ಹಲವು ಸಮಸ್ಯೆಗಳ ನಡುವೆಯೂ ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಗೆ ರಾಷ್ಟ್ರೀಯ ಪ್ರಶಸ್ತಿ

ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡ ಹಲವಾರು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ಕಳಪೆ ಗುಣಮಟ್ಟ ಮತ್ತು ಅನುಷ್ಠಾನಕ್ಕಾಗಿ ವಿವಿಧ ವಲಯಗಳಿಂದ ತೀವ್ರ ಟೀಕೆಗೆ ಗುರಿಯಾಗುತ್ತಿರುವ ಸಂದರ್ಭದಲ್ಲೇ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಳಗಾವಿ: ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡ ಹಲವಾರು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ಕಳಪೆ ಗುಣಮಟ್ಟ ಮತ್ತು ಅನುಷ್ಠಾನಕ್ಕಾಗಿ ವಿವಿಧ ವಲಯಗಳಿಂದ ತೀವ್ರ ಟೀಕೆಗೆ ಗುರಿಯಾಗುತ್ತಿರುವ ಸಂದರ್ಭದಲ್ಲೇ ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆ ರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡಿದೆ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅರ್ಬನ್ ಅಫೇರ್ಸ್(NIUA) ಮತ್ತು ವಿಶ್ವಸಂಸ್ಥೆ ಏರ್ಪಡಿಸಿದ ಸರ್ವತೋಮುಖ ನಗರ ಸ್ಪರ್ಧೆಯ ಸ್ಮಾರ್ಟ್ ಸೊಲ್ಯೂಷನ್ಸ್ ಚಾಲೆಂಜ್‌ನಲ್ಲಿ ಬೆಳಗಾವಿ ಪ್ರಥಮ ಸ್ನಾನವನ್ನು ಗಳಿಸಿದೆ. ರಾಷ್ಟ್ರಮಟ್ಟದಲ್ಲಿ 100 ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬೆಳಗಾವಿ ಮೊದಲ ಬಹುಮಾನ ಪಡೆದಿದೆ. ಕರ್ನಾಟಕದ ಬೇರೆ ಯಾವುದೇ ನಗರಕ್ಕೆ ಪ್ರಶಸ್ತಿ ಸಿಕ್ಕಿಲ್ಲ.

ಪ್ಯಾನ್ ಸಿಟಿ ಇಂಪ್ಲಿಮೆಂಟೆಡ್ ಸೊಲ್ಯೂಷನ್ಸ್ ವಿಭಾಗದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರ ಹಾಗೂ ಅದರ ಬಹು ಆಯಾಮದ ಒಳಗೊಳ್ಳುವಿಕೆಗಾಗಿ ಬೆಳಗಾವಿ ಸ್ಮಾರ್ಟ್ ಸಿಟಿಯು ಮೊದಲ ಸ್ಥಾನವನ್ನು ಗಳಿಸಿದೆ.

ಆದರೆ, ಬೆಳಗಾವಿ ಸ್ಮಾರ್ಟ್ ಸಿಟಿಗೆ ಮೊದಲ ರ್ಯಾಂಕ್ ನೀಡಿದ ಮಾನದಂಡಗಳ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಆಮ್ ಆದ್ಮಿ ಪಕ್ಷ(ಎಎಪಿ) ಬೆಳಗಾವಿಗೆ ಇಂತಹ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡುವುದರ ಹಿಂದಿನ ತರ್ಕವನ್ನು ಪ್ರಶ್ನಿಸಿದೆ. ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಅತಿ ಹೆಚ್ಚು ಕಳಪೆ ಕಾಮಗಾರಿ ಮಾಡಲಾಗಿದೆ ಎಂದು ಆರೋಪಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com