ತ್ರಿವರ್ಣ ಧ್ವಜವನ್ನು ವಿರೋಧಿಸಿದ್ದ ವೀರ ಸಾವರ್ಕರ್ ಅವರನ್ನು ಬಿಜೆಪಿ, ಆರ್‌ಎಸ್‌ಎಸ್ ಹೊಗಳುತ್ತಿವೆ: ಸಿದ್ದರಾಮಯ್ಯ

ತ್ರಿವರ್ಣ ಧ್ವಜವನ್ನು ವಿರೋಧಿಸಿದ ವೀರ ಸಾವರ್ಕರ್ ಅವರನ್ನು ಹೊಗಳುತ್ತಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮೈಸೂರು: ತ್ರಿವರ್ಣ ಧ್ವಜವನ್ನು ವಿರೋಧಿಸಿದ ವೀರ ಸಾವರ್ಕರ್ ಅವರನ್ನು ಹೊಗಳುತ್ತಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಂದು ರಾಷ್ಟ್ರಧ್ವಜಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಈಗ ‘ಹರ್ ಘರ್ ತಿರಂಗ’ ಹೆಸರಿನಲ್ಲಿ ನಾಟಕ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

'ಬಿಜೆಪಿಗೆ ರಾಷ್ಟ್ರಧ್ವಜ, ರಾಷ್ಟ್ರಗೀತೆ ಅಥವಾ ಭಾರತೀಯ ಸಂವಿಧಾನದ ಬಗ್ಗೆ ಯಾವುದೇ ಗೌರವವಿಲ್ಲ. ಪಕ್ಷವು ಭಾರತ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವ ಅಥವಾ 'ಆಜಾದಿ ಕಾ ಅಮೃತ್ ಮಹೋತ್ಸವ'ವನ್ನು ಆಚರಿಸುವ ಮೂಲಕ ರಾಜಕೀಯಗೊಳಿಸುತ್ತಿದೆ' ಎಂದು ಅವರು ಆರೋಪಿಸಿದರು.

ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾರಣಕ್ಕಾಗಿಯೇ ನಾವು, ಕಾಂಗ್ರೆಸ್ ಪಕ್ಷ 75ನೇ ವರ್ಷಾಚರಣೆಯನ್ನು ಗೌರವಯುತವಾಗಿ ಆಚರಿಸುತ್ತಿದ್ದೇವೆ ಎಂದರು.

‘ಕಾಂಗ್ರೆಸ್ ಅಧಿಕಾರಕ್ಕೆ ಬರಬಹುದೆಂದು ಬಿಜೆಪಿಗೆ ಭಯವಿದೆ’. ‘ಸಿದ್ದರಾಮೋತ್ಸವ ಕಳೆದು ಒಂದು ವಾರ ಕಳೆದಿದ್ದರೂ ಕೂಡ ಬಿಜೆಪಿ ನಾಯಕರು ಭಟದಿಂದಲೇ ಕಾರ್ಯಕ್ರಮವನ್ನು ಟೀಕಿಸುತ್ತಿದ್ದಾರೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com