ಬಳ್ಳಾರಿಯಲ್ಲಿ ವ್ಯಕ್ತಿ ಮೇಲೆ ಹಲ್ಲೆ, ಪಿಎಸ್ ಐ ಅಮಾನತು, ಇಲಾಖಾ ತನಿಖೆಗೆ ಆದೇಶ

ವ್ಯಕ್ತಿಯೊಬ್ಬರ  ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲೆ ಕುರುಗೋಡು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಹಲ್ಲೆ ನಡೆಸುತ್ತಿರುವ ಪಿಎಸ್ ಐ ಚಿತ್ರ
ಹಲ್ಲೆ ನಡೆಸುತ್ತಿರುವ ಪಿಎಸ್ ಐ ಚಿತ್ರ

ಹುಬ್ಬಳ್ಳಿ: ವ್ಯಕ್ತಿಯೊಬ್ಬರ  ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲೆ ಕುರುಗೋಡು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಪೊಲೀಸ್ ಅಧಿಕಾರಿ ಮಣಿಕಂಠ ವ್ಯಕ್ತಿಯೊಬ್ಬರನ್ನು ಥಳಿಸುವ ವಿಡಿಯೋ ವೈರಲ್ ಆಗಿತ್ತು. ಇದರಿಂದಾಗಿ ಹಿರಿಯ ಅಧಿಕಾರಿಗಳು ಆತನನ್ನು ಅಮಾನತು ಮಾಡಿದ್ದಾರೆ.ಯಾವುದೇ ಕಾರಣವಿಲ್ಲದೆ ಗಂಗಾಧರ ಎಂಬ ವ್ಯಕ್ತಿಯ ಮೇಲೆ ಪೊಲೀಸ್ ಅಧಿಕಾರಿಗಳು ಹಲ್ಲೆ ನಡೆಸಿದ ನಂತರ ಅಲ್ಲಿನ ನಿವಾಸಿಗಳು ಅಧಿಕಾರಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಪಿಎಸ್ ಐ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ.

ಹದಿನೈದು ದಿನಗಳ ಹಿಂದೆ ಕೋಳೂರು ಗ್ರಾಮದಲ್ಲಿ ಪೊಲೀಸರ ಲಾಠಿ ಪ್ರಹಾರದಲ್ಲಿ ಗಂಗಾಧರ್ ಗಾಯಗೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದ  ಕೆರೆಯ ಬಳಿ ಗ್ರಾಮಸ್ಥರು ಜಮಾಯಿಸಿದ್ದರು. ಗುಂಪನ್ನು ಚದುರಿಸಲು ಪಿಎಸ್‌ಐ ಲಾಠಿ ಪ್ರಹಾರ ನಡೆಸಿದ್ದು, ಈ ವೇಳೆ ಗಂಗಾಧರ್ ಅವರ ಕಾಲು ಮುರಿದಿದೆ. ಒಂದು ವಾರದ ನಂತರ ಸಾಮಾಜಿಕ ಮಾಧ್ಯಮದಲ್ಲಿ ಲೈವ್‌ಗೆ ಬಂದಿದ್ದ ಗಂಗಾಧರ್ ಪೊಲೀಸ್ ಅಧಿಕಾರಿಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. 

ಒಂದು ವಾರದ ನಂತರ ಕುರುಗೋಡು ಕಾಂಗ್ರೆಸ್ ಪಕ್ಷದ ಸದಸ್ಯರು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿ ಪಟ್ಟಣದಲ್ಲಿ ಭಿತ್ತಿಪತ್ರಗಳನ್ನು ಹಾಕಿದ್ದರು. ಪೋಸ್ಟರ್‌ನಲ್ಲಿ ಪಿಎಸ್‌ಐ ಜೊತೆಗೆ ರಾಜಕಾರಣಿಗಳು ಮತ್ತು ಇತರ ವ್ಯಕ್ತಿಗಳ ಫೋಟೋ ಇತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು, ಸರ್ಕಾರಿ ನೌಕರರು ಪಕ್ಷದ ಯಾವುದೇ ಪೋಸ್ಟರ್‌ನಲ್ಲಿ ಭಾಗವಹಿಸುವಂತಿಲ್ಲ ಎಂದು ಹೇಳಿದರು. ಕೆಲ ಸದಸ್ಯರು ನಗರದ ಹಲವೆಡೆ ಪೋಸ್ಟರ್ ತೆಗೆಸಿದರು.

