ನಾಳೆಯಿಂದ ಆಗಸ್ಟ್ 25 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಕೆಎಸ್ ಆರ್ ಟಿಸಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ನಾಳೆಯಿಂದ ಆಗಸ್ಟ್ 25ರವರೆಗೆ ನಡೆಸಲಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ನಾಳೆಯಿಂದ ಆಗಸ್ಟ್ 25ರವರೆಗೆ ನಡೆಸಲಿದೆ. 

ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಬಸ್‌ ಸೌಲಭ್ಯವನ್ನು ಕೆಎಸ್ ಆರ್ ಟಿಸಿ ಕಲ್ಪಿಸಲಿದೆ. 

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳುವಾಗ ಮತ್ತು ಹಿಂದಿರುವಾಗ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ, ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿದೆ. 

2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಸಕಲ ಸಿದ್ಧತೆಯನ್ನು ಸಹ ಮಾಡಿಕೊಳ್ಳುತ್ತಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು, ತಾವು ಅಧ್ಯಯನ ಮಾಡಿದ ಶಾಲೆಗಳಿಗೆ ತೆರಳಿ ಪ್ರವೇಶ ಪತ್ರವನ್ನು ಪಡೆಯಬಹುದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com