ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ: ಸಚಿವ ಆರ್ ಅಶೋಕ್; ಶಾಸಕ ಜಮೀರ್ ವಿರುದ್ಧ ಶ್ರೀರಾಮ ಸೇನೆ ದೂರು

ವಿವಾದದ ಕೇಂದ್ರ ಬಿಂದುವಾಗಿದ್ದ ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದ ವತಿಯಿಂದಲೇ ಧ್ವಜಾರೋಹಣ ಮಾಡಲಾಗುತ್ತದೆಯೇ ಹೊರತು ಬೇರಾರಿಗೂ ಅವಕಾಶವಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಘೋಷಣೆ ಮಾಡಿದ್ದಾರೆ.
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ: ಸಚಿವ ಆರ್ ಅಶೋಕ್; ಶಾಸಕ ಜಮೀರ್ ವಿರುದ್ಧ ಶ್ರೀರಾಮ ಸೇನೆ ದೂರು

ಬೆಂಗಳೂರು: ವಿವಾದದ ಕೇಂದ್ರ ಬಿಂದುವಾಗಿದ್ದ ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದ ವತಿಯಿಂದಲೇ ಧ್ವಜಾರೋಹಣ ಮಾಡಲಾಗುತ್ತದೆಯೇ ಹೊರತು ಬೇರಾರಿಗೂ ಅವಕಾಶವಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಘೋಷಣೆ ಮಾಡಿದ್ದಾರೆ.

ದೇಶದ ಸ್ವಾತಂತ್ರ್ಯ ಅಮೃತಮಹೋತ್ಸವಕ್ಕೆ (Azadi Ka Amrit Mahotsav) ರಾಜ್ಯ ಸರ್ಕಾರ ವಿವಾದವೊಂದನ್ನು ಸದ್ಯಕ್ಕೆ ಇತ್ಯರ್ಥ ಪಡಿಸಿದ್ದು, ಈ ಸಂಬಂಧ, ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ ನಡೆಯಲಿದೆ. ಬೇರೆ ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಕಂದಾಯ ಸಚಿವ ಅಶೋಕ್ ಘೋಷಣೆ ಮಾಡಿದ್ದಾರೆ. 

ಚಾಮರಾಜಪೇಟೆ ಮೈದಾನದ ಸಂಬಂಧ ಕಂದಾಯ ಸಚಿವ ಅಶೋಕ್​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಚಾಮರಾಜಪೇಟೆ ಮೈದಾನದಲ್ಲಿ ಯಾವ ಸಂಘ-ಸಂಸ್ಥೆಗಳಿಗೂ ಧ್ವಜಾರೋಹಣಕ್ಕೆ ಅವಕಾಶವಿಲ್ಲ. ಸ್ಥಳೀಯ ಶಾಸಕ ಜಮೀರ್ ಅಹ್ಮದ್​​ಗೂ ಅವಕಾಶವಿರುವುದಿಲ್ಲ. ಸರ್ಕಾರದಿಂದಲೇ ಧ್ವಜಾರೋಹಣ ಮಾಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಅಶೋಕ್ ಸ್ಪಷ್ಟಪಡಿಸಿದ್ದಾರೆ.

