ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 1,108 ಸೇರಿ ರಾಜ್ಯದಲ್ಲಿ 1,837 ಮಂದಿಗೆ ಪಾಸಿಟಿವ್; 3 ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,837 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,31,283ಕ್ಕೆ ಏರಿಕೆಯಾಗಿದೆ.
ಕೋವಿಡ್-19 ಸಾಂದರ್ಭಿಕ ಚಿತ್ರ
ಕೋವಿಡ್-19 ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,837 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,31,283ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಮೂರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,147ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 1,108 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,51,948ಕ್ಕೆ ಏರಿಕೆಯಾಗಿದೆ. ಆದರೆ ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1,017 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,80,172ಕ್ಕೆ ಏರಿಕೆಯಾಗಿದೆ. ಇನ್ನು 10,922 ಸಕ್ರಿಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com