ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27ಕ್ಕೆ ಅನುಮೋದನೆ ನೀಡಲಾಗಿದೆ.
ಮುಖ್ಯಮಂತ್ರಿ ಬೊಮ್ಮಾಯಿ
ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27ಕ್ಕೆ ಅನುಮೋದನೆ ನೀಡಲಾಗಿದೆ.

ಕರ್ನಾಟಕ ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ನಿಯಮಗಳು 2022ಕ್ಕೆ ಅನುಮೋದನೆ ನೀಡಲಾಗಿದೆ. ಬೆಂಗಳೂರಿನ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಆವರಣದಲ್ಲಿ ರೂ. 90.00 ಕೋಟಿ ಅಂದಾಜು ವೆಚ್ಚದಲ್ಲಿ ನೂತನ ಅಭಿವೃದ್ಧಿ ಭವನ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಟ್ವೀಟರ್ ಖಾತೆಯಲ್ಲಿ ತಿಳಿಸಲಾಗಿದೆ.

ಡಾ. ಡಿಎಂ. ನಂಜುಂಡಪ್ಪ ಸಮಿತಿ ವರದಿ ಶಿಫಾರಸ್ಸಿನಂತೆ ಪ್ರಾದೇಶಿಕ ಅಸಮತೋಲನ ನಿವಾರಿಸಲು ಜಾರಿಯಲ್ಲಿರುವ ವಿಶೇಷ ಅಭಿವೃದ್ಧಿ ಯೋಜನೆ ಕಲಾವಧಿ ಮುಗಿದಿರುವುದರಿಂದ ಹೊಸ ಅಭಿವೃದ್ಧಿ ಆಕಾಂಕ್ಷಿ ತಾಲೂಕಗಳ ಯೋಜನೆಯನ್ನು ನೀತಿ ಆಯೋಗ ಸೂಚಿಸಿರುವ 49 ಸೂಚಕಗಳನ್ನು ಅಳವಡಿಸಿ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಲಾಗಿದೆ. 

ರಾಜ್ಯ ಜಲ ನೀತಿ 2022ಕ್ಕೆ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಆಂಧ್ರಪ್ರದೇಶದ ಪ್ರಸಿದ್ಧ .ಯಾತ್ರಾ ಸ್ಥಳ ಶ್ರೀ ಶೈಲದಲ್ಲಿ ಯಾತ್ರಿ ನಿವಾಸ ಸಂಕೀರ್ಣ ಕಟ್ಟಡವನ್ನು ರೂ. 85 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com