ಸಹಾಯಕ ಆಯುಕ್ತರಿಂದ ಧ್ವಜಾರೋಹಣ
ಬೆಂಗಳೂರಿನ ಉತ್ತರ ತಾಲ್ಲೂಕಿನ ಸಹಾಯಕ ಆಯುಕ್ತರು ರಾಷ್ಟ್ರ ಧ್ವಜಾರೋಹಣ ಮಾಡಲಿದ್ದು, ರಾಷ್ಟ್ರಧ್ವಜದ ನೀತಿ ನಿಯಮಗಳಡಿ ಎಲ್ಲರೂ ಭಾಗವಹಿಸಬಹುದು. ಆಗಸ್ಟ್​ 15ರಂದು ಸಹಾಯಕ ಆಯುಕ್ತರಿಂದಲೇ ಧ್ವಜಾರೋಹಣ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇವೆ. ಕಂದಾಯ ಇಲಾಖೆಗೆ ಸೇರಿದ ಸ್ವತ್ತು ಅಂತಾ ತೀರ್ಪು ಬಂದಿದೆ. ಹೀಗಾಗಿ ನಮ್ಮ ಇಲಾಖೆಯ ಸುಪರ್ದಿಯಲ್ಲೇ ಆಗಸ್ಟ್​ 15ರಂದು ಸಹಾಯಕ ಆಯುಕ್ತರಿಂದಲೇ ಧ್ವಜಾರೋಹಣ ನಡೆಯಲಿದೆ. ಶಿಷ್ಟಾಚಾರದ ಪ್ರಕಾರ ಸ್ಥಳೀಯ ಶಾಸಕ, ಸಂಸದರು ಬರಬಹುದು. ಅಲ್ಲಿ ಭಾರತ ಮಾತಾಕೀ ಜೈ, ವಂದೇ ಮಾತರಂ ಘೋಷಣೆ ಮಾತ್ರ ಕೇಳಿಬರುತ್ತದೆ. ಬೇರೆ ಯಾವುದೇ ಘೋಷಣೆ ಮಾಡಬಾರದು ಎಂದು ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ.

ವೇದಿಕೆ ಮೇಲೆ ಸಂಘಟನೆಯವರಿಗೆ ಅವಕಾಶವಿಲ್ಲ. ಈದ್ಗಾ ಮೈದಾನ ಅಂತಾ ಇನ್ಮುಂದೆ ಇರುವುದಿಲ್ಲ. ಅದು ಗುಟ್ಟಹಳ್ಳಿ, ಚಾಮರಾಜಪೇಟೆ ಕಂದಾಯ ಇಲಾಖೆ ಅಂತಾ ಇರಲಿದೆ. ಸದ್ಯ ಕಂದಾಯ ಇಲಾಖೆಗೆ ಆ ಸ್ವತ್ತು ಸೇರಿದೆ. ಹೀಗಾಗಿ ಅದನ್ನ ಮುಂದೆ ಬಿಬಿಎಂಪಿಗೆ ಕೊಡಬೇಕಾ, ಬಿಡಿಎಗೆ ಕೊಡಬೇಕಾ ಅಥವಾ ಕಂದಾಯ ಇಲಾಖೆಯಲ್ಲೇ ಉಳಿಸಿಕೊಳ್ಳಬೇಕಾ ಅನ್ನೋದನ್ನ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ ಎಂದು ಅಶೋಕ್ ಹೇಳಿದ್ದಾರೆ.