ಇದರಿಂದ ಸಿಟ್ಟಿಗೆದ್ದ ಪಿಎಸ್‌ಐ ಗಂಗಾಧರ್‌ ಅವರನ್ನು ಠಾಣೆಗೆ ಕರೆಸಿಕೊಂಡಿದ್ದಾರೆ.  ಗಂಗಾಧರ್ ಅವರು ಪಿಎಸ್‌ಐಗೆ ಕ್ಷಮೆಯಾಚಿಸಿದ್ದಾರೆ ಮತ್ತು ಅವರ ಸಾಮಾಜಿಕ ಮಾಧ್ಯಮ ಖಾತೆಯಿಂದ ವೀಡಿಯೊವನ್ನು ಅಳಿಸಿದ್ದಾರೆ. ಆದರೆ ಅದೇ ಸಮಯದಲ್ಲಿ ಕಾಂಗ್ರೆಸ್ ಸದಸ್ಯರು ಮತ್ತು ಇತರ ನಿವಾಸಿಗಳು ಪೊಲೀಸ್ ಠಾಣೆ ಬಳಿ ಜಮಾಯಿಸಿ ಬಿಜೆಪಿ ಸದಸ್ಯರು ಸ್ವಾತಂತ್ರ್ಯ ದಿನಾಚರಣೆಯ ಪೋಸ್ಟರ್‌ಗಳನ್ನು ತೆಗೆದಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.  

ಪ್ರತಿಭಟನಾಕಾರರು ಪಿಎಸ್‌ಐ ಅವರನ್ನು ಪ್ರಶ್ನಿಸಿದಾಗ ಗಂಗಾಧರ್ ಫೋಟೋ ಹಾಕಿದ್ದು, ತನಗೆ ಯಾವುದೇ ರಾಜಕೀಯ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಪಿಎಸ್ ಐ ಹೇಳಿದ್ದಾರೆ. ಫೋಟೋ ಹಾಕಿಲ್ಲ ಎಂದು ಗಂಗಾಧರ್ ಮುಗ್ಧತೆ ಮೆರೆದಿದ್ದಾರೆ. ಈ ವೇಳೆ ಸಿಟ್ಟಿಗೆದ್ದ ಪಿಎಸ್‌ಐ ಗಂಗಾಧರ್‌ಗೆ ಪದೇ ಪದೇ ಕಪಾಳಮೋಕ್ಷ ಮಾಡಿದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದರು.

ಘಟನೆಯ ನಂತರ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಗೆ  ಬಳ್ಳಾರಿ ಎಸ್ಪಿ ಸೈದುಲು ಅದಾವತ್ ಹೇಳಿದ್ದಾರೆ. ಸಾರ್ವಜನಿಕರ ಮೇಲೆ ದೌರ್ಜನ್ಯ ಎಸಗಿರುವುದು ತಪ್ಪು, ಅಧಿಕಾರಿ ವಿರುದ್ಧ ಇಲಾಖಾ ವಿಚಾರಣೆ ನಡೆಸಲಾಗಿದೆ, ಕುರುಗೋಡು ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ವಿರುದ್ಧ ದಾಖಲಾಗಿರುವ ದೂರಿನ ಬಗ್ಗೆಯೂ ಪೊಲೀಸರು ವಿಚಾರಣೆ ನಡೆಸಲಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com