ಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಡಿಕ್ಕಿ ಹೊಡೆದು 500 ಮೀಟರ್ ವರೆಗೆ ಎಳೆದೊಯ್ದ ಟ್ರಕ್! ವಿಡಿಯೋ...

ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ದೇವೇಂದ್ರ ಸಿಂಗ್ ಯಾದವ್ ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು 500 ಮೀಟರ್‌ಗೂ ಹೆಚ್ಚು ದೂರ ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ನಡೆದಿದೆ.
ಕಾರಿಗೆ ಢಿಕ್ಕಿ ಹೊಡೆದು ಎಳೆದೊಯ್ದ ಟ್ರಕ್
ಕಾರಿಗೆ ಢಿಕ್ಕಿ ಹೊಡೆದು ಎಳೆದೊಯ್ದ ಟ್ರಕ್

ಮೈನ್‌ಪುರಿ: ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ದೇವೇಂದ್ರ ಸಿಂಗ್ ಯಾದವ್ ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು 500 ಮೀಟರ್‌ಗೂ ಹೆಚ್ಚು ದೂರ ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ನಡೆದಿದೆ.

ದೇವೇಂದ್ರ ಸಿಂಗ್ ಯಾದವ್ ಈ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದು, ಭಾನುವಾರ ರಾತ್ರಿ ಅಪಘಾತದ ವೇಳೆ ಅವರು ಕಾರಿನಲ್ಲಿ ಒಬ್ಬರೇ ಇದ್ದರು ಎನ್ನಲಾಗಿದೆ. ಅದೃಷ್ಟವಶಾಕ್ ಅವರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ ಎನ್ನಲಾಗಿದೆ.

ಈ ಸಂಬಂಧ ದೂರು ದಾಖಲಾಗಿದ್ದು, ಟ್ರಕ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಮಣಿಪುರ ಎಸ್ಪಿ ಕಮಲೇಶ್ ದೀಕ್ಷಿತ್ ತಿಳಿಸಿದ್ದಾರೆ. 

ಏನಿದು ಘಟನೆ?
ಉತ್ತರ ಪ್ರದೇಶದ ಮೈನ್‌ಪುರಿಯ ಕರ್ಹಾಲ್ ರಸ್ತೆ ಮೂಲಕ ದೇವೇಂದ್ರ ಸಿಂಗ್ ಯಾದವ್ ಅವರು ತಮ್ಮ ನಿವಾಸಕ್ಕೆ ಹೋಗುತ್ತಿದ್ದರು. ಈ ವೇಳೆ ಮೈನ್‌ಪುರಿ ಸದರ್ ಕೊಟ್ವಾಲಿ ಪ್ರದೇಶದ ಭದಾವರ್ ಹೌಸ್ ಎದುರು ಯಾದವ್ ಕಾರಿಗೆ ಟ್ರಕ್ ಒಂದು ಢಿಕ್ಕಿ ಹೊಡೆದಿದೆ. ಮಾತ್ರವಲ್ಲದೇ ಅವರ ಕಾರನ್ನು ಸುಮಾರು 500 ಮೀಟರ್ ವರೆಗೂ ಎಳೆದೊಯ್ದಿದೆ. ಈ ಘಟನೆಗೆ ಸಾಕ್ಷಿಯಾಗಿದ್ದ ಸ್ಥಳೀಯರು ಕಾರಿನ ಹಿಂದೆಯೇ ಓಡಿ ದೇವೇಂದ್ರ ಸಿಂಗ್ ಯಾದವ್ ಅವರನ್ನು ರಕ್ಷಿಸಿದ್ದಾರೆ. ಪ್ರಸ್ತುತ ಯಾದವ್ ಅವರು ಮೈನ್‌ಪುರಿ ಸದರ್ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. 

ಮೈನ್‌ಪುರಿಯನ್ನು ಸಮಾಜವಾದಿ ಪಕ್ಷದ ಭದ್ರಕೋಟೆ ಎಂದು ಪರಿಗಣಿಸಲಾಗಿದೆ. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಪುತ್ರ ಅಖಿಲೇಶ್ ಯಾದವ್ ಮೈನ್‌ಪುರಿಯೊಂದಿಗೆ ಆಳವಾದ ಬಾಂಧವ್ಯವನ್ನು ಹೊಂದಿದ್ದಾರೆ. ಅಖಿಲೇಶ್ ಯಾದವ್ ಅವರು ಮೈನ್‌ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ. ಸಮಾಜವಾದಿ ಪಕ್ಷದ ರಾಜಕೀಯ ಪ್ರಾರಂಭದಲ್ಲಿ ಮೈನ್‌ಪುರಿಯು ಅತ್ಯಂತ ವಿಶಿಷ್ಟವಾದ ಕೊಡುಗೆಯನ್ನು ಹೊಂದಿದೆ. ಮುಲಾಯಂ ಸಿಂಗ್ ಮತ್ತು ಅಖಿಲೇಶ್ ಅವರೊಂದಿಗಿನ ಸಂಬಂಧದಿಂದಾಗಿ, ಇದು ರಾಜ್ಯದ ವಿಐಪಿ ಕ್ಷೇತ್ರಗಳಲ್ಲಿ ಒಂದಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com