ಕಾಲು ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದ ವಿದ್ಯಾರ್ಥಿನಿ ಸನ್ನಿಧಿ ಮೃತದೇಹ ಪತ್ತೆ

ಕಾಲು ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದ ವಿದ್ಯಾರ್ಥಿನಿ ಸನ್ನಿಧಿ ಮೃತದೇಹ ಕೊನೆಗೂ ಪತ್ತೆಯಾಗಿದೆ.
ಕಾಲುಸಂಕ ದಾಟುವಾಗ ಕೊಚ್ಚಿಹೋದ ಬಾಲಕಿ ಸನ್ನಿಧಿ
ಕಾಲುಸಂಕ ದಾಟುವಾಗ ಕೊಚ್ಚಿಹೋದ ಬಾಲಕಿ ಸನ್ನಿಧಿ

ಉಡುಪಿ: ಕಾಲು ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದ ವಿದ್ಯಾರ್ಥಿನಿ ಸನ್ನಿಧಿ ಮೃತದೇಹ ಕೊನೆಗೂ ಪತ್ತೆಯಾಗಿದೆ.

ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ನೀರುಪಾಲಾಗಿದ್ದ ಬಾಲಕಿ ಸನ್ನಿಧಿ ಮೃತದೇಹ ಪತ್ತೆಯಾಗಿದೆ. ಘಟನೆ ನಡೆದ ಜಾಗದಿಂದ ಸುಮಾರು 300 ಮೀಟರ್ ದೂರದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.  

ನಿರುಪಾಲಾಗಿದ್ದ ಬಾಲಕಿ ಸನ್ನಿಧಿಗಾಗಿ ಕಳೆದ ಎರಡು ದಿನಗಳಿಂದ ಅಗ್ನಿಶಾಮಕ ದಳ ಮೀನುಗಾರರು ಮತ್ತು ಸ್ಥಳೀಯರಿಂದ ಶೋಧಕಾರ್ಯ ನಡೆಯುತ್ತಿತ್ತು. ಇಂದು (ಆಗಸ್ಟ್​ 10) ಸನ್ನಿಧಿ  ಕಾಲು ಜಾರಿಬಿದ್ದ ಸ್ಥಳದಲ್ಲೇ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಇಂದು ಭೇಟಿ ನೀಡಿದ್ದ ಉಸ್ತುವಾರಿ ಸಚಿವ ಅಂಗಾರ ಮೃತ ಬಾಲಕಿಯ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ್ದರು.

ಏನಿದು ಘಟನೆ?
ಅಗಸ್ಟ್ 8 ರಂದು ಕಾಲು ಸಂಕ ದಾಟುವಾಗ 2ನೇ ತರಗತಿಯ ವಿದ್ಯಾರ್ಥಿನಿ ಕಾಲು ಜಾರಿ ನೀರಿಗೆ ಬಿದ್ದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬಿಜಮಕ್ಕಿ ಸಮೀಪ ನಡೆದಿತ್ತು. ಚಪ್ಪರಿಕೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದ 7 ವರ್ಷದ ಸನ್ನಿಧಿಗಾಗಿ ಹುಡುಕಾಟ ನಡದಿತ್ತು. ಸನ್ನಿಧಿ ಶಾಲೆ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ದುರಂತ ಸಂಭವಿಸಿತ್ತು. 

ನೀರುಪಾಲಾದ ವಿದ್ಯಾರ್ಥಿನಿ ಸನ್ನಿಧಿ ಬೊಳಂಬಳ್ಳಿ ಗ್ರಾಮದ ನಿವಾಸಿಯಾಗಿದ್ದು, ಮಕ್ಕಿಮನೆ ಪ್ರದೀಪ್ ಪೂಜಾರಿ, ಸುಮಿತ್ರಾ ದಂಪತಿ ಪುತ್ರಿ. ಬಾಲಕಿ ನಿವಾಸಕ್ಕೆ ಶಾಸಕ ಸುಕುಮಾರ್ ಶೆಟ್ಟಿ ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ನೆರೆ ಪರಿಸ್ಥಿತಿ ತಲೆದೋರಿದ್ದು, ಅನೇಕ ಕಡೆಗಳಲ್ಲಿ ಹಾನಿಗಳು ಉಂಟಾಗಿವೆ. ಅದರಂತೆ 60ಕ್ಕೂ ಹೆಚ್ಚು ನಾಡದೋಣಿಗಳು ಶಿಥಿಲಗೊಂಡಿರುವ ಕಳುಹಿತ್ಲು ಪ್ರದೇಶಕ್ಕೂ ಜಿಲ್ಲಾಧಿಕಾರಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮಾತನಾಡಿ, ಈಗಾಗಲೇ ಸಂಭವಿಸಿದ ನಷ್ಟದ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ. ಸೂಕ್ತ ಪರಿಹಾರ ಒದಗಿಸುವ ಪ್ರಯತ್ನ ನಡೆಸುವುದಾಗಿ ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com