ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ನೆಹರೂ ಫೋಟೋ ಮಾಯ!: ಕಾಂಗ್ರೆಸ್ ತೀವ್ರ ಆಕ್ಷೇಪ, ಆಕ್ರೋಶ ಹೊರಹಾಕಿದ ನಾಯಕರು

75ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಹರ್ ಘರ್ ತಿರಂಗ ಅಭಿಯಾನ ಭಾಗವಾಗಿ ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿರುವ ಜಾಹೀರಾತಿನಲ್ಲಿ ಮುದ್ರಿಸಿರುವ ಸ್ವಾತಂತ್ರ್ಯ ಹೋರಾಟಗಾರರ ಫೋಟೋಗಳಲ್ಲಿ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರೂ ಫೋಟೋವನ್ನು ಹಾಕಿಲ್ಲ. ಇದು ಕಾಂಗ್ರೆಸ್ ನಾಯಕರ ಸಿಟ್ಟು, ಆಕ್ರೋಶಕ್ಕೆ ಕಾರಣವಾಗಿದೆ.
ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳು
ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳು

ಬೆಂಗಳೂರು: 75ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಹರ್ ಘರ್ ತಿರಂಗ ಅಭಿಯಾನ ಭಾಗವಾಗಿ ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿರುವ ಜಾಹೀರಾತಿನಲ್ಲಿ ಮುದ್ರಿಸಿರುವ ಸ್ವಾತಂತ್ರ್ಯ ಹೋರಾಟಗಾರರ ಫೋಟೋಗಳಲ್ಲಿ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರೂ ಫೋಟೋವನ್ನು ಹಾಕಿಲ್ಲ. ಇದು ಕಾಂಗ್ರೆಸ್ ನಾಯಕರ ಸಿಟ್ಟು, ಆಕ್ರೋಶಕ್ಕೆ ಕಾರಣವಾಗಿದೆ.

ಜವಹರಲಾಲ್ ನೆಹರೂರವರಿಗೆ ಬಿಜೆಪಿ ಅವಮಾನ ಮಾಡಿದೆ ಎಂದು ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವರಿಗೆ ಆದ ಅವಮಾನ’ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ಎಸ್.ಆರ್.ಬೊಮ್ಮಾಯಿ ಅವರ ರಾಜಕೀಯ ಗುರು ಎಂ.ಎನ್.ರಾಯ್ ಅವರೂ ಸಹ ನೆಹರೂ ಅವರ ಬೆಂಬಲಿಗರಾಗಿದ್ದರು. ಇಂಥ ನೆಹರೂ ಅವರನ್ನು ಮುಖ್ಯಮಂತ್ರಿ ಬೊಮ್ಮಾಯಿ ಮರೆತಿರುವುದು ದುರದೃಷ್ಟಕರ ಎಂದಿದ್ದಾರೆ. 

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮೊದಲ ಪ್ರಧಾನಿ ನೆಹರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ. ಈಗಿನ ಸಿಎಂ ಬೊಮ್ಮಾಯಿ ಅವರ ತಂದೆ ಕೂಡ ಸಿಎಂ ಆಗಿದ್ದರು. ಹಾಗಂತ ಎಸ್​ಆರ್.ಬೊಮ್ಮಾಯಿ ಸಿಎಂ ಆಗಿಲ್ಲ ಅಂತ ಹೇಳಲು ಆಗುತ್ತಾ ಇತಿಹಾಸ ತಿರುಚಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರದ ಜಾಹೀರಾತಿನಲ್ಲಿ ನೆಹರೂ ಫೋಟೋ ಹಾಕ್ಬೇಕಿತ್ತು. ಸಿಎಂ ಆರ್​ಎಸ್​ಎಸ್​ ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿದ್ದಾರೆ, ಇದು ಬಿಜೆಪಿಯ ಜಾಹೀರಾತು ಅಲ್ಲವಲ್ಲವೇ, ಬೊಮ್ಮಾಯಿಯವರು ಆರ್ ಎಸ್ ಎಸ್ ಮುಖ್ಯಮಂತ್ರಿಯಂತೆ ವರ್ತನೆ ಮಾಡಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿರಲು ಲಾಯಕ್ಕಿಲ್ಲದ ಬೊಮ್ಮಾಯಿಯವರು ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com