ರಾಜ್ಯದಲ್ಲಿ ಈವರೆಗೆ ಮಂಕಿಪಾಕ್ಸ್ ಪತ್ತೆಯಾಗಿಲ್ಲ; ಗಡಿ ಭಾಗಗಳಲ್ಲಿ ಕಟ್ಟೆಚ್ಚರ- ಡಾ.ಕೆ.ಸುಧಾಕರ್

ರಾಜ್ಯದಲ್ಲಿ ಈವರೆಗೆ ಮಂಕಿಪಾಕ್ಸ್ ಪ್ರಕರಣ ಕಂಡುಬಂದಿಲ್ಲ, ಆರಂಭದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಡಾ.ಕೆ. ಸುಧಾಕರ್
ಡಾ.ಕೆ. ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಮಂಕಿಪಾಕ್ಸ್ ಪ್ರಕರಣ ಕಂಡುಬಂದಿಲ್ಲ, ಆರಂಭದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ವಿಶ್ವ ವ್ಯಾಸ್ಕ್ಯುಲರ್ ದಿನದ ಪ್ರಯುಕ್ತ ವ್ಯಾಸ್ಕ್ಯುಲರ್ ಸರ್ಜನ್ಸ್ ಅಸೋಸಿಯೇಷನ್  ಆಯೋಜಿಸಿದ್ದ ಜಾಗೃತಿ ನಡಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ  ಸಚಿವರು, ಮಂಕಿಪಾಕ್ಸ್ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಅಂತಾರಾಷ್ಟ್ರೀಯ ಪ್ರಯಾಣಿಕರು ರಾಜ್ಯಕ್ಕೆ ಬಂದಾಗ ಮಾರ್ಗಸೂಚಿಯನ್ನು ಪಾಲಿಸಬೇಕು. ಇಥಿಯೋಪಿಯಾದಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ಇರುವ ಅನುಮಾನದ ಮೇಲೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದರೆ, ಅದು ಮಂಕಿಪಾಕ್ಸ್ ಅಲ್ಲ, ಸ್ಮಾಲ್ ಪಾಕ್ಸ್ ಎಂದು ದೃಢಪಟ್ಟಿದೆ ಎಂದು ಅವರು ತಿಳಿಸಿದರು.

ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ  ಆರೋಗ್ಯ ಇಲಾಖೆ ಅಧಿಕಾರಿಗಳು 24 ಗಂಟೆಯೂ ಪಾಳಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೂರು ಬಗೆಯ ಪಾಳಿಯನ್ನು ನಿಗದಿ ಮಾಡಲಾಗಿದೆ.  ಬೇರೆ ರಾಜ್ಯಗಳಲ್ಲೂ ಈ ಪ್ರಕರಣ ಕಂಡುಬಂದರೂ ರಾಜ್ಯದಲ್ಲಿ ಈವರೆಗೆ  ಪ್ರಕರಣ ಕಂಡುಬಂದಿಲ್ಲ. ಸ್ಕಿನ್ ರಾಶನ್ ಸೇರಿದಂತೆ ಹಲವಾರು ಲಕ್ಷಣಗಳಿಂದ ಮಂಕಿಪಾಕ್ಸ್ ಗೊತ್ತಾಗುತ್ತದೆ. ಆದರೂ ಕೋವಿಡ್ ನಂತೆಯೇ ಇದು ಕೂಡಾ ಮೂರು ನಾಲ್ಕು ದಿನಗಳಾದ ನಂತರ  ಪತ್ತೆಯಾಗುತ್ತದೆ ಎಂದು ಅವರು ವಿವರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com