆ. ಮುಂದಿನ ತಿಂಗಳುಗಳಲ್ಲಿ ಹಬ್ಬಗಳ ಕಾರಣದಿಂದ ಸಾಮೂಹಿಕವಾಗಿ ಜನ ಸೇರುವ ಸಂಭವ ಇರುತ್ತದೆ. ಹೀಗಾಗಿ ಎಲ್ಲಾ ಜಿಲ್ಲೆಗಳಲ್ಲಿ ಸರಿಯಾದ ಟೆಸ್ಟಿಂಗ್ ಬಗ್ಗೆ ರಾಜ್ಯ ಗಮನ ಹರಿಸಬೇಕು ಎಂದು ಸೂಚಿಸಿದ್ದಾರೆ.
ಕೋವಿಡ್ ಲಸಿಕೆ ಮತ್ತು ಪರೀಕ್ಷೆಯನ್ನು ಹೆಚ್ಚಿಸಬೇಕು. ಹೆಚ್ಚು ಪ್ರಕರಣ ವರದಿಯಾಗುವ ಜಿಲ್ಲೆಗಳು, ಪಾಸಿಟಿವಿಟಿ ರೇಟ್, ಕ್ಲಸ್ಟರ್ಗಳ ಮೇಲೆ ಸೂಕ್ತ ನಿಗಾ ಇಡಬೇಕು. ಐಎಲ್ಐ ಮತ್ತು ಸಾರಿ ಪ್ರಕರಣಗಳ ಮೇಲೆ ಸೂಕ್ಷ್ಮ ನಿಗಾ ಇಡಬೇಕು. ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಜೀನೋಮ್ ಸೀಕ್ವೆನ್ಸಿಂಗ್ ಅಗತ್ಯವಾಗಿ ಪಾಲಿಸಬೇಕು ಎಂದು ಕೇಂದ್ರ ಸೂಚಿಸಿದೆ.
ರಾಜ್ಯದಲ್ಲಿ ವರದಿಯಾಗುತ್ತಿರುವ ಒಟ್ಟು ಪ್ರಕರಣಗಳ ಸಂಖ್ಯೆಯಲ್ಲಿ ಬೆಂಗಳೂರಿನಿಂದಲೇ ಶೇಕಡಾ 90-95 ರಷ್ಟು ಪ್ರಕರಣಗಳು ವರದಿಯಾಗುತ್ತಿವೆ. ಆದರೂ ಆತಂಕ ಪಡುವೆ ಅಗತ್ಯ ಇಲ್ಲ. ಏಕೆಂದರೆ, ಕೋವಿಜ್ ಪರೀಕ್ಷಾ ಗುರಿ ಪೂರೈಸಿದರೂ, ಪ್ರಕರಣಗಳು ಹೆಚ್ಚುತ್ತಿವೆ. ಇದು ಹೆಚ್ಚಿನ ಜನಸಂಖ್ಯೆ, ಹವಾಮಾನ ಪರಿಸ್ಥಿತಿಗಳಲ್ಲಿನ ಬದಲಾವಣೆ ಮತ್ತು ಆಸ್ಪತ್ರೆಗಳಿಗೆ ದಾಖಲಾಗುತ್ತಿರುವವ ಸಂಖ್ಯೆ ಬಹಳ ಕಡಿಮೆ ಇದೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.