ಆ ರೂಲ್ಸ್​​ ಪಾಲನೆಯನ್ನು ಪೊಲೀಸರು ನೋಡಿಕೊಳ್ಳಲಿದ್ದಾರೆ. ಹೆಚ್ಚು ಕಡಿಮೆ ಯಾರಾದ್ರೂ ಗಲಾಟೆ ಮಾಡಿದ್ರೆ ಕಾನೂನು ಕ್ರಮ ಕೈಗೊಳುತ್ತಾರೆ. ಇದನ್ನು ಎಲ್ಲರೂ ಸ್ವಾಗತಿಸುತ್ತಾರೆ ಅನ್ನೋ ಭರವಸೆ ಇದೆ. ಯಾರಿಗಾದರೂ ಹಕ್ಕಿನ ಬಗ್ಗೆ ಆಕ್ಷೇಪವಿದ್ದರೇ ಕಂದಾಯ ಇಲಾಖೆಗೆ ದೂರು ಕೊಡಬಹುದು. ಯಾವುದೇ ಕೋರ್ಟ್ ಹಕ್ಕನ್ನ ಪಾಲಿಕೆಗಾಗಲಿ ಅಥವಾ ವಕ್ಫ್ ಬೋರ್ಡ್​ಗೆ ಕೊಟ್ಟಿಲ್ಲ. ಅದು ಕಂದಾಯ ಇಲಾಖೆಗೆ ಸೇರಿದ್ದು ಅಂತಾ ನೀಡಲಾಗಿದೆ. ಹೀಗಾಗಿ ನಾನು ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಖಚಿತಪಡಿಸಿಕೊಂಡಿದ್ದಾರೆ. ಸುಪ್ರೀಂಕೋರ್ಟ್ ಆದೇಶವನ್ನ ಪಾಲನೆ ಮಾಡುತ್ತೇವೆ. ಅದರಂತೆ ಅಲ್ಲಿ ಯಾವುದನ್ನ ತೆರುವುಗೊಳಿಸೋದು, ನಿರ್ಮಿಸೋದು ಇರಲ್ಲ. ಸದ್ಯ ಧ್ವಜಾರೋಹಣವನ್ನ ಮಾಡುತ್ತೇವೆ. ಮುಂದೆ ಧಾರ್ಮಿಕ ಚಟುವಟಿಕೆಗಳಿಗೆ ಕೊಡಬೇಕಾ!? ಬೇಡ್ವಾ ಅನ್ನೋದನ್ನ ಸಿಎಂ ಜೊತೆ ಚರ್ಚೆ ಮಾಡುತ್ತೇನೆ. ವರ್ಷಕ್ಕೆ ಎರಡು ಬಾರಿ ಪ್ರಾರ್ಥನೆ ಮಾಡಲು ಅವಕಾಶ ನಿಡುವುದರ ಬಗ್ಗೆಯೂ ಚಿಂತಿಸಲಾಗುವುದು ಎಂದು ಸಚಿವರು ಹೇಳಿದರು.

ಸ್ಥಳೀಯ ಶಾಸಕ ಜಮೀರ್ ಗೆ ಭಾರಿ ಮುಖಭಂಗ
ಇನ್ನು ವಿವಾದಿತ ಮೈದಾನದ ಮೇಲೆ ನಿಯಂತ್ರಣ ಸಾಧಿಸುವ ಸ್ಥಳೀಯ ಶಾಸಕ ಜಮೀರ್ ಅಹ್ಮದ್ ಖಾನ್ ಮತ್ತು ವಕ್ಫ್ ಬೋರ್ಡ್ ಹೋರಾಟಕ್ಕೆ ಈ ಮೂಲಕ ಹಿನ್ನಡೆಯುಂಟಾಗಿದ್ದು, ಮೈದಾನದ ವಿಚಾರದ ಮೂಲಕ ಶಾಸಕ ಜಮೀರ್ ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ತುತ್ತಾಗಿದ್ದರು. ಅಲ್ಲದೇ ತಮ್ಮದೇ ಹೇಳಿಕೆಗಳ ಮೂಲಕ ವಿವಾದದ ಕೇಂದ್ರಬಿಂದುವಾಗಿದ್ದರು. 

ಶಾಸಕ ಜಮೀರ್ ವಿರುದ್ಧ ದೂರು
ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಿಸಲು ಬಿಡಲ್ಲ ಎಂದಿದ್ದ ಜಮೀರ್​ ವಿರುದ್ಧ ಶ್ರೀರಾಮ ಸೇನೆ ಬೆಂಗಳೂರು ಘಟಕ ದೂರು ನೀಡಿತ್ತು. ಗಣೇಶ ಉತ್ಸವ ಆಚರಣೆಗೂ ಬಿಡಲ್ಲ ಎಂದಿದ್ದ ಶಾಸಕ ಜಮೀರ್ ಹೇಳಿಕೆ ಖಂಡಿಸಿ ಪೊಲೀಸ್ ಆಯುಕ್ತರಿಗೂ ದೂರು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ, ಶಾಸಕ ಜಮೀರ್ ವಿರುದ್ಧ ಕ್ರಮ ಕೈಗೊಳ್ಳುವಂಗತೆ ಶ್ರೀರಾಮಸೇನೆ ಆಗ್ರಹಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com