ಕೋವಿಡ್-19: ರಾಜ್ಯದಲ್ಲಿ ಸಾವಿನ ಸಂಖ್ಯೆಯಲ್ಲಿ ಏರಿಕೆ; 1,680 ಹೊಸ ಪ್ರಕರಣ ಪತ್ತೆ, ಸೋಂಕಿಗೆ ಐವರು ಬಲಿ
ರಾಜ್ಯದಲ್ಲಿ ಕೆಲ ದಿನಗಳಿಂದ ಕಡಿಮೆ ಸಂಖ್ಯೆಯಲ್ಲಿದ್ದ ಕೋವಿಡ್-19 ಸಾವಿನ ಪ್ರಕರಣದಲ್ಲಿ ಮತ್ತೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಐವರು ಸೋಂಕಿತರು ಬಲಿಯಾಗಿದ್ದಾರೆ.
Published: 10th August 2022 08:03 PM | Last Updated: 10th August 2022 08:11 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಕಡಿಮೆ ಸಂಖ್ಯೆಯಲ್ಲಿದ್ದ ಕೋವಿಡ್-19 ಸಾವಿನ ಪ್ರಕರಣದಲ್ಲಿ ಮತ್ತೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಐವರು ಸೋಂಕಿತರು ಬಲಿಯಾಗಿದ್ದಾರೆ.
ರಾಯಚೂರಿನಲ್ಲಿ ಇಬ್ಬರು, ದಕ್ಷಿಣ ಹಾಗೂ ಉತ್ತರ ಕನ್ನಡ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ ಒಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಸೋಂಕಿನಿಂದ ರಾಜ್ಯದಲ್ಲಿ ಒಟ್ಟಾರೇ ಮೃತಪಟ್ಟವರ ಸಂಖ್ಯೆ 40,128ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿಂದು 1,680 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 40,24,394ಕ್ಕೆ ಏರಿಕೆಯಾಗಿದೆ. ಒಟ್ಟು 10,351 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಹೆಚ್ಚು ವೇಗವಾಗಿ ಹರಡಬಲ್ಲ ಕೊರೊನಾ ವೈರಾಣು ರೂಪಾಂತರ ಓಮೈಕ್ರಾನ್‌ನ ಉಪತಳಿ ದೆಹಲಿಯಲ್ಲಿ ಪತ್ತೆ!
ಸೋಂಕಿನಿಂದ 2,114 ಮಂದಿ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 24,504 ಟೆಸ್ಟ್ ನಡೆಸಲಾಗಿದ್ದು, ಪಾಸಿಟಿವಿಟಿ ಪ್ರಮಾಣ ಶೇ.6.85ಕ್ಕೆ ಏರಿಕೆಯಾಗಿದೆ. ಮರಣ ಪ್ರಮಾಣ ಶೇ. 0.29 ರಷ್ಟಿದೆ.
ಬೆಂಗಳೂರಿನಲ್ಲಿ 1,058 ಹೊಸ ಪ್ರಕರಣ ಪತ್ತೆಯಾಗಿದ್ದು, 1,342 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಸದ್ಯ 7,049 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Today's Media Bulletin 10/08/2022
— K'taka Health Dept (@DHFWKA) August 10, 2022
Please click on the link below to view bulletin.https://t.co/9QNmgVKHa6 @PMOIndia @MoHFW_INDIA @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mangalurucorp @DDChandanaNews @PIBBengaluru @KarnatakaVarthe pic.twitter.com/QTYpok38